ಸ್ಮಾರ್ಟ್‌ಫೋನ್‌ ಸದ್ಬಳಕೆ ಮಾಡಿಕೊಳ್ಳಿ


Team Udayavani, Oct 13, 2020, 6:42 PM IST

SM-TDY-1

ಶಿಕಾರಿಪುರ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪೋಷಣ್‌ ಅಭಿಯಾನ ಉತ್ತಮ ಯೋಜನೆಯಾಗಿದ್ದು, ಅಂಗನವಾಡಿ ಶಿಕ್ಷಕಿಯರು ತಮಗೆ ನೀಡಿರುವ ಸ್ಮಾರ್ಟ್‌ ಫೋನ್‌ ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಪಟ್ಟಣದಲ್ಲಿ ಸೋಮವಾರ ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಪೋಷಣ್‌ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಫೋನ್‌ ವಿತರಣೆಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಂಗನವಾಡಿ ಮಕ್ಕಳು, ಗರ್ಭಿಣಿ, ಬಾಣಂತಿಯರ ದಾಖಲೆ ನಿರ್ವಹಣೆ ಸೇರಿದಂತೆ ಹಲವು ಉಪಯುಕ್ತ ಕೆಲಸ ಸ್ಮಾರ್ಟ್‌ ಫೋನ್‌ ಮೂಲಕ ಮಾಡಬಹುದು.ಈ ಯೋಜನೆಯಿಂದ ಜನರಿಗೆ ಸರಕಾರದಸೌಲಭ್ಯ ಸಿಗುತ್ತದೆ. ಅಲ್ಲದೇ, ಸೋರಿಕೆ ತಡೆಗಟ್ಟಬಹುದು ಎಂದರು.

ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ ವಾರಿಯರ್ ಆಗಿ ಸೇವೆಸಲ್ಲಿಸುತ್ತಿರುವುದಲ್ಲದೇ ಸರಕಾರದ ಹಲವು ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಹಾಗೂ ಸೌಲಭ್ಯಗಳನ್ನು ತಲುಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಅವರಿಗೆ ಸಮುದಾಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ತಾಲೂಕಿನಲ್ಲಿ 302 ಅಂಗನವಾಡಿಗಳಿದ್ದು, ಎಲ್ಲ ಕಡೆ ಮೂಲ ಸೌಕರ್ಯ ಕಲ್ಪಿಸುವುದಕ್ಕೆ ಆದ್ಯತೆ ನೀಡಲಾಗಿದೆ. ಎಲ್ಲಿಯಾದರೂ ತೊಂದರೆ ಆಗಿದ್ದರೆ ತಮಗೆ ತಿಳಿಸಿದಲ್ಲಿ ಆದ್ಯತೆ ಮೇರೆಗೆ ಉತ್ತಮ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು. ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ನಂದಕುಮಾರ್‌ ಮಾತನಾಡಿ, ತಾಲೂಕಿನಲ್ಲಿ 302 ಅಂಗನವಾಡಿ ಕೇಂದ್ರಗಳಿದ್ದು, ಮೇಲ್ವಿಚಾರಕಿಯರು ಸೇರಿ 312 ಸ್ಮಾರ್ಟ್‌ ಫೋನ್‌ ವಿತರಣೆ ಮಾಡಲಾಗುತ್ತಿದೆ. ತಾಲೂಕಿನ ಎಲ್ಲ ವಿಭಾಗದ ಶಿಕ್ಷಕಿಯರಿಗೆ ತರಬೇತಿ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಫೋನ್‌ಗೆ ಸಾಫ್ಟ್‌ವೇರ್‌ ಅಳವಡಿಕೆ, ಇನ್ನಷ್ಟು ತರಬೇತಿ ನಂತರ ಮುಂದಿನ ದಿನಗಳಲ್ಲಿ ಇಲಾಖೆ ಯೋಜನೆ ಸಂಪೂರ್ಣ ಗಣಕೀಕರಣಗೊಳ್ಳಲಿದೆ. ಅದರಿಂದ ಜನರಿಗೆ ಅನುಕೂಲವಾಗುತ್ತದೆ. ಯೋಜನೆ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ತಾ.ಪಂ. ಅಧ್ಯಕ್ಷ ಪ್ರಕಾಶ್‌ ಉಡುಗಣಿ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಕಾಶ್‌ ಚನ್ನಳ್ಳಿ, ಸದಸ್ಯರಾದ ಸುರೇಶ್‌ ನಾಯ್ಕ, ಮಲ್ಲಿಕ್‌ರೆಡ್ಡಿ, ಗೀತಾ ರಾಜಣ್ಣ, ಕವಲಿ ಸುಬ್ರಹ್ಮಣ್ಯ, ಗಾಯಿತ್ರಿ, ಈಸೂರು ಜಯಣ್ಣ, ಇಒ ಪರಮೇಶ್‌, ಜಿ.ಪಂ. ಸದಸ್ಯರಾದ ಅರುಂಧತಿ ರಾಜೇಶ್‌, ರೇಣುಕಾ ಹನುಮಂತಪ್ಪ, ಇಲಾಖೆ ಅಧಿಕಾರಿಗಳಾದ ರತ್ನಮ್ಮ, ಸುನೀತಾ ಮುಡೇರಾ, ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.