ಗುಪ್ತಚರ ವಿಭಾಗಕ್ಕೆ ಮತ್ತಷ್ಟು ಬಲ: ಸಚಿವ ಆರಗ


Team Udayavani, Aug 25, 2021, 6:51 PM IST

Shivamogga Udayavani News

ಶಿವಮೊಗ್ಗ: ಮಾದಕ ದ್ರವ್ಯಸೇವನೆಯಿಂದ ಸುದ್ದಿಯಾಗಿದ್ದ ಚಿತ್ರನಟಿಯರು ಮಾದಕ ವಸ್ತು ಸೇವಿಸುತ್ತಿದ್ದರು ಎಂಬ ಬಗ್ಗೆ ಹೈದ್ರಾಬಾದ್‌ ಫೋರೆನ್ಸಿಕ್‌ ಲ್ಯಾಬ್‌ನಿಂದ ದೃಢೀಕರಿಸಿದ ಅ ಧಿಕೃತ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ನಿಯಮಾನುಸಾರ ಅವರನ್ನು ಕಾನೂನು ಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಅವರು ಮಂಗಳವಾರ ಮಾಚೇನಹಳ್ಳಿ ಕೆಎಸ್‌ ಆರ್‌ಪಿ-8 ಬಟಾಲಿಯನ್‌ಗೆ ಭೇಟಿ ನೀಡಿ ಅಧಿ  ಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ರಾಜ್ಯದಲ್ಲಿ ನಡೆಯುತ್ತಿರುವ ಮಾದಕ ದ್ರವ್ಯ ಸಾಗಾಟ ಮತ್ತು ಅಕ್ರಮ ಮಾರಾಟ ತಡೆಗೆ ಪೊಲೀಸ್‌ ಇಲಾಖೆ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇಂತಹ ದುಷ್ಕೃತ್ಯದಲ್ಲಿ ಭಾಗಿಯಾಗುವ ಯಾರೇ ಆದರೂ ದಂಡನೆಗೆ ಗುರಿಪಡಿಸಲಾಗುವುದು. ಇದರ ತಡೆಗಾಗಿಯೇ ಇಲಾಖೆಯಲ್ಲಿ ಪ್ರತ್ಯೇಕ ತಂಡ ರಚಿಸಲಾಗಿದೆ.

ಪೊಲೀಸ್‌ ಇಲಾಖೆಯ ಗುಪ್ತಚರ ವಿಭಾಗವನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು. ರಾಜ್ಯದಲ್ಲಿಯೂ ´ೋರೆನ್ಸಿಕ್‌ ಲ್ಯಾಬ್‌ನ್ನು ಅತ್ಯಾಧುನಿಕ ರೀತಿಯಲ್ಲಿ ಉನ್ನತೀಕರಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಪೊಲೀಸ್‌ ಇಲಾಖೆಯ ಅ ಧಿಕಾರಿ ಮತ್ತು ಸಿಬ್ಬಂ ದಿಗೆ ಬಡ್ತಿ, ನೇಮಕಾತಿ ಸಂದರ್ಭ ಕೈಗೊಳ್ಳಬಹುದಾದ ಕೆಲವು ವಿಷಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಪತ್ರ ಮುಖೇನ ತಿಳಿಸಿದ್ದಾರೆ. ಈ ಸಂಬಂಧ ಇಲಾಖೆಯ ಹಿರಿಯ ಅ ಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅಲ್ಲದೇ ಪೊಲೀಸ್‌ ಅಧಿ ಕಾರಿ-ಸಿಬ್ಬಂ ದಿಗೆ ಸುಸಜ್ಜಿತ ವಸತಿ ಗೃಹ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

ಇಲಾಖೆಯಲ್ಲಿ ಡಿಎಆರ್‌, ಪೊಲೀಸ್‌, ಕೆಎಸ್‌ಆರ್‌ಪಿ ಇನ್ನೂ ಹಲವು ವಿಭಾಗಗಳಿವೆ. ಅವುಗಳಲ್ಲಿನ ನುರಿತ ಸಿಬ್ಬಂ ದಿಯನ್ನು ಸಕಾಲಿಕವಾಗಿ ಬಳಸಿಕೊಳ್ಳಲು ಅನುಕೂಲವಾಗುವಂತೆ ಇಲಾಖೆಯ ಅ ಧೀನಕ್ಕೊಳಪಡಿಸುವ ಬಗ್ಗೆ ಚರ್ಚಿಸಲಾಗುವುದು. ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿ ಸಿದಂತೆ ಈಗಾಗಲೇ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದು, ಅಂತೆಯೇ ರಾಜ್ಯದಲ್ಲಿ ಸಂಘರ್ಷಕ್ಕೆ ಅವಕಾಶವಿಲ್ಲದಂತೆ ಹಬ್ಬ-ಹರಿದಿನಗಳನ್ನು ಆಚರಿಸಲು ಸೂಚನೆ ನೀಡಲಾಗುವುದು ಎಂದರು.

ರಾಜ್ಯದಲ್ಲಿ ಈಗಾಗಲೇ ಔರಾದ್ಕರ್‌ ವರದಿ ಶೇ.80ರಷ್ಟು ಅನುಷ್ಠಾನಕ್ಕೆ ಬಂದಿದೆ. ತಾಂತ್ರಿಕ ತೊಡಕುಗಳಿಂದ ವರದಿಯ ಬಾಕಿ ಉಳಿದಿರುವ ಅಂಶಗಳ ಅನುಷ್ಠಾನಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು. ಪೊಲೀಸರು ಸಾರ್ವಜನಿಕರೊಂದಿಗೆ ಸ್ನೇಹದಿಂದ ವರ್ತಿಸಬೇಕು. ಹಾಗೂ ಅವರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಬೇಕು. ಅದಕ್ಕಾಗಿ ಪೊಲೀಸ್‌ ಸಿಬ್ಬಂ  ದಿಗೆ ಅಗತ್ಯ ತರಬೇತಿ ನೀಡಲಾಗುವುದು ಎಂದರು.

ಸಹಾಯವಾಣಿಗೆ ಮತ್ತಷ್ಟು ಸೌಲಭ್ಯ: ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ರಕ್ಷಣೆ ಬಗ್ಗೆ ವಿಶೇಷ ಕ್ರಮ ವಹಿಸಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಪರಿಶೀಲಿಸಿ ಇಲಾಖೆಯ ನ್ಯೂನತೆಗಳನ್ನು ಅರಿತು ಸರಿಪಡಿಸಲು ಯತ್ನಿಸಲಾಗುವುದು. ಅಲ್ಲದೇ ಪೊಲೀಸ್‌ ಬಲವನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ನೆಮ್ಮದಿಯ ಬದುಕಿಗೆ ಅನುಕೂಲವಾಗುವಂತೆ 112 ಸಹಾಯವಾಣಿ ಕೇಂದ್ರ ಆರಂಭಿಸಿದ್ದು, ಈ ಕೇಂದ್ರವನ್ನು ಅತ್ಯಾಧುನಿಕ ರೀತಿಯಲ್ಲಿ ಇನ್ನಷ್ಟು ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಹೊಸ ವಾಹನಗಳನ್ನು ಖರೀದಿಸಲು ಹಾಗೂ ಸಿಬ್ಬಂದಿ ನಿಯೋಜಿಸಲು ಗಮನಹರಿಸಲಾಗುವುದು. ಅತ್ಯಲ್ಪ ಅವ ಧಿಯಲ್ಲಿ ನೊಂದ ನಾಗರಿಕರನ್ನು ರಕ್ಷಿಸಲು ಹಾಗೂ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಈ ಪಡೆ ಕಾರ್ಯಪ್ರವೃತ್ತವಾಗಲಿದೆ ಎಂದರು.

ಎಲ್ಲಾ ನಗರಗಳ ಪ್ರಮುಖ ಸ್ಥಳಗಳಲ್ಲಿ ಪೊಲೀಸ್‌ ಇಲಾಖೆಯಿಂದ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಂತೆಯೇ ಖಾಸಗಿ ಸಂಘ-ಸಂಸ್ಥೆಗಳವರು, ಉದ್ದಿಮೆದಾರರು ಸಹ ಕ್ಯಾಮೆರಾ ಅಳವಡಿಸಿಕೊಳ್ಳಲು ಸೂಚಿಸಲಾಗಿದೆ. ಈ ಕ್ಯಾಮೆರಾಗಳ ಚಿತ್ರಿತ ಭಾಗವನ್ನು ಪೊಲೀಸ್‌ ಇಲಾಖೆಯ ಅಗತ್ಯಗಳಿಗೆ ಒದಗಿಸುವಂತೆಯೂ ಸೂಚಿಸಲಾಗಿದೆ ಎಂದರು. ಕನ್ನಡಿಗರ ರಕ್ಷಣೆಗೆ ಬದ್ಧ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಗುರುತಿಸಿ ಸುರಕ್ಷಿತವಾಗಿ ಕರೆತರಲು ಹಿರಿಯ ಪೊಲೀಸ್‌ ಅ ಧಿಕಾರಿ ಉಮೇಶ್‌ಕುಮಾರ್‌ ಅವರನ್ನು ನೇಮಿಸಲಾಗಿದೆ.

ಅವರು ಕೇಂದ್ರ ರಕ್ಷಣಾ ಇಲಾಖೆಯೊಂದಿಗೆ ಸಂಪರ್ಕ ಸಾಧಿ ಸಿ, ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಪ್ರಯತ್ನ ಮುಂದುವರೆಯಲಿದೆ. ಈಗಾಗಲೇ ರಾಜ್ಯದ ಒಂಬತ್ತು ಜನರನ್ನು ತಾಯ್ನಾಡಿಗೆ ಕರೆತರಲಾಗಿದೆ ಎಂದರು. ವಿಧಾನ ಪರಿಷತ್‌ ಸದಸ್ಯ ರುದ್ರೇಗೌಡ, ಶಾಸಕ ಕೆ.ಬಿ.ಅಶೋಕ್‌ ನಾಯ್ಕ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

9

Shivamogga: ಅಯೋಧ್ಯೆ ರೀತಿ ವ‌ಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.