ಬೆಲೆ ಏರಿಕೆ ವಿರೋಧಿಸಿ ಏಕಾಂಗಿ ಧರಣಿ
Team Udayavani, Feb 9, 2021, 4:04 PM IST
ಶಿವಮೊಗ್ಗ: ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾಗಿದ್ದು ಇದರಿಂದ ಬಡಜನತೆಗೆ ಹೆಚ್ಚಿನ ಹೊರೆಯಾಗಿದೆ ಎಂದು ಆರೋಪಿಸಿ ಸಂಯುಕ್ತ ಜನತಾದಳದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಸೋಮವಾರ ಜಿಲ್ಲಾ ಧಿಕಾರಿಗಳ ಕಚೇರಿ ಆವರಣದಲ್ಲಿ ಏಕಾಂಗಿಯಾಗಿ ಧರಣಿ ಸತ್ಯಾಗ್ರಹ ನಡೆಸಿದರು. ಕಳೆದ ಮಾರ್ಚ್ ತಿಂಗಳಲ್ಲಿ 550 ರೂ. ಇದ್ದ ಅಡಿಗೆ ಅನಿಲ ದರವು ಡಿಸೆಂಬರ್‌ನಲ್ಲಿ 708 ರೂ. ತಲುಪಿ ಜನವರಿಯಲ್ಲಿ 740 ರೂ. ಹೆಚ್ಚಳವಾಗಿ ಬಡ ನಾಗರಿಕರಿಗೆ ಹೆಚ್ಚಿನ ಹೊರೆಯಾಗಿದೆ. ಈಗಾಗಲೇ ಕಳೆದ ಸೆಪ್ಟಂಬರ್‌ನಿಂದ ಗ್ಯಾಸ್‌ನ ಸಬ್ಸಿಡಿ ಹಣವನ್ನು ದೇಶದ ಬಡ ಜನರಿಗೆ ಕೇಂದ್ರ ಸರ್ಕಾರವು ಪಾವತಿಸುತ್ತಿಲ್ಲ ಎಂದು ದೂರಿದರು.
ಕೊರೊನಾ ಮಹಾಮಾರಿಯಿಂದ ಆರ್ಥಿಕವಾಗಿ ಬಡವರು ಸಂಕಷ್ಟದಲ್ಲಿರುವ ಇಂತಹ ಸಮಯದಲ್ಲಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರುವ ಸುಮಾರು 50 ಕೋಟಿ ಕುಟುಂಬಗಳಿಗೆ ತೊಂದರೆಯಾಗುತ್ತಿದೆ. 2021ರ ಡಿಸೆಂಬರ್ ಅಂತ್ಯದ ವೇಳೆಗೆ ಎಲ್‌ಪಿಜಿ ಸಿಲಿಂಡರ್ ದರ ಸುಮಾರು 1200 ರೂ. ಗಳಿಂದ 1700 ರೂ. ಹೆಚ್ಚಾಗಬಹುದೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಅದರಂತೆ ಪೆಟ್ರೋಲ್ ಮತ್ತು ಡೀಸೆಲ್‌ದರವು ಸಹ 1 ಲೀಟರ್‌ಗೆ 170 ರೂ. ಆಗುವುದರಲ್ಲಿ ಆಶ್ಚರ್ಯವಿಲ್ಲ. ಆದ್ದರಿಂದ ಕೇಂದ್ರ ಸರ್ಕಾರ ತಕ್ಷಣವೇ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ
ಒಂದು ವೇಳೆ ಬೆಲೆ ಏರಿಕೆ ದರವನ್ನು ನಿಯಂತ್ರಿಸದಿದ್ದಲ್ಲಿ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಪಕ್ಷದ ವತಿಯಿಂದ ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.