ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ
Team Udayavani, May 29, 2024, 2:06 PM IST
ಶಿವಮೊಗ್ಗ: ಈಶ್ವರಪ್ಪ ಅವರಿಗೊಂದು ನ್ಯಾಯ ನಾಗೇಂದ್ರನಿಗೆ ಒಂದು ನ್ಯಾಯನಾ? ಈ ಹಿಂದೆ ಪ್ರಕರಣವೊಂದರಲ್ಲಿ ಕೆ.ಎಸ್ ಈಶ್ವರಪ್ಪ ರಾಜೀನಾಮೆ ಕೊಟ್ಟರು. ನಾಗೇಂದ್ರ ಯಾಕೆ ರಾಜೀನಾಮೆ ಕೊಟ್ಟಿಲ್ಲ. 87 ಕೋಟಿ ರೂ ವಂಚನೆಯಾಗಿದೆ, ಇದುವರೆಗೆ ಒಬ್ಬರೇ ಒಬ್ಬರನ್ನು ಬಂಧಿಸಿಲ್ಲ. ಪ್ರಕರಣ ಮುಚ್ಚಿ ಹಾಕಲು ಸಚಿವರನ್ನು ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ ಎಂದು ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡ ಇಲಾಖೆಯ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿ ಮನೆಗೆ ಭೇಟಿ ಕೊಟ್ಟಿದ್ದೆ. ಚಂದ್ರಶೇಖರ್ ಪ್ರಾಮಾಣಿಕ ಅಧಿಕಾರಿ. ಬಡವರ ಮಕ್ಕಳ ಶಿಕ್ಷಣಕ್ಕೆ ಆರೋಗ್ಯಕ್ಕೆ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಮಾಡಲಾಗಿತ್ತು. 87 ಕೋಟಿ ಅನ್ಯ ಕಾರ್ಯಕ್ಕೆ ವರ್ಗಾವಣೆ ಮಾಡಲಾಗಿದೆ, ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಅಧಿಕಾರಿ ಹೆಸರು ಬರೆದಿದ್ದಾರೆ ಎಂದರು.
ಪರಿಶಿಷ್ಟ ಅಭಿವೃದ್ಧಿ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಈ ಬಗ್ಗೆ ಗಮನ ಹರಿಸಬೇಕು. ನಿಮ್ಮ ಸಚಿವ ಶಾಮೀಲು ಆಗಿದ್ದರೂ ತಕ್ಷಣ ವಜಾ ಮಾಡಬೇಕಿತ್ತು. ನಿಮ್ಮ ಗೌರವ ಉಳಿಯಬೇಕಾದರೆ ಸಚಿವನನ್ನು ತಕ್ಷಣ ವಜಾ ಮಾಡಿ. ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಇಲ್ಲದಿದ್ದರೆ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅವರಿಂದ ತನಿಖೆ ಮಾಡಿಸಿ. ಇಲ್ಲದಿದ್ದರೆ ಈ ಪ್ರಕರಣದಲ್ಲಿ ನಿಮ್ಮ ಕೈವಾಡ ಇದೆಯೇನೋ ಎಂಬ ಅನುಮಾನ ಬರುತ್ತದೆ ಎಂದರು.
ಚಂದ್ರಶೇಖರ್ ಕುಟುಂಬಕ್ಕೆ 25 ಲಕ್ಷ ಪರಿಹಾರ ಕೊಡಬೇಕು. ಪೆನ್ ಡ್ರೈವ್ ಅನ್ನು ಕುಟುಂಬದ ಗಮನಕ್ಕೆ ತರದೇ ತೆಗೆದುಕೊಂಡು ಹೋಗಿದ್ದಾರೆ. ಅದರಲ್ಲಿ ಏನಿತ್ತು ಎಂಬ ಬಗ್ಗೆ ಬಹಿರಂಗ ಆಗಬೇಕು. ಸಚಿವರನ್ನು ವಜಾ ಮಾಡದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಸಚಿವ ನಾಗೇಂದ್ರ ವಜಾ ಮಾಡದಿದ್ದರೆ ಹೋರಾಟ ಮಾಡುತ್ತೇವೆ. ವಜಾ ಮಾಡದಿದ್ದರೆ ವಿಧಾನಸಭಾ ಕಲಾಪದಲ್ಲೂ ಹೋರಾಟ ಮಾಡುತ್ತೇವೆ. ರಾಜ್ಯಪಾಲರಿಗೆ ಈ ಬಗ್ಗೆ ದೂರು ಕೊಡುವ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.