ಇಂದಿನಿಂದ ಶಾಲಾ-ಕಾಲೇಜು ಪುನಾರಂಭ
Team Udayavani, Feb 28, 2022, 11:01 AM IST
ಶಿವಮೊಗ್ಗ: ಹಿಜಾಬ್ ವಿವಾದ, ಕರ್ಫ್ಯೂ ಹಿನ್ನೆಲೆಯಲ್ಲಿ 15ದಿನದಿಂದ ಶಿವಮೊಗ್ಗ ನಗರದಲ್ಲಿ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ಸೋಮವಾರದಿಂದ ಆರಂಭಗೊಳ್ಳುತ್ತಿವೆ.ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ನಗರದ ಕೆಲಕಾಲೇಜುಗಳಲ್ಲಿ ಕಲ್ಲು ತೂರಾಟ, ಭಗವಾಧ್ವಜ ಹಾರಾಟವಿವಾದ ನಡೆದಿತ್ತು. ಹಲವೆಡೆ ಘರ್ಷಣೆಗಳು ಕೂಡ ನಡೆದಿದ್ದವು.
ವಿದ್ಯಾರ್ಥಿನಿಯರು ಹಿಜಾಬ್‌ಗ ಅವಕಾಶ ನೀಡುವಂತೆಪಟ್ಟು ಹಿಡಿದು ಪ್ರತಿಭಟನೆ ಕೂಡ ನಡೆಸಿದ್ದರು. ಇದರಿಂದಶಿಕ್ಷಣ ಸಂಸ್ಥೆಗಳಲ್ಲಿ ಶಾಂತಿಭಂಗವಾಗಿತ್ತು. ಇದನ್ನು ಹತೋಟಿಗೆತರಲು ಕೆಲ ದಿನ ಶಾಲೆಗಳಿಗೆ ರಜೆ ನೀಡಿ, ನಿಷೇಧಾಜ್ಞೆ ಜಾರಿಮಾಡಲಾಗಿತ್ತು. ಈ ವಿವಾದ ಶಾಲೆಗಳು ಆರಂಭಗೊಂಡಎರಡೇ ದಿನಕ್ಕೆ ಫೆ.20ರಂದು ನಗರದಲ್ಲಿ ಹಿಂದೂಕಾರ್ಯಕರ್ತನ ಹತ್ಯೆ ಪ್ರಕರಣ ನಗರದಲ್ಲಿ ಶಾಂತಿ ಭಂಗಕ್ಕೆಕಾರಣವಾಯಿತು.
ಕಲ್ಲು ತೂರಾಟ, ಕಟ್ಟಡ, ವಾಹನಗಳಿಗೆಬೆಂಕಿ ಹಚ್ಚಿದ ಪರಿಣಾಮ ನಿಷೇಧಾಜ್ಞೆ ಜತೆ ಕರ್ಫ್ಯೂವಿ ಧಿಸಲಾಯಿತು. ಪರಿಣಾಮ ಸೋಮವಾರದಿಂದ ಶಾಲೆ,ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಶನಿವಾರ ಆರಂಭಸಿಲುಸಿದ್ಧತೆ ಮಾಡಿಕೊಳ್ಳಲಾಗಿತ್ತಾದರೂ ಕೊನೇ ಕ್ಷಣದಲ್ಲಿ ನಿರ್ಧಾರವಾಪಸ್ ಪಡೆದು ಸೋಮವಾರದಿಂದ ಆರಂಭಕ್ಕೆ ನಿರ್ಧಾರಮಾಡಲಾಗಿದೆ.
ಕರ್ಫ್ಯೂ ವಿ ಧಿಸಿದ ಪರಿಣಾಮ ನಗರದಲ್ಲಿಮಂಗಳವಾರ ನಂತರ ಯಾವುದೇ ಅಹಿತಕರ ಘಟನೆ ನಡೆದಿಲ್ಲ.ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್ ಅಂತಿಮತೀರ್ಪು ಕಾಯ್ದಿರಿಸುವುದರಿಂದ ಶಾಂತಿಯುತವಾಗಿ ಶಾಲೆ,ಕಾಲೇಜು ನಡೆಯುವ ವಿಶ್ವಾಸ ಇದೆ. ಸದ್ಯಕ್ಕೆ ಆನ್‌ಲೈನ್‌ತರಗತಿಗಳು ನಡೆಯುತ್ತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.