ಗಲಾಟೆಗೆ ನಾವು ಕಾರಣ ಅಲ್ಲ: ರಾಘವೇಂದ್ರ
Team Udayavani, Feb 24, 2022, 8:32 PM IST
ಶಿವಮೊಗ್ಗ: ಮೃತದೇಹದ ಮೆರವಣಿಗೆ ವೇಳೆಯ ಗಲಾಟೆಗೆ ನಾವು ಕಾರಣರಲ್ಲ.ಅಂದು ಸೆಕ್ಷನ್ 144 ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸಂಸದಬಿ.ವೈ. ರಾಘವೇಂದ್ರ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು,ಯಾರೂ ಸಹ ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದಕ್ಕೆ ಬರುವುದಿಲ್ಲ.ತುಂಬಾ ಸೂಕ್ಷ ¾ವಾಗಿ ಎಲ್ಲ ಅಂಶವನ್ನು ತೆಗೆದುಕೊಂಡು ಹೋಗಬೇಕಿತ್ತು.
ಈಸಂದರ್ಭದಲ್ಲಿ ಜನರ ಆಕ್ರೋಶ ತಡೆಯಲು ಆಗಲಿಲ್ಲ. ಹರ್ಷನ ಅಂತಿಮಸಂಸ್ಕಾರ ಶಾಂತಿಯುತವಾಗಿ ನಡೆಯಲು ಎಲ್ಲ ಕ್ರಮ ತೆಗೆದುಕೊಂಡಿದ್ದೆವು.ಈಶ್ವರಪ್ಪ ನೇತೃತ್ವದಲ್ಲಿ ನಾನು ಹಾಗೂ ನಾಯಕರು ಒಟ್ಟಾಗಿ ಶಾಂತಿಯುತವಾಗಿಎಲ್ಲವನ್ನು ನೆರವೇರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿದ್ದೆವು. ಪೊಲೀಸ್‌ಇಲಾಖೆ ಜತೆ ಕೈ ಜೋಡಿಸುವ ಕೆಲಸ ಮಾಡಿದ್ದೆವು.
ಪೊಲೀಸ್ ಇಲಾಖೆಮೆರವಣಿಗೆ ಬೇಡ ಎಂದು ಹೇಳಿದ್ದರು. ಆದರೂ ಅದನ್ನು ಕೇಳುವಪರಿಸ್ಥಿತಿಯಲ್ಲಿ ಯಾರೂ ಇರಲಿಲ್ಲ. ನಾವೆಲ್ಲ ಪೊಲೀಸರಿಗೆ ಸಹಕಾರ ನೀಡಿದ್ದೇವೆ.ಶಿವಮೊಗ್ಗ ಶಾಂತಿಗೆ ಹೆಸರುವಾಸಿಯಾದ ನಗರ. ಆದರೆ ಕಲ್ಲು ತೂರಾಟದಿಂದಕೆಟ್ಟ ಸಂದೇಶ ಹೋಗಿದೆ. ಇದಕ್ಕೆ ಮೂಲ ಕಾರಣರಾದವರನ್ನು ಬಂಧಿ ಸಬೇಕು.ಕಾನೂನು ಕ್ರಮ ತೆಗೆದುಕೊಳ್ಳಬೇಕು. ಈ ಘಟನೆಯಾದ ಮೇಲೆ ಸಾಂತ್ವನಹೇಳುವ ದುಸ್ಥಿತಿ ಬರಬಾರದು. ಈ ರೀತಿಯ ಘಟನೆಗಳು ಮುಂದೆ ಆಗದಂತೆಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ಸರ್ಕಾರ, ಜಿಲ್ಲಾಡಳಿತಯೋಚಿಸುವ ಕಾಲ ಬಂದಿದೆ. ಹರ್ಷ ಕೊಲೆ ಆರೋಪಿಗಳನ್ನು ಬಂ ಧಿಸಿರುವಪೊಲೀಸರ ಕಾರ್ಯ ಶ್ಲಾಘನೀಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.