ರೈಲಿನಡಿ ಸಿಲುಕುತ್ತಿದ್ದ ಮಹಿಳೆ ರಕ್ಷಣೆ
Team Udayavani, Nov 11, 2021, 3:37 PM IST
ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಇಳಿಯಲುಹೋಗಿ ಆಯತಪ್ಪಿ ಬಿದ್ದ ಮಹಿಳೆಯೊಬ್ಬರನ್ನುರೈಲ್ವೆ ಪೊಲೀಸರು ರಕ್ಷಿಸಿದ್ದು, ಸಂಭವಿಸುತ್ತಿದ್ದಅನಾಹುತವೊಂದನ್ನು ತಪ್ಪಿಸಿದ್ದಾರೆ. ಪ್ರಾಣದಹಂಗು ತೊರೆದು ಪೊಲೀಸರು ಮಹಿಳೆ ರಕ್ಷಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಂಗಳವಾರ ತಾಳಗುಪ್ಪ-ಬೆಂಗಳೂರುಇಂಟರ್ ಸಿಟಿ ರೈಲು ಶಿವಮೊಗ್ಗ ನಿಲ್ದಾಣದಿಂದಹೊರಟಾಗ ಈ ಘಟನೆ ಸಂಭವಿಸಿದೆ. ಬೆಳಗ್ಗೆ6.55ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ಬರುವ ರೈಲು7.05ಕ್ಕೆ ನಿಲ್ದಾಣದಿಂದ ಹೊರಡಲಿದೆ. ಸಂಬಂಧಿಕರನ್ನು ರೈಲು ಹತ್ತಿಸಲು ಬಂದಿದ್ದ ಮಹಿಳೆರೈಲು ಏರಿದ್ದರು. ರೈಲು ಹೊರಡುತ್ತಿದ್ದಂತೆಗಾಬರಿಯಿಂದ ಕೆಳಗಿಳಿಯಲು ಮುಂದಾಗಿದ್ದಾರೆ.
ವ್ಯಕ್ತಿಯೊಬ್ಬರು ಮಹಿಳೆಯಕೈ ಹಿಡಿದು ಕೆಳಗಿಳಿಸುತ್ತಿರುವುದು ಸಿಸಿಟಿವಿಯಲ್ಲಿಸೆರೆಯಾಗಿದೆ. ರೈಲು ಚಲಿಸುತ್ತಿದ್ದ ವಿರುದ್ಧದಿಕ್ಕಿಗೆ ಮುಖ ಮಾಡಿಕೊಂಡು ಮಹಿಳೆ ಪ್ಲಾಟ್‌ಫಾರಂಗೆ ಕಾಲಿಟ್ಟಿದ್ದಾರೆ. ವಿರುದ್ಧ ದಿಕ್ಕಿಗೆ ಮುಖಮಾಡಿದ್ದು ಮತ್ತು ಸೀರೆ ಧರಿಸಿದ್ದರಿಂದ ಮಹಿಳೆ ಆಯತಪ್ಪಿ ಬಿದ್ದಿದ್ದಾರೆ.
ಈ ವೇಳೆ ಪ್ಲಾಟ್‌ಫಾರಂ ಮೇಲೆ ನಿಂತಿದ್ದರೈಲ್ವೆ ಪೊಲೀಸರು ಪ್ರಾಣದ ಹಂಗು ತೊರೆದು ಮಹಿಳೆಯ ರಕ್ಷಣೆ ಮಾಡಿದ್ದಾರೆ. ರೈಲ್ವೆಪ್ರೊಟೆಕ್ಷನ್ ಫೋರ್ಸ್‌ನ ಸಿಬ್ಬಂದಿ ಜಗದೀಶ್,ರೈಲ್ವೆ ಪೊಲೀಸರಾದ ಅಣ್ಣಪ್ಪ ಎ.ಎಸ್. ಮತ್ತುಬಿ.ಎಸ್. ಸಂತೋಷ್ ಅವರು ಕೂಡಲೆಮಹಿಳೆಯ ನೆರವಿಗೆ ಧಾವಿಸಿ ಮಹಿಳೆ ರೈಲಿನಡಿಸಿಲುಕದಂತೆ ನೋಡಿಕೊಂಡಿದ್ದಾರೆ.
ರೈಲ್ವೆ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಈ ಎಲ್ಲ ದೃಶ್ಯ ಸೆರೆಯಾಗಿದೆ. ರೈಲ್ವೆ ಇಲಾಖೆ ಹಿರಿಯಅ ಧಿಕಾರಿಗಳು ಇದನ್ನು ಗಮನಿಸಿ ಪೊಲೀಸರ ಕಾರ್ಯಕ್ಕೆ ಶಹಬ್ಟಾಸ್ ತಿಳಿಸಿದ್ದಾರೆ. ರೈಲ್ವೆಇಲಾಖೆ ಮೈಸೂರು ವಿಭಾಗದ ಡಿವಿಜನಲ್‌ಮ್ಯಾನೇಜರ್ ರಾಹುಲ್ ಅಗರ್‌ವಾಲ್ ಅವರು ಪೊಲೀಸರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.