ಶಿವಮೊಗ್ಗ ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ ಕ್ಷಣಗಣನೆ : ಜಾತ್ರೆ ಮಳಿಗೆ ಹಂಚಿಕೆಯಲ್ಲಿ ವಿವಾದ

Team Udayavani, Mar 20, 2022, 7:24 PM IST

ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ ಕ್ಷಣಗಣನೆ : ಜಾತ್ರೆ ಮಳಿಗೆ ಹಂಚಿಕೆಯಲ್ಲಿ ವಿವಾದ

ಶಿವಮೊಗ್ಗ : ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಈ ಮಧ್ಯೆ ಮಳಿಗೆ ಹಂಚಿಕೆ ಸಂಬಂಧ ವಿವಾದ ಸೃಷ್ಟಿಯಾಗಿದೆ. ಮಳಿಗೆಗಳ ಟೆಂಡರ್ ಪಡೆದಿದ್ದ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಒಡ್ಡಿರುವ ಆರೋಪವು ಕೇಳಿ ಬಂದಿದೆ. ಅನ್ಯ ಧರ್ಮಿಯರಿಗೆ ಮಳಿಗೆ ಕೊಡಬಾರದು ಎಂದು ಹಿಂದೂ ಸಂಘಟನೆಗಳ ಮುಖಂಡರು ಪಟ್ಟು ಹಿಡಿದಿದ್ದಾರೆ.

ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯು ಶಿವಮೊಗ್ಗ ನಗರದ ಊರ ಹಬ್ಬ ಎಂದು ಖ್ಯಾತಿ ಪಡೆದಿದೆ. ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ಕೊರೋನ ಹಿನ್ನೆಲೆ ಈ ಭಾರಿ ನಿಗದಿಗಿಂತಲೂ ಒಂದು ತಿಂಗಳು ತಡವಾಗಿ ಜಾತ್ರೆ ನಡೆಸಲಾಗುತ್ತಿದೆ. ಈ ನಡುವೆ ಮಳಿಗೆ ಹಂಚಿಕೆ ವಿವಾದ ಸೃಷ್ಟಿಯಾಗಿದೆ.

ಏನಿದು ವಿವಾದ?

ಜಾತ್ರೆ ಸಂದರ್ಭ ಮಾರಿಕಾಂಬ ದೇವಿ ದೇವಸ್ಥಾನದ ಸುತ್ತಲು ತಿನಿಸು, ಆಟಿಕೆ, ಅಲಂಕಾರಿಕ ವಸ್ತುಗಳು, ಹೂವು, ಹಣ್ಣು, ಕಾಯಿ ಸೇರಿದಂತೆ ವಿವಿಧ ಮಾರಾಟ ಮಳಿಗೆ ಇರಿಸಲಾಗುತ್ತದೆ. ಈವರೆಗೂ ಸರ್ವ ಧರ್ಮಿಯರು ಮಳಿಗೆಗಳನ್ನು ಇರಿಸುತ್ತಿದ್ದರು. ಈ ಭಾರಿ ಹಿಂದೂ ಧರ್ಮಿಯರು ಮಾತ್ರ ಮಳಿಗೆ ಇರಿಸಲು ಅವಕಾಶ ನೀಡಬೇಕು ಎಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ಇದು ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.

‘ನಮಗೂ ಇದಕ್ಕೂ ಸಂಬಂಧವಿಲ್ಲ’

ಇನ್ನು, ಜಾತ್ರೆ ಹೊಸ್ತಿಲಲ್ಲಿ ವಿವಾದ ಹುಟ್ಟಿಕೊಂಡಿದ್ದರಿಂದ ಎಚ್ಚೆತ್ತುಕೊಂಡ ಕೋಟೆ ಶ್ರೀ ಮಾರಿಕಾಂಬ ದೇವಿ ಸಮಿತಿ ಪತ್ರಿಕಾಗೋಷ್ಠಿ ಕರೆದು, ತಮಗೂ ವಿವಾದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

‘ಮಳಿಗೆ ಹರಾಜು ಸಂಬಂಧ ನಾಗರಾಜು ಎಂಬವವರು ಟೆಂಡರ್ ಪಡೆದಿದ್ದಾರೆ. 9.01 ಲಕ್ಷ ರೂ.ಗೆ ಟೆಂಡರ್ ನೀಡಿದ್ದೇವೆ. ಅವರು ಮಳಿಗೆಗಳನ್ನ ಯಾರಿಗೆ ಬೇಕಿದ್ದರೂ ಕೊಡಬಹುದು. ಇದಕ್ಕೂ ದೇವಸ್ಥಾನದ ಆಡಳಿತ ಮತ್ತು ಜಾತ್ರೆ ಸಮಿತಿಗೂ ಸಂಬಂಧವಿಲ್ಲ’ ಎಂದು ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಕೆ.ಮರಿಯಪ್ಪ ತಿಳಿಸಿದರು.

‘ಜೀವ ಬೆದರಿಕೆ ಒಡ್ಡಿದ್ದಾರೆ’

ಇನ್ನು, ಟೆಂಡರ್ ವಿಚಾರವಾಗಿ ಜೀವ ಬೆದರಿಕೆ ಒಡ್ಡಿರುವ ಆರೋಪವು ಕೇಳಿ ಬಂದಿದೆ. ‘ಈ ಮೊದಲು ಚಿಕ್ಕ ಎಂಬುವವರು ಟೆಂಡರ್ ಪಡೆದಿದ್ದರು. ಅವರಿಗೆ ಕೆಲವರು ಜೀವ ಬೆದರಿಕೆ ಒಡ್ಡಿದ್ದರಿಂದ ಟೆಂಡರ್ ಹಿಂತಿರುಗಿಸಿದ್ದಾರೆ. ಆಮೇಲೆ ನಾಗರಾಜು ಎಂಬುವವರು ಬಂದು ಟೆಂಡರ್ ಪಡೆದುಕೊಂಡಿದ್ದಾರೆ’ ಎಂದು ಎಸ್.ಕೆ.ಮರಿಯಪ್ಪ ಅವರು ತಿಳಿಸಿದ್ದಾರೆ.

ಇದನ್ನೂ ಓದಿ :  ಹೆಲ್ಮೆಟ್‌ನಂತೆ ಸುರಕ್ಷತೆಗಾಗಿ ಹಿಜಾಬ್ ಧಾರಣೆ : ಜಮೀರ್‌ ಅಹ್ಮದ್

ದೇಗುಲದ ಸುತ್ತಮುತ್ತ ಅಂಗಡಿಗಳಿಲ್ಲ

ಈ ಭಾರಿ ಕೋಟೆ ಮಾರಿಕಾಂಬ ದೇವಿ ದೇವಸ್ಥಾನದ ಸುತ್ತಮತ್ತ ಮಳಿಗೆ ಹಾಕಲು ಅವಕಾಶವಿಲ್ಲ. ಪೊಲೀಸ್ ಇಲಾಖೆ ಸೂಚನೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ‘ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಹೊಳೆ ಬಸ್ ಸ್ಟಾಪ್’ಗೆ ತೆರಳುವ ರಸ್ತೆ, ಎಸ್.ಪಿ. ರಸ್ತೆ, ದೇವಸ್ಥಾನದ ಹಿಂಭಾಗ ಕೃಷ್ಣ ಕೆಫೆಗೆ ಹೋಗುವ ರಸ್ತೆಯಲ್ಲಿ ಮಳಿಗೆಗಳನ್ನು ಹಾಕಲು ಅವಕಾಶ ಕಲ್ಪಿಸಲಾಗಿದೆ. ಆದರೆ ದೇವಸ್ಥಾನದ ಸಮೀಪ ಮಳಿಗೆ ಹಾಕದಂತೆ ಷರತ್ತು ವಿಧಿಸಲಾಗಿದೆ’ ಎಂದು ಎಸ್.ಕೆ.ಮರಿಯಪ್ಪ ಸ್ಪಷ್ಟಪಡಿಸಿದರು.

ಪರ, ವಿರೋಧದ ಚರ್ಚೆ

ಇನ್ನು, ಮಾರಿಕಾಂಬ ಜಾತ್ರೆಯಲ್ಲಿ ಹಿಂದೂ ಧರ್ಮಿಯರ ಅಂಗಡಿಗಳಿಗೆ ಮಾತ್ರ ಅವಕಾಶ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ವೈರಲ್ ಆಗಿದೆ. ಇದರ ಪರ ಮತ್ತು ವಿರೋಧ ಚರ್ಚೆಗಳು ಶುರುವಾಗಿದೆ. ಈ ನಡುವೆ ಮರಿಕಾಂಬ ಜಾತ್ರೆ ಅಂಗವಾಗಿ ಸರ್ವ ಧರ್ಮಿಯರಿಗೂ ಲಷ್ಕರ್ ಮೊಹಲ್ಲಾದಲ್ಲಿ ಅಂಗಡಿ ಹಾಕಲು ಅವಕಾಶ ನೀಡಲಾಗುತ್ತದೆ ಎಂಬ ಪೋಸ್ಟರ್ ವೈರಲ್ ಆಗಿದೆ.

‘ಸರ್ವ ಧರ್ಮಿಯರಿಂದ ಆರಾಧನೆ’

ಪ್ರಸಿದ್ಧ ಕೋಟೆ ಮಾರಿಕಾಂಬ ದೇವಿ ದೇವಸ್ಥಾನಕ್ಕೆ ಶಿವಮೊಗ್ಗದ ಸರ್ವ ಧರ್ಮಿಯರು ನಡೆದುಕೊಳ್ಳುತ್ತಾರೆ. ‘ದೇವಸ್ಥಾನಕ್ಕೆ ಮುಸ್ಲಿಂ ಸಮುದಾಯದವರು ನಡೆದುಕೊಳ್ಳುತ್ತಾರೆ. ಜಾತ್ರೆಯ ಸಿದ್ಧತೆಯ ಹಲವು ಕೆಲಸಗಳಲ್ಲಿ ಅವರು ತೊಡಗಿಸಿಕೊಳ್ಳುತ್ತಾರೆ. ಕ್ರೈಸ್ತ ಸಮುದಾಯದ ನಿಯೋಗ ದೇವಸ್ಥಾನಕ್ಕೆ ಭೇಟಿ ನೀಡಿತ್ತು. ವಾಹನಗಳ ಪಾರ್ಕಿಂಗ್’ಗೆ ವ್ಯವಸ್ಥೆ ಕಲ್ಪಿಸುವ ಕುರಿತು ಚರ್ಚೆ ಮಾಡಿದ್ದಾರೆ. ಆದರೆ ಕೆಲವರು ಗೊಂದಲ ಸೃಷ್ಟಿ ಮಾಡಿದ್ದಾರೆ. ಜಾತ್ರೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬಹುದು, ಎಲ್ಲರೂ ದೇವಿಯ ಪೂಜೆ ಮಾಡಬಹುದು’ ಎಂದು ಮಾರಿಕಾಂಬ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಕೆ.ಮರಿಯಪ್ಪ ಸಷ್ಟಪಡಿಸಿದ್ದಾರೆ.

ವದಂತಿಗೆ ಕವಿಗೊಡಬೇಡಿ

ಊರ ಜಾತ್ರೆಯನ್ನು ಎಲ್ಲರೂ ಖುಷಿಯಿಂದ ಮಾಡಬೇಕು. ಯಾವುದೆ ವದಂತಿಗೂ ಕವಿಗೊಡಬೇಡಿ ಎಂದು ದೇವಸ್ಥಾನ ಸಮಿತಿಯ ಕಾರ್ಯದರ್ಶಿ ಎನ್.ಮಂಜುನಾಥ್ ಮನವಿ ಮಾಡಿದ್ದಾರೆ.

ಈ ನಡುವೆ ಕೋಟೆ ಮಾರಿಕಾಂಬ ದೇವಿ ಜಾತ್ರೆಯ ಕೊನೆಯ ಹಂತದ ಸಿದ್ಧತೆಗಳು ನಡೆಯುತ್ತಿವೆ. ಮಾರ್ಚ್ 22ರಿಂದ ಜಾತ್ರೆ ನಡೆಯಲಿದೆ. ಹಿಂದಿನ ಹಾಗೆ ಎಲ್ಲಾ ಧಾರ್ಮಿಕ ವಿಧಿವಿಧಾನಗಳು ಇರಲಿವೆ.

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.