Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ
Team Udayavani, Dec 28, 2024, 12:55 PM IST
ಶಿವಮೊಗ್ಗ: ಭದ್ರಾವತಿಯಲ್ಲಿ ಕರಡಿಗಳ ಹಾವಳಿ ಮುಂದುವರಿದಿದೆ ಎಂಬುದಕ್ಕೆ ಸಾಕ್ಷಿ ಎಂಬಂತೆ ರಾತ್ರಿ ಮನೆಬಾಗಿಲಲ್ಲೆ ಕರಡಿಯೊಂದು ಹಾದು ಹೋದ ದೃಶ್ಯವೊಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಲ್ಲದೆ ಈ ಘಟನೆ ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.
ಭದ್ರಾವತಿ ತಾಲೂಕು ಹನುಮಂತಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಭಗವತಿ ಕೆರೆ ಗ್ರಾಮದಲ್ಲಿ ನಿನ್ನೆ ದಿನ ಅಂದರೆ ಡಿಸೆಂಬರ್ 27 ರ ರಾತ್ರಿ 11.30 ರ ಸುಮಾರಿಗೆ ಜರ್ಬರ್‌ದಸ್ತ್ ಆಗಿದ್ದ ಕರಡಿಯೊಂದು ಮನೆ ಮುಂದೆಯೇ ಹಾದು ಹೋಗಿದೆ. ಇಲ್ಲಿನ ನಿವಾಸಿ ವಾಸುದೇವ ಎಂಬವರ ಮನೆ ಮುಂದೆ ಕರಡಿ ಹಾದು ದೃಶ್ಯ, ಸಿಸಿ ಕ್ಯಾಮರಾವೊಂದರಲ್ಲಿ ಸೆರೆಯಾಗಿದೆ.
30 ಸೆಕೆಂಡ್‌ಗಳ ಅಂತರದಲ್ಲಿ ಮನೆ ಮುಂದೆ ಹಾದು ಹೋಗುವ ಕರಡಿ ನಾಯಿಗಳಿಗೂ ಹೆದರದೇ ಸಾಗುತ್ತದೆ. ಅದರ ಆಕಾರ ನೋಡಿದರೇ ಭಯ ಹುಟ್ಟುತ್ತಿದೆ ಎನ್ನುವ ಸ್ಥಳೀಯರು, ಮನುಷ್ಯನನ್ನು ಜೀವ ಇರುವಾಗಲೇ ಕಿತ್ತು ತಿನ್ನುವ ಕರಡಿಗಳಿಂದ ರಕ್ಷಣೆ ಬೇಕಿದೆ.
ಕರಡಿ ರಾತ್ರಿ ಹೊತ್ತು ಇಲ್ಲಿ ಓಡಾಡುತ್ತಿದೆ ಎಂದು ತಿಳಿದು ಇವತ್ತು ಕತ್ತಲಾಗುವಷ್ಟರಲ್ಲಿ ಮನೆ ಸೇರಿಕೊಳ್ಳುವುದು ಒಳ್ಳೆಯದು ಎಂದೆನಿಸುತ್ತಿದೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಕರಡಿ ಕಾಣಿಸಿಕೊಂಡಿದೆ ಎಂದು ಈಗಾಗಲೇ ವಲಯ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಕೊಡಲಾಗಿದೆ. ಅರಣ್ಯ ಇಲಾಖೆಯವರು ಇನ್ನಷ್ಟೆ ಪರಿಶೀಲನೆ ನಡೆಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.