ಶಿವಮೊಗ್ಗ : ಬೀದಿ ಬದಿ ಅಂಗಡಿಗಳ ತೆರವು ಕಾರ್ಯಾಚರಣೆ : ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಸ್ಥ
Team Udayavani, Jul 13, 2022, 8:06 PM IST
ಶಿವಮೊಗ್ಗ : ಪಟ್ಟಣ ಪಂಚಾಯಿತಿ ಸಿಬ್ಬಂದಿ ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಬೀದಿ ಬದಿ ವ್ಯಾಪಾರ ನಡೆಸುತ್ತಿದ್ದವರ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ವೇಳೆ ಬೀದಿ ಬದಿ ವ್ಯಾಪಾರಸ್ಥರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಶಿವಮೊಗ್ಗದ ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ಬುಧವಾರ ಅಧಿಕಾರಿಗಳು ಬೀದಿ ಬದಿಯಲ್ಲಿರುವ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದಾರೆ ಈ ವೇಳೆ ಬೀದಿ ಬದಿ ವ್ಯಾಪಾರ ನಡೆಸುತ್ತಿದ್ದ ವೀರಭದ್ರಪ್ಪ ಶಂಕ್ರಪ್ಪ ಅವರಿಗೆ ಸೇರಿದ ಕಬ್ಬಿನ ಹಾಲಿನ ಗಾಡಿಯನ್ನು ಜೆಸಿಬಿ ಮೂಲಕ ತೆರವುಗೊಳಿಸಲು ಮುಂದಾಗಿದ್ದಾರೆ ಈ ವೇಳೆ ವೀರಭದ್ರಪ್ಪ ಅಧಿಕಾರಿಗಳಲ್ಲಿ ಮಳೆಗಾಲದಲ್ಲಿ ಅಂಗಡಿ ತೆರವುಗೊಳಿಸಬೇಡಿ ಎಂದು ಕೇಳಿಕೊಂಡಿದ್ದಾರೆ, ಆದರೆ ಅಧಿಕಾರಿಗಳು ವ್ಯಾಪಾರಸ್ಥರ ಮಾತಿಗೆ ಬೆಲೆ ಕೊಡದೆ ವೀರಭದ್ರಪ್ಪ ಅವರಿಗೆ ಸೇರಿದ ಕಬ್ಬಿಣ ಹಾಲಿನ ಗಾಡಿಯನ್ನು ಜೆಸಿಬಿ ಯಂತ್ರದಿಂದ ಜಖಂಗೊಳಿಸಿದ್ದಾರೆ, ಇದರಿಂದ ನೊಂದ ವೀರಭದ್ರಪ್ಪ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ಅಸ್ವಸ್ಥಗೊಂಡ ಅವರನ್ನು ಕೂಡಲೇ ಶಿಕಾರಿಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಮಳೆಗಾಲದಲ್ಲಿ ತೆರವುಗೊಳಿಸ ಬೇಡಿ ಎಂದು ಸೊರಬ ಶಾಸಕ ಕುಮಾರ ಬಂಗಾರಪ್ಪ ಅವರ ಬಳಿ ಬೀದಿ ಬದಿ ವ್ಯಾಪಾರಸ್ಥರು ಮನವಿಯನ್ನು ಮಾಡಿದ್ದಾರೆ.
ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : 950 ಕೋಟಿ ರೂ. ಬ್ಯಾಂಕ್ ಖಾತ್ರಿ ನೀಡಿ: ವಿವೋಗೆ ಹೈಕೋರ್ಟ್ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Controversy: ಅಂಬೇಡ್ಕರ್ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
Karnataka: ಮೀಸಲು ಪ್ರಸ್ತಾಪ ಇಲ್ಲ: ರಾಜ್ಯ ಸರ್ಕಾರ
MUST WATCH
ಹೊಸ ಸೇರ್ಪಡೆ
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Controversy: ಅಂಬೇಡ್ಕರ್ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ
By-election: ರಾಹುಲ್ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.