ಪುರಸಭೆ ವ್ಯಾಪ್ತಿಯಲ್ಲಿ ಜಮೀನು ಮಂಜೂರು ಮಾಡಲು ಆಗ್ರಹ
Team Udayavani, Jun 23, 2021, 10:58 PM IST
ಸೊರಬ: ಪುರಸಭೆ ವ್ಯಾಪ್ತಿಯಲ್ಲಿ ಜಮೀನು ಮಂಜೂರು ಮಾಡುವಂತೆ ಒತ್ತಾಯಿಸಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಮಠಾಧಿ àಶರ ನಿಯೋಗ ಮಂಗಳವಾರ ಪಟ್ಟಣದಲ್ಲಿ ಮಂಗಳವಾರ ಶಾಸಕ ಎಸ್. ಕುಮಾರ್ ಬಂಗಾರಪ್ಪ ಅವರನ್ನು ಭೇಟಿ ನೀಡಿ ಮನವಿ ನೀಡಿತು.
ಜಡೆ ಸಂಸ್ಥಾನ ಮಠದ ಡಾ| ಮಹಾಂತ ಸ್ವಾಮೀಜಿ ಮಾತನಾಡಿ, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ಒಂದು ಲಕ್ಷ ಜನಸಂಖ್ಯೆ ಇರುವ ಪ್ರಬಲ ಸಮುದಾಯವಾಗಿರುವ ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ಧಿಗಾಗಿ, ಪುರಸಭೆ ವ್ಯಾಪ್ತಿಯಲ್ಲಿ 5 ಎಕರೆ ಜಾಗವನ್ನು ಮಂಜೂರು ಮಾಡಬೇಕು. ಸಮುದಾಯದ ಅಭಿವೃದ್ಧಿಗಾಗಿ ಸಭಾಭವನ, ವಿದ್ಯಾರ್ಥಿ ನಿಲಯ, ಸಾಂಸ್ಕೃತಿಕ ಕೇಂದ್ರಗಳನ್ನು ಕೇಂದ್ರಗಳನ್ನು ಹಾಗೂ ಶಿಕ್ಷಣಕ್ಕೆ ಸಂಬಂ ಧಿಸಿದಂತೆ ಅಭಿವೃದ್ಧಿ ಗೊಳಿಸಲು ಯಾವುದೇ ವಿಸ್ತಾರವಾದ ಜಾಗವಿಲ್ಲ ಎಂದು ಶಾಸಕರ ಗಮನಕ್ಕೆ ತಂದರು.
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಜಿಲ್ಲಾಧ್ಯಕ್ಷ ಸಿ.ಪಿ. ಈರೇಶ ಗೌಡ ಮಾತನಾಡಿ, ಸಮುದಾಯದ ಅಭಿವೃದ್ಧಿಗೆ ವಿಸ್ತಾರವಾದ ಜಾಗದ ಅವಶ್ಯಕತೆ ಇದೆ. ಶಿಕ್ಷಣ ಸಂಬಂ ಧಿಸಿದಂತೆ ವಿದ್ಯಾರ್ಥಿ ನಿಲಯ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ವೀರಶೈವ ಲಿಂಗಾಯತ ಸಂಘಟನೆಗಳಿಗೆ ಜಾಗದ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಾಗವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.
ನಂತರ ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ಮಂಜೂರಾತಿಗೆ ಒತ್ತಾಯಿಸಿ ಪಟ್ಟಣದ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಶಿವಾನಂದ ಪಿ. ರಾಣೆ ಅವರಿಗೆ ಮನವಿ ಸಲ್ಲಿಸಲಾಯಿತು. ದುಗ್ಲಿ ಸುಕ್ಷೇತ್ರ ಮತ್ತು ಕಡೇನಂದಿಹಳ್ಳಿ ತಪೋಕ್ಷೇತ್ರದ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಾರನಹಳ್ಳಿ ಚೌಕಿಮಠದ ಶ್ರೀ ನೀಲಕಂಠ ಸ್ವಾಮೀಜಿ, ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ತಾಲೂಕು ಅಧ್ಯಕ್ಷ ಸಂದೀಪ ಗೌಡ, ಜಿಲ್ಲಾ ಸಂಚಾಲಕ ನಂದೀಶ ಬಿಳವಾಣಿ, ಜಿಲ್ಲಾ ವಕ್ತಾರ ವಿನಯ ಪಾಟೀಲ್, ತಾಲೂಕು ಉಪಾಧ್ಯಕ್ಷ ನಾಗರಾಜ ಗುತ್ತಿ, ಟೌನ್ ಅಧ್ಯಕ್ಷ ಲಿಂಗರಾಜ ಧೂಪದ ಮಠ, ಪುರಸಭೆ ಸದಸ್ಯೆ ನಟರಾಜ ಉಪ್ಪಿನ, ಎಂ. ನಾಗಪ್ಪ ವಕೀಲ, ಕೊಟ್ರೇಶಗೌಡ ಚಿಕ್ಕಸವಿ, ಸದಾನಂದಗೌಡ ಕಡಸೂರು, ಚಂದ್ರಶೇಖರ ನಿಜಗುಣ, ಗದಿಗೆಪ್ಪ ಗೇರುಕೊಪ್ಪ, ಸಿ.ಪಿ. ನಾಗರಾಜ ಗೌಡ, ಕೆ.ಬಿ. ಆಶೀಕ್ ನಾಗಪ್ಪ, ಸೂರಿ ಕುಮ್ಮೂರು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.