Shivamogga: ಕೊಲೆಗೆ ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡು
Team Udayavani, Aug 12, 2024, 6:15 PM IST
ಶಿವಮೊಗ್ಗ: ಸಾರ್ವಜನಿಕರನ್ನ ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ರೌಡಿ ಶೀಟರ್ ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಶೀಟರ್ ಭವಿತ್ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಕಳೆದ ರಾತ್ರಿ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭವಿತ್ ಮತ್ತು ಇತರೆ ಇಬ್ಬರು ಸಾರ್ವಜನಿಕರನ್ನು ಅಡ್ಡಗಟ್ಟಿ ಹಲ್ಲೆ ಮತ್ತು ಕೊಲೆಗೆ ಯತ್ನಿಸಿದ್ದಾರೆ. ಈ ಸಂಬಂಧ ಆರೋಪಿಗಳ ಹುಡುಕಾಟ ನಡೆಯುತಿತ್ತು. ರೌಡಿ ಶೀಟರ್ ಭವಿತ್ ಕುರಿತು ಮಾಹಿತಿ ಸಂಗ್ರಹಿಸಿ ಬಂಧನಕ್ಕೆ ತೆರಳಿದ್ದಾಗ ಆತ ಪೊಲೀಸ್ ಸಿಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಪಿಎಸ್ಐ ಸುನಿಲ್ ಅವರು ಭವಿತ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ಗಾಯಾಳು ಪೊಲೀಸ್ ಸಿಬಂದಿ ಮತ್ತು ರೌಡಿ ಶೀಟರ್ ಭವಿತ್ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭವಿತ್ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್. ಆತನ ವಿರುದ್ಧ ಕೊಲೆ ಪ್ರಕರಣ, ಕೊಲೆ ಯತ್ನ, ರಾಬರಿ ಸೇರಿ ಒಟ್ಟು ಏಳು ಪ್ರಕರಣಗಳಿವೆ. ವಿನೋಬಗರ ಠಾಣೆ ವ್ಯಾಪ್ತಿಯಲ್ಲಿ ಭವಿತ್ ಕಾಲಿಗೆ ಗುಂಡು ಹಾರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.