ಶಿವಮೊಗ್ಗದ ನೇರಲಗಿ ಕಾಡಿನಲ್ಲಿ ಯುವತಿ ಅನುಮಾನಾಸ್ಪದ ಸಾವು : ಕೊಲೆ ಶಂಕೆ
Team Udayavani, Aug 26, 2021, 5:52 PM IST
ಪ್ರಾತಿನಿಧಿಕ ಚಿತ್ರ
ಶಿವಮೊಗ್ಗ : ಜಿಲ್ಲೆಯ ಬೆಳ್ಳೂರು ಸಮೀಪದ ನೇರಲಗಿ ಕಾಡಿನಲ್ಲಿ ಯುವತಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜೋಗ ಸಮೀಪದ ಗ್ರಾಮದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಕವಿತಾ ಅನುಮಾನಾಸ್ಪದವಾಗಿ ಮೃತಪಟ್ಟ ಯುವತಿ. ಪ್ರೀತಿಯಲ್ಲಿ ಮೂಡಿದ ಅನುಮಾನದಂದಾಗಿ ತನ್ನ ಪ್ರಿಯಕರನಿಂದಲೇ ಕೊಲೆ ಮಾಡಿರಬಹುದು ಎನ್ನಾಲಾಗುತ್ತಿದೆ.
ಇದನ್ನೂ ಓದಿ : ಕಾಂಗ್ರೆಸ್ಸಿನವರು ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ : ಆರಗ ಜ್ಞಾನೇಂದ್ರ
ಕಳೆದ ಏಳು ವರ್ಷದಿಂದ ಶಿವಮೂರ್ತಿ ಹಾಗೂ ಕವಿತಾ ಪ್ರೀತಿಸುತ್ತಿದ್ದರು. ನಿನ್ನೆ ಶಿವಮೂರ್ತಿ ಜೊತೆಗೆ ಆತನ ಗ್ರಾಮ ಬೆಳ್ಳೂರು ಸಮೀಪದ ಕಗ್ಗಲಿ ಜಡ್ಡು ಗ್ರಾಮಕ್ಕೆ ಬಂದಿದ್ದಳು. ಸಂಜೆ ಇಬ್ಬರೂ ಬೈಕ್ ನಲ್ಲಿ ನೇರಲಗಿ ಸಮೀಪದ ಹೊಸಕೆರೆಯ ಸಮೀಪದ ಕಾಡಿಗೆ ತೆರಳಿದ್ದು, ಈ ಸಂದರ್ಭದಲ್ಲಿ ಶಿವಮೂರ್ತಿ ಕವಿತಾಳ ಕತ್ತನ್ನು ವೇಲಿನಿಂದ ಬಿಗಿದು ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಕವಿತಾ ಇತ್ತೀಚೆಗೆ ಇನ್ನೊಬ್ಬನನ್ನು ಪ್ರೀತಿಸಲಾರಂಭಿಸಿದ್ದಳು ಎನ್ನಲಾಗಿದ್ದು, ಇದೇ ಕಾರಣದಿಂದ ಕವಿತಾಳನ್ನು ಕೊಂದು ಶಿವಮೂರ್ತಿಯೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಹೇಳಲಾಗುತ್ತಿದೆ.
ಇನ್ನು, ರಿಪ್ಪನ್ ಪೇಟೆಯಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಶಿವಮೂರ್ತಿ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ, ಆತನನ್ನು ಚಿಕಿತ್ಸೆಗಾಗಿ ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಮೊಘಲರು ದುಷ್ಟರಲ್ಲ : ಬಾಲಿವುಡ್ ನಿರ್ದೇಶಕ ಕಬೀರ್ ಖಾನ್ ಹೇಳಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.