ಸಿಗಂದೂರು ಸೇತುವೆ ಕಾಮಗಾರಿ ಸರಾಗ: ದೇಶದ 2ನೇ ಅತಿದೊಡ್ಡ ಸೇತುವೆಯ ಪೈಲ್ ಕ್ಯಾಪ್ ಅಳವಡಿಕೆ
Team Udayavani, Jul 9, 2022, 6:45 AM IST
ಶಿವಮೊಗ್ಗ:ರಾಜ್ಯದ ಪ್ರಮುಖ ಶಕ್ತಿಪೀಠ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಹಾಗೂ ದೇಶದ ಎರಡನೇ ಅತಿ ದೊಡ್ಡ ಕೇಬಲ್ ಸೇತುವೆ ನಿರ್ಮಾಣಕ್ಕಿದ್ದ ತೊಡಕುಗಳನ್ನು ಮೀರಿ ಪ್ರಮುಖ ಕಾಮಗಾರಿಯು ಅವಧಿಗೆ ಮುನ್ನವೇ ಮುಗಿದಿದೆ. ಕಾಮಗಾರಿಗೆ ಲಿಂಗನ ಮಕ್ಕಿ ಜಲಾಶಯದ ನೀರು ತೊಡಕಾಗುತ್ತಿದೆ ಎನ್ನಲಾಗಿತ್ತು.
ನೀರೇ ಸಮಸ್ಯೆ
ಕಾಮಗಾರಿಗೆ ಪ್ರಮುಖ ಹಂತವಾದ ಪೈಲ್ ಕ್ಯಾಪ್ ಅಳವಡಿಕೆಯೇ ಸವಾಲಾಗಿತ್ತು. ಎರಡು ವರ್ಷ ಕಳೆದರೂ 5 ಪೈಲ್ ಕ್ಯಾಪ್ ಮಾತ್ರ ಅಳವ ಡಿಸಲಾಗಿತ್ತು. ಬಾಕಿ 14 ಪೈಲ್ ಕ್ಯಾಪ್ ಅಳವಡಿಸಲು ಜಲಾಶಯದ ನೀರನ್ನು ಮೀಟರ್ (1768 ಅಡಿ)ಗೆ ತಗ್ಗಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೇಡಿಕೆ ಇಟ್ಟಿತ್ತು. ಕಳೆದ ವರ್ಷ ಉತ್ತಮ ಮಳೆಯಾಗಿ 1819 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ 1815 ಅಡಿವರೆಗೂ ನೀರು ಸಂಗ್ರಹವಾಗಿತ್ತು. ಆದ್ದರಿಂದ ನೀರನ್ನು ಒಂದೇ ಬಾರಿ ಇಳಿಸುವುದು ಸವಾಲಿನ ಕೆಲಸವಾಗಿತ್ತು. ಕೊನೆಗೂ ಮೇ ತಿಂಗಳಲ್ಲಿ ನೀರು ಇಳಿದು ಕಾಮಗಾರಿಗೆ ಅವಕಾಶ ಸಿಕ್ಕಿದೆ.
45 ದಿನದಲ್ಲೇ ಪೂರ್ಣ
2021ರಲ್ಲಿ ಕೆಪಿಸಿ (ಕರ್ನಾಟಕ ಪವರ್ ಕಾರ್ಪೊ ರೇಶನ್) ತಾಂತ್ರಿಕ ಕಾರಣಗಳಿಂದ ಜಲಾಶಯದಲ್ಲಿ ಹೆಚ್ಚಿನ ನೀರನ್ನು ಉಳಿಸಿತ್ತು. ಇದರಿಂದ ಕಾಮಗಾರಿಗೆ ನಿರೀಕ್ಷಿತ ವೇಗ ಸಿಕ್ಕಿರಲಿಲ್ಲ. ಸೇತುವೆ ನಿರ್ಮಾಣಕ್ಕೆ 2023ರ ಮೇ ವರೆಗೂ ಸಮಯ ನೀಡಲಾಗಿದ್ದು, ನಿಗದಿತ ಅವ ಧಿಯಲ್ಲಿ ಪೂರ್ಣಗೊಳ್ಳುವುದು ಅನುಮಾನವಾಗಿತ್ತು.
ನೀರು ಕಡಿಮೆ ಮಾಡಿಕೊಟ್ಟರೆ 120 ದಿನದಲ್ಲಿ ಕಾಮಗಾರಿ ಮುಗಿಸುತ್ತೇವೆ ಎಂದಿದ್ದ ಎಂಜಿನಿಯರ್‌ಗಳು ದಾಖಲೆ ಸಮಯದಲ್ಲಿ ಮುಗಿಸಿರುವುದು ಸ್ಥಳೀಯರಲ್ಲಿ ಸಂತಸ ತಂದಿದೆ. 300 ಜನ ಸಿಬಂದಿ ದಿನಪೂರ್ತಿ ಕೆಲಸ ಮಾಡಿದ್ದು, ಮುಂಗಾರು ಪೂರ್ವ ಮಳೆ ಇದ್ದಾಗಲೂ ಕಾಮಗಾರಿ ನಿಲ್ಲಿಸಲಿಲ್ಲ. ಮೇ 10ಕ್ಕೆ ಆರಂಭವಾದ ಕೆಲಸ ಜೂ.20ಕ್ಕೆ ಪೂರ್ಣಗೊಂಡಿದೆ. 423 ಕೋಟಿ ರೂ. ವೆಚ್ಚದ 2125 ಮೀಟರ್ ಉದ್ದದ ಸೇತುವೆ ಒಂದೂವರೆ ವರ್ಷದಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ.
2020-21ರಲ್ಲೂ ನೀರು ಹೆಚ್ಚಿದ್ದು ಕಾಮಗಾರಿಗೆ ತೊಡಕಾಗಿತ್ತು. ಮೇ ತಿಂಗಳಲ್ಲಿ ನೀರಿನ ಮಟ್ಟ ಕುಸಿ ದಿದ್ದರಿಂದ ಕಾಮಗಾರಿ 45 ದಿನದಲ್ಲೇ ಮುಗಿದಿದೆ.
– ಪೀರ್ ಪಾಶ, ಸೇತುವೆ ಕಾಮಗಾರಿ ಉಸ್ತುವಾರಿ ಎಂಜಿನಿಯರ್
– ಶರತ್ ಭದ್ರಾವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.