ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನ; ನಾಳೆ ಸಾಗರ ಟೌನ್ ಬಂದ್
Team Udayavani, Jan 9, 2023, 1:26 PM IST
ಶಿವಮೊಗ್ಗ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸೋಮವಾರ (ಜ.9 ರಂದು) ನಡೆದಿದೆ.
ಸಾಗರ ನಗರ ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಎಂಬುವವರ ಮೇಲೆ ಸಮೀರ್ ಎನ್ನುವ ಯುವಕ ಸಾಗರ ನಗರದ ಬಿ.ಹೆಚ್. ರಸ್ತೆಯ ಬಸ್ ನಿಲ್ದಾಣ ಸಮೀಪ ಮಚ್ಚು ಬೀಸಿದ್ದಾನೆ. ಕೂದಲೆಳೆ ಅಂತರದಲ್ಲಿ ಮಚ್ಚಿನ ದಾಳಿಯಿಂದ ಸುನೀಲ್ ಪಾರಾಗಿದ್ದಾರೆ.
ಶಿವಮೊಗ್ಗದಲ್ಲಿ ನಿನ್ನೆ ನಡೆದ ಶೌರ್ಯ ಸಂಚಲನ ಯಾತ್ರೆಯಲ್ಲಿ ಸುನೀಲ್ ಭಾಗಿಯಾಗಿದ್ದ, ಯಾತ್ರೆ ಹೋಗುವ ವೇಳೆ ಸುನೀಲ್ ಅವರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಮೀರ್, ಅದೇ ನೆಪವನ್ನಿಟ್ಟುಕೊಂಡು ಸುನೀಲ್ ಮೇಲೆ ಹಲ್ಲೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ: ಸ್ಯಾಂಟ್ರೋ ರವಿಯ ವಿರುದ್ಧ ಕಠಿಣ ಕ್ರಮ ಕೈಗೊಂಡು ತಕ್ಕ ಪಾಠವನ್ನು ಕಲಿಸುತ್ತೇವೆ: ಬಿಎಸ್ ವೈ
ಮಚ್ಚು ಬೀಸಿರುವ ದೃಶ್ಯ ಸಿಸಿಟಿಟವಿಯಲ್ಲಿ ಸೆರೆಯಾಗಿದ್ದು, ಘಟನೆ ಬಳಿಕ ಸಮೀರ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ಸಾಗರ ಪೊಲೀಸ್ ಠಾಣೆಯಲ್ಲಿ ಸುನೀಲ್ ದೂರು ನೀಡಿದ್ದಾರೆ.
ಇದರ ಬೆನ್ನಲ್ಲೇ ಸಾಗರ ಟೌನ್ ಪೊಲೀಸ್ ಠಾಣೆಯ ಮುಂಭಾಗ ಕಾರ್ಯಕರ್ತರ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಸುನೀಲ್ ಮೇಲೆ ಹಲ್ಲೆ ಮಾಡಿದವನ ಬಂಧಿಸುವಂತೆ, ಪ್ರತಿಭಟನಾಕಾರರ ಒತ್ತಾಯಿಸಿದ್ದಾರೆ.
ಭಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆಗೆ ಯತ್ನ ಖಂಡಿಸಿ ನಾಳೆ ಸಾಗರ ಟೌನ್ ಬಂದ್ ಗೆ ಕರೆ ಹಿಂದೂಪರ ಸಂಘಟನೆಗಳು ಕರೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.