ಸರ್ಕಾರದಲ್ಲಿ ಗೊಂದಲವಿದ್ದಿದ್ದು ನಿಜ : ಈಶ್ವರಪ್ಪ
Team Udayavani, Jun 21, 2021, 10:05 PM IST
ಶಿವಮೊಗ್ಗ: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅಲ್ಲೊಂದು ಇಲ್ಲೊಂದು ಗೊಂದಲ ಇದ್ದಿದ್ದು ನಿಜ. ನಮ್ಮ ನಾಯಕರಾದ ಅರುಣ್ ಸಿಂಗ್ ಬಂದು ಸಮಸ್ಯೆ ಪರಿಹಾರ ಮಾಡಿದ್ದಾರೆ. ನಾಲ್ಕು ಗೋಡೆ ಮಧ್ಯೆ ಕುಳಿತು ಎಲ್ಲರ ಸಮಸ್ಯೆ ಕೇಳಿ ಬಗೆಹರಿಸಿದ್ದಾರೆ.
ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸಹ ಸ್ಪಷ್ಟಪಡಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರುಣ ಸಿಂಗ್ ಬರುವ ಮುಂಚೆ ಇದ್ದ ಗೊಂದಲ ಬಗೆಹರಿದಿದ್ದು, ಸರ್ಕಾರ ಶಕ್ತಿಶಾಲಿಯಾಗಿ ಕೆಲಸ ಮಾಡಲಿದೆ. ಜತೆಗೆ ಯಾರೂ ಕೂಡ ಪರ-ವಿರೋಧದ ಬಹಿರಂಗ ಹೇಳಿಕೆ ನೀಡದಂತೆ ಸೂಚಿಸಿದ್ದಾರೆ.
ಅಭಿವೃದ್ಧಿ, ಪಕ್ಷದ ಸಂಘಟನೆ ಬಗ್ಗೆ ಗಮನ ಹರಿಸಲು ಮಾತ್ರ ಸೂಚನೆ ನೀಡಿದ್ದಾರೆ ಎಂದರು. ಕಾಂಗ್ರೆಸ್ಸಿಗರು ಐದು ವರ್ಷ ಹಾಗೋ ಹೀಗೋ ಅ ಧಿಕಾರ ಮಾಡಿದ್ರು. ಬಳಿಕ ರಾಜ್ಯದ ಜನ ತಿರಸ್ಕಾರ ಮಾಡಿದ್ರು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಸಚಿವರು, ಶಾಸಕರು ಸೋತು ಸರ್ಕಾರವೇ ಹೋಯ್ತು. ಸರ್ಕಾರ ಹೋದ ಮೇಲೂ ಕೆಲವು ನಾಯಕರು ಸಿಎಂ ಸ್ಥಾನದ ಕನಸು ಕಾಣಾನೇ ಇದ್ದಾರೆ.
ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಮೇಲ್ನೋಟಕ್ಕೆ ಇಬ್ಬರು ಸಿಎಂ ಸ್ಥಾನಕ್ಕೆ ಹೋರಾಟ ಮಾಡ್ತಿದ್ದಾರೆ. ಸಿಎಂ ಸ್ಥಾನದ ಬಗ್ಗೆ ಅವರು ಹೇಳಲ್ಲ. ಯಾರೋ ಜನ ಹೇಳ್ತಾರೆ. ಶಾಸಕರು ಹೇಳ್ತಾರೆ ಅಂತಾರೆ. ಅದು ಜಮೀರ್ ವೈಯಕ್ತಿಕ ಅಭಿಪ್ರಾಯ ಅಂತಾರೆ. ಹಾಗಾದ್ರೆ ನಿಮ್ಮ ಅಭಿಪ್ರಾಯ ಏನು? ನೀವು ಮೊದಲು ಶಾಸಕರಾಗಿ ಗೆಲ್ತಿàರಾ ನೋಡಿಕೊಳ್ಳಿ. ಜನ ನಿಮ್ಮನ್ನು ತಿರಸ್ಕಾರ ಮಾಡಿದ್ದಾರೆ. ಸಿಎಂ ಸ್ಥಾನದ ಕನಸು ಬಿಟ್ಟು ಮೊದಲನೆಯದಾಗಿ ಇಬ್ಬರೂ ಶಾಸಕರಾಗಿ ಗೆದ್ದು ಬನ್ನಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ಹೊಸ ಸೇರ್ಪಡೆ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.