ದೇವರ ದಾಸಿಮಯ್ಯ ಮಹಾನ್ ಸಾಧು
Team Udayavani, Apr 18, 2021, 6:47 PM IST
ಶಿವಮೊಗ್ಗ: ಶಿವನ ಮೇಲೆ ಅಪಾರ ನಂಬಿಕೆಯನ್ನು ಇಟ್ಟಿದ್ದವರು, ದೈವತ್ವದಲ್ಲೇ ತಮ್ಮ ಕಾಯಕವನ್ನು ನಿರ್ವಹಿಸುತ್ತಿದ್ದವರು. ಆದಿ ಕಾಲದಿಂದಲೂ ಅನೇಕ ಋಷಿ-ಮುನಿಗಳು ತಮ್ಮ ಅಮೋಘ ತಪಸ್ಸಿ ನಿಂದ ಸಿದ್ಧಿಯನ್ನು ಪಡೆದು ಆಧ್ಯಾತ್ಮಿಕತೆಯ ಮಹತ್ವವನ್ನು ಇಡೀ ವಿಶ್ವಕ್ಕೆ ಸಾರಿದಂತಹ ಸಾಧುಗಳಲ್ಲೊಬ್ಬರು ದೇವರ ದಾಸಿಮಯ್ಯನವರು ಎಂದು ಅಪರ ಜಿಲ್ಲಾ ಧಿಕಾರಿ ಅನುರಾಧಾ ಮಾತನಾಡಿದರು.
ನಗರದ ಕುವೆಂಪು ರಂಗ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ದೇವರದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇವರ ದಾಸಿಮಯ್ಯ ಸಜ್ಜನರು, ದೈವಭಕ್ತರು, ಧಾರಾಳತನವುಳ್ಳವರೂ ಆಗಿದ್ದು, ಯಾರೇ ಕಷ್ಟದಲ್ಲಿದ್ದರೂ ತಮ್ಮ ಶಕ್ತಿ ಮೀರಿ ಸಹಾಯ ಮಾಡುತ್ತಿದ್ದರು. ಪ್ರತಿಯೊಬ್ಬ ಮಾನವನು, ಉತ್ತಮ ಸಂಸ್ಕೃತಿ, ಧರ್ಮ, ಆಚಾರವಾಗಿ ನಡೆಸಬೇಕೆಂಬ ಸಂದೇಶವನ್ನು ತಮ್ಮ ವಚನಗಳ ಮೂಲಕ ದಾಸಿಮಯ್ಯ ಪ್ರಪಂಚಕ್ಕೆ ತಿಳಿಸಿಕೊಟ್ಟವರು ಎಂದು ತಿಳಿಸಿದರು.
ಈ ರೀತಿಯಾಗಿ ದೇವರನ್ನು ಒಲಿಸಲು ಸನ್ಯಾಸತ್ವವೇ ಸರಿಯಾದ ಮಾರ್ಗವೆಂದು ಅರಿತು ಅದನ್ನು ಸಿದ್ಧಿªಸಿಕೊಳ್ಳಲು ತಪಸ್ಸನ್ನು ಆಚರಿಸಲು ಕಾಡಿಗೆ ಹೊರಟವರು. ಅದನ್ನು ಸಿದ್ದಿಸಿದ ನಂತರ ದೇವ-ದೇವತೆಯರು ಹಾಗೂ ಮಾನವರಿಗೆ, ತಮ್ಮ ಮಾನ-ಶರೀರ ಸಂರಕ್ಷಣೆಯನ್ನು ಕಾಪಾಡಲು ವಸ್ತವನ್ನು ತಯಾರಿಸುವ ಕಾರ್ಯ ನಿನ್ನಿಂದ ಆಗಬೇಕಿದೆ ಎಂಬ ಶಿವನ ಆಜ್ಞೆಯಂತೆ ವಸ್ತÅವು ಜನರ ಮಾನವನ್ನು ಕಾಪಾಡುವ ಮತ್ತು ದೇಹಕ್ಕೆ ರಕ್ಷಣೆಕೊಡುವ ಭಗವಂತನ ಒಂದು ವರಪ್ರದಾನವೆಂದು ತಿಳಿದು ದಾಸಿಮಯ್ಯ ವಸ್ತÅ ನಿರ್ಮಿಸುವ ಕಲೆಯನ್ನು ಪಾರಂಗತಗೊಳಿಸಿಕೊಂಡು ಲೋಕಕ್ಕೆ ಬಟ್ಟೆಯನ್ನು ಅರ್ಪಿಸಿದರು.
ದಂಪತಿಗಳಿಬ್ಬರೂ, ಸೀರೆ ನೇಯ್ಗೆ ಉದ್ಯೋಗದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡರು. ನೇಯ್ಗೆಯನ್ನು ದೇವರ ಕಾರ್ಯದಂತೆ ಆಚರಿಸುತ್ತಾ ಇತರರಿಗೆ ಮಾದರಿಯಾಗಿ ಇನ್ನೂ ಅನೇಕ ಮಂದಿಗೆ ಉದ್ಯೋಗ ಕಲಿಸಿ ಜೀವನೋಪಾಯಕ್ಕೆ ದಾರಿ ತೋರಿಸಿದವರು ಎಂದು ಹೀಗೆ ಶಿವನ ಮೇಲೆ ಇಟ್ಟಿದ್ದ ಅಪಾರ ದೈವ ಭಕ್ತಿಯ ಕುರಿತಂತೆ ವಿವರಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕ ಉಮೇಶ್, ಮಲಾ°ಡ್ ದೇವಾಂಗ ಸಮಾಜದ ಅಧ್ಯಕ್ಷರು ಗಿರಿಯಪ್ಪ, ಕಾರ್ಯದರ್ಶಿ ಜಿ. ಮೋಹನ್ ಮೂರ್ತಿ, ನಗರ ದೇವಾಂಗ ಸಂಘದ ಅಧ್ಯಕ್ಷರು ಸತೀಶ್ ಡಿ., ಬನಶಂಕರಿ ಮಹಿಳಾ ಸಂಘದ ಅಧ್ಯಕ್ಷರು ಕೆ. ಸುಲೋಚನ ಶಂಕರ ಮೂರ್ತಿ, ಸಮಾಜದ ಮುಖಂಡರಾದ ಕಾಂತೇಶ್, ಶಿವಾನಂದ ಸ್ವಾಮಿ ಎಸ್.ಎಸ್. ವಿಜಯ ಬಾಸ್ಕರ್, ಮಂಜುನಾಥ್ ರಾಮಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Sagara: ಕುವೆಂಪು ವಿವಿ ಭ್ರಷ್ಟಾಚಾರ; ತನಿಖೆಗೆ ರಾಜ್ಯಪಾಲರಿಗೆ ಮನವಿ
Thirthahalli: ಚುನಾವಣೆ ಸಮಯದಲ್ಲಿ ರಾಮ ರಾಮ – ವರ್ಷವಾದ ನಂತರ ರಾಮನಿಗೆ ನಾಮ..!?
Hosanagar: ನಾಪತ್ತೆಯಾದ 78 ದಿನದ ಬಳಿಕ ವ್ಯಕ್ತಿಯ ಮೃತದೇಹ ಪತ್ತೆ, ತನಿಖೆಗೆ ಪತ್ನಿಯ ಆಗ್ರಹ
Ripponpet ಬೀದಿ ನಾಯಿ ಕೊಂದು ಆಟೋಗೆ ಕಟ್ಟಿಕೊಂಡು ಎಳೆದೊಯ್ದ ಕ್ರೂರಿ
MUST WATCH
ಹೊಸ ಸೇರ್ಪಡೆ
Arrested: ರೌಡಿಯ ಕೊಂದು ಸುಟ್ಟು ಹಾಕಿದ್ದ ರೌಡಿಶೀಟರ್ ಸೆರೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ