ಕಾಲಮಿತಿಯೊಳಗೆ ಕಾಮಗಾರಿ ಮುಗಿಸಲು ಸೂಚನೆ
Team Udayavani, Nov 20, 2021, 10:34 AM IST
ಶಿವಮೊಗ್ಗ: ಜಿಲ್ಲೆಯಲ್ಲಿ ಸರ್ಕಾರದ ವಿವಿಧಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವಅಭಿವೃದ್ಧಿ ಕಾಮಗಾರಿಗಳನ್ನು ನಿಗ ದಿಪಡಿಸಿದಕಾಲಮಿತಿಯೊಳಗಾಗಿ ಪೂರ್ಣಗೊಳಿಸಿ, ವರದಿನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಡಾ|ಎಸ್. ಸೆಲ್ವಕುಮಾರ್ ಅವರು ಜಿಲ್ಲಾ ಮಟ್ಟದಅ ಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೆ ಅನುಮೋದನೆಗೊಂಡುಕಾಮಗಾರಿಗಳಿಗೆ ಬಿಡುಗಡೆಯಾಗಿರುವ ಅನುದಾನಸರ್ಕಾರಕ್ಕೆ ವಾಪಸ್ ಹೋಗದಂತೆ ಬಿಡುಗಡೆಯಾದಅನುದಾನವನ್ನು ನಿಯೋಜಿತ ಉದ್ದೇಶಕ್ಕಾಗಿ ಸಕಾಲದಲ್ಲಿಸದ್ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾ ಧಿಸುವಂತೆ ಸೂಚಿಸಿದರು.
ವಸತಿ ಯೋಜನೆಗಳಲ್ಲಿ ಆಯ್ಕೆಯಾದಫಲಾನುಭವಿಗಳು ಕಳೆದ ಕೆಲವು ವರ್ಷಗಳಿಂದ ಮನೆಕಟ್ಟಿಕೊಳ್ಳದಿರುವುದು ಗಮನಕ್ಕೆ ಬಂದಿದೆ. ಅಲ್ಲದೇಕಳೆದ ಸಾಲಿನಲ್ಲಿ ಮಳೆಯಿಂದ ಪೂರ್ಣ ಪ್ರಮಾಣದಲ್ಲಿಹಾಗೂ ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ತಿಹಾಗೂ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರಅನುದಾನ ಬಿಡುಗಡೆ ಮಾಡಿದೆ.
ಆದಾಗ್ಯೂ ಅನೇಕಫಲಾನುಭವಿಗಳು ಕಟ್ಟಡ ನಿರ್ಮಿಸಿಕೊಳ್ಳುವಲ್ಲಿಹಿಂದೇಟು ಹಾಕುತ್ತಿರುವ ಬಗ್ಗೆ ಅ ಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಸಂತ್ರಸ್ಥ ಫಲಾನುಭವಿಗಳು,ಈಗಾಗಲೇ ಮನೆ ನಿರ್ಮಿಸಿಕೊಂಡಲ್ಲಿ ಅಥವಾ ದುರಸ್ತಿಮಾಡಿಸಿಕೊಂಡಲ್ಲಿ ಅಂತಹ ಫಲಾನುಭವಿಗಳಿಗೆನಿಯಮಾನುಸಾರ ಸಹಾಯಧನ ವಿತರಿಸಲು ಕ್ರಮಕೈಗೊಳ್ಳುವಂತೆ ಅ ಧಿಕಾರಿಗಳಿಗೆ ಸೂಚಿಸಿದರು.ಕೊರೊನಾ ನಿಯಂತ್ರಣಕ್ಕೆ ಸಂಬಂಧಿ ಸಿದಂತೆಜಿಲ್ಲೆಯಲ್ಲಿ ಈಗಾಗಲೆ ಶೇ.90 ರಷ್ಟು ಮಂದಿ ಮೊದಲಹಂತದ ಹಾಗೂ ಶೆ.52 ರಷ್ಟು ಮಂದಿ 2ನೇ ಹಂತದ ಲಸಿಕೆ ಪಡೆದಿದ್ದಾರೆ.
ಆದರೆ 2ನೇ ಹಂತದ ಲಸಿಕೆ ಪಡೆಯುವಲ್ಲಿಬಹುಸಂಖ್ಯೆಯ ಜನ ಹಿಂದೇಟು ಹಾಕುತ್ತಿದ್ದಾರೆ.ಎರಡನೇ ಡೋಸ್ ಪಡೆಯದವರ ಮನವೊಲಿಸಿ ಲಸಿಕೆಕೊಡಿಸುವಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತರುಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ.
ಲಸಿಕೆ ಪಡೆಯುವುದರಿಂದ ಮುಂದಿನದಿನಗಳಲ್ಲಿ ಸಂಭವನೀಯ ಕೊರೊನಾ ಅಲೆಯನ್ನುಸಮರ್ಥವಾಗಿ ಎದುರಿಸಲು ಸಾಧ್ಯ. ಆದ್ದರಿಂದಈವರೆಗೆ ಲಸಿಕೆ ಪಡೆಯದವರು ತಮ್ಮ ಸಮೀಪದಆರೋಗ್ಯ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆಯುವಂತೆಮಾಡಲು ಆರೋಗ್ಯ ಇಲಾಖೆ ಅ ಧಿಕಾರಿ, ಸಿಬ್ಬಂ ದಿಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿಎಂದು ಸೂಚಿಸಿದರು.
ಸಭೆಯಲ್ಲಿ ಆರೋಗ್ಯ, ಶಿಕ್ಷಣ,ಕೃಷಿ ಮುಂತಾದ ಇಲಾಖೆಗಳ ಮೂಲಕ ಜಿಲ್ಲೆಯಲ್ಲಿಅನುಷ್ಠಾನದಲ್ಲಿರುವ ಯೋಜನೆಗಳ ಪ್ರಗತಿ ಮಾಹಿತಿಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಮುಖ್ಯ ಕಾರ್ಯನಿರ್ವಾಹಕ ಅ ಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾ ಧಿಕಾರಿ ಡಾ| ನಾಗೇಂದ್ರ ಎಫ್.ಹೊನ್ನಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದಅಧಿ ಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.