ಬಿಜೆಪಿ ಯುವ ಮುಖಂಡನ ಹತ್ಯೆ ಖಂಡಿಸಿ ಪ್ರತಿಭಟನೆ
Team Udayavani, Jul 28, 2022, 7:37 PM IST
ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯುವ ಮುಖಂಡ ಪ್ರವೀಣ್ ನೆಟ್ಟಾರು ಅವರಹತ್ಯೆಗೈದ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಶಿವಮೊಗ್ಗ ನಗರಬಿಜೆಪಿ ವತಿಯಿಂದ ಶಿವಪ್ಪನಾಯಕ ವೃತ್ತದಲ್ಲಿಪ್ರತಿಭಟನೆ ನಡೆಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಬಿಜೆಪಿಜಿಲ್ಲಾ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರುಅವರ ಹತ್ಯೆ ಹಿಂದೆ ಮತಾಂಧ ಶಕ್ತಿಗಳಿವೆ. ಇದನ್ನುಬಯಲಿಗೆಳೆದು ಹಂತಕರಿಗೆ ತಕ್ಕ ಶಿಕ್ಷೆ ಕೊಡಿಸಬೇಕುಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಎಸ್.ಎನ್.ಚನ್ನಬಸಪ್ಪ ಮಾತನಾಡಿ , ಹಿಂದೂ ಸಮಾಜವನ್ನುರಕ್ಷಣೆ ಮಾಡುವುದೇ ಕಷ್ಟವಾಗುತ್ತಿದೆ. ಹಿಂದೂಗಳಹತ್ಯೆ ನಿರಂತರವಾಗಿ ನಡೆಯುತ್ತಿದೆ. ಹಿಂದೂಗಳಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ. ಕೆಲವು ದುಷ್ಟಶಕ್ತಿಗಳು ಅಟ್ಟಹಾಸ ಮೆರೆಯತೊಡಗಿದ್ದಾರೆ.
ಸರ್ಕಾರಹಿಂದೂಗಳ ಮರಣಗಳನ್ನು ಲೆಕ್ಕಹಾಕಲು ಮಾತ್ರ ಇದೆ.ಹಿಂದೂ ಸಮಾಜದವರು ಮೃತಪಟ್ಟಾಗ ಶ್ರದ್ಧಾಂಜಲಿಸಭೆಗಳನ್ನು ಮಾಡಬೇಕಾಗಿ ಬಂದಿರುವುದು ದುರಂತಎಂದರು. ಎಲ್ಲ ಹಿಂದೂಗಳಿಗೂ ರಕ್ಷಣೆ ಬೇಕೇ ಬೇಕು.ಇಲ್ಲದಿದ್ದರೆ ಅವರೇ ತಮ್ಮ ರಕ್ಷಣೆ ಮಾಡಿಕೊಳ್ಳುವಕಾಲ ದೂರವಿಲ್ಲ. ಸರ್ಕಾರ ಈ ಬಗ್ಗೆ ನಿರ್ಲಕ್ಷÂವಹಿಸಬಾರದು. ಹಿಂದೂ ಕಾರ್ಯಕರ್ತರ ಹತ್ಯೆಅತ್ಯಂತ ನೋವಿನ ಸಂಗತಿ ಎಂದು ಭಾವುಕರಾಗಿಕಣ್ಣೀರಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.