ಕದ್ದ ಜೆಸಿಬಿಯಲ್ಲೇ ಎಟಿಎಂ ಯಂತ್ರ ಕದಿಯಲು ಯತ್ನಿಸಿದ ಖದೀಮ… ಪೊಲೀಸರನ್ನು ಕಂಡು ಪರಾರಿ
Team Udayavani, Jul 26, 2023, 9:25 AM IST
ಶಿವಮೊಗ್ಗ: ಕದ್ದಿರುವ ಜೆಸಿಬಿ ಬಳಸಿ ಎಟಿಎಂ ಯಂತ್ರ ಕದಿಯಲು ಯತ್ನಿಸಿದ ಕಳ್ಳನೊಬ್ಬ ಪೊಲೀಸರನ್ನು ಕಂಡು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರ ಪೊಲೀಸ್ ಠಾಣಾಯಲ್ಲಿ ಮಂಗಳವಾರ ರಾತ್ರಿ ನಡೆದೆದಿದೆ.
ಇಲ್ಲಿನ ವಿನೋಬನಗರ ಪೊಲೀಸ ಸ್ಟೇಷನ್ ವ್ಯಾಪ್ತಿಯ ಶಿವಾಲಯ ಬಳಿಯ ಆಕ್ಸಿಸ್ ಬ್ಯಾಂಕ್ ಎಟಿಎಂವೊಂದರಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಕಳ್ಳತನ ಮಾಡಿದ್ದ ಜೆಸಿಬಿಯನ್ನು ತಂದ ಖದೀಮ ಎಟಿಎಂ ಯಂತ್ರವನ್ನು ಎಗರಿಸಲು ಮುಂದಾಗಿದ್ದಾನೆ ಈ ವೇಳೆ ರಾತ್ರಿ ಬೀಟ್ ನಲ್ಲಿದ್ದ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ ಇದನ್ನು ಕಂಡ ಕಳ್ಳ ಜೆಸಿಬಿ ಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಸಮಯಕ್ಕೆ ಸರಿಯಾಗಿ ಬಂದ ಪೊಲೀಸರಿಂದ ನಡೆಯಬೇಕಿದ್ದ ಕಳ್ಳತನವೊಂದು ತಪ್ಪಿದಂತಾಗಿದೆ.
ದುಷ್ಕರ್ಮಿಯು ಜೆಸಿಬಿ ಬಳಸಿ ಎಟಿಎಂ ಓಪನ್ ಮಾಡುತ್ತಿರುವುದನ್ನ ಗಮನಿಸಿದ ಪೊಲೀಸರು ಆತನನ್ನು ಹಿಡಿಯಲು ಮುಂದಾಗಿದ್ದಾರೆ. ಅಷ್ಟರಲ್ಲಿ ಆರೋಪಿ ಎಸ್ಕೇಪ್ ಆಗಿದ್ಧಾನೆ. ಸಮೀಪದಲ್ಲಿಯೇ ಇರುವ ಪೆಟ್ರೋಲ್ ಬಂಕ್ ಬಳಿಯಲ್ಲಿ ನಿಲ್ಲಿಸಲಾಗಿದ್ದ ಜೆಸಿಬಿಯನ್ನು ಕದ್ದು ಎಟಿಎಂ ಯಂತ್ರ ಕದಿಯಲು ಮುಂದಾಗಿದ್ದಾನೆ ಎನ್ನಲಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬಿಸಿದ್ದಾರೆ.
ಸದ್ಯ ಘಟನೆ ಸಂಬಂಧ ವಿನೋಬನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಜೆಸಿಬಿಯನ್ನು ಕೂಡ ತಮ್ಮ ವಶಕ್ಕೆ ಪಡೆದು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ: Anju: ಪಾಕ್ ಗೆಳೆಯನೊಂದಿಗೆ ಭಾರತದ ಅಂಜು ಮದುವೆ ಆದದ್ದು ನಿಜವೇ? ಇಲ್ಲಿದೆ ಸತ್ಯಾಸತ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.