ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಮನವಿ
Team Udayavani, Sep 28, 2021, 4:37 PM IST
ಶಿವಮೊಗ್ಗ: ನಗರದಲ್ಲಿ ಮತ್ತೂಂದು ಒಳಾಂಗಣ ಕ್ರೀಡಾಂಗಣ ನಿರ್ಮಾಣ ಸೇರಿವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ನಾಗರಿಕ ರಕ್ಷಣಾ ಸಮಿತಿಯಿಂದ ನಗರದಲ್ಲಿ ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಅವರಿಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗದಲ್ಲಿ ಒಂದೇ ಒಳಾಂಗಣ ಕ್ರೀಡಾಂಗಣವಿದ್ದು, ಅದರಲ್ಲಿ ಕೇವಲ ಶಟಲ್‌ಬ್ಯಾಡ್ಮಿಂಟನ್‌ಗೆ ಮಾತ್ರ ಪ್ರಾಮುಖ್ಯತೆ ದೊರೆಯುತ್ತಿದೆ. ಇತರೆ ಒಳಾಂಗಣ ಕ್ರೀಡಾಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಮತ್ತೂಂದು ಒಳಾಂಗಣ ಕ್ರೀಡಾಂಗಣದ ನಿರ್ಮಾಣವಾಗಬೇಕಾಗಿದೆ ಎಂದು ಮನವಿಯಲ್ಲಿ ಕೋರಲಾಗಿದೆ.
ರಾಜ್ಯದಲ್ಲಿ ಅಂಗವಿಕಲ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅವರಿಗೆತರಬೇತಿ ನೀಡಿ ಪ್ರೋತ್ಸಾಹ ನೀಡಿದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿನ ಅಂಗವಿಕಲಕ್ರೀಡಾಪಟುಗಳು ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ತೋರಬಹುದುಎಂದು ಮನವಿಯಲ್ಲಿ ಹೇಳಲಾಗಿದೆ.
ಸಮಿತಿಯ ರಾಜ್ಯಾಧ್ಯಕ್ಷ ಕೆ. ಶೇಖರ್, ಪ್ರಧಾನಕಾರ್ಯದರ್ಶಿ ಆರ್. ರಾಘವೇಂದ್ರ, ಉಪಾಧ್ಯಕ್ಷರಾದ ರಮೇಶ್ ಮತ್ತು ಚಂದನ್,ಶ್ರೀಧರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.