ಕೋವಿಡ್ ನಿಯಂತ್ರಣದಲ್ಲಿ ಆಯುಷ್ ವೈದ್ಯರ ಪಾತ್ರ ಅಪಾರ: ಕುಮಾರ್
Team Udayavani, Jun 6, 2020, 5:34 PM IST
ಸಾಂದರ್ಭಿಕ ಚಿತ್ರ
ಸೊರಬ: ಕೋವಿಡ್ ಹರಡುವಿಕೆ ತಡೆಗಟ್ಟುವಲ್ಲಿ ಆಯುಷ್ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರ ಶ್ರಮ ಸಾಕಷ್ಟಿದೆ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು. ಪಟ್ಟಣದ ರಂಗಮಂದಿರದಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ ಆಯುಷ್ ಇಲಾಖೆ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಚ್ಯವನಪ್ರಾಶ, ಆಯುಷ್ ಕಷಾಯ ಚೂರ್ಣ ಹಾಗೂ ಅಣುತೈಲ ವಿತರಿಸಿ ಅವರು ಮಾತನಾಡಿದರು.
ಕೋವಿಡ್ ಯೋಧರ ಪಡೆಯಲ್ಲಿ ಆಶಾ ಕಾರ್ಯಕರ್ತೆಯರು ಮೊದಲ ಸಾಲಿನಲ್ಲಿ ಗುರುತಿಸಿಕೊಳ್ಳುತ್ತಾರೆ. ಜೊತೆಯಲ್ಲಿ ಆಯುಷ್ ವೈದ್ಯರು ಸಹ ಸಾಕಷ್ಟ ಶ್ರಮ ವಹಿಸಿ ಇಂತಹ ತುರ್ತುಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಿರುವುದು ಶ್ಲಾಘನೀಯವಾಗಿದೆ. ಚ್ಯವನಪ್ರಾಶ, ಆಯುಷ್ ಕಷಾಯ ಚೂರ್ಣ ಹಾಗೂ ಅಣುತೈಲಗಳನ್ನು ಉಪಯೋಗಿಸುವ ಮೂಲಕ ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಂಡು ಕೋವಿಡ್ ನಿಯಂತ್ರಿಸುವಲ್ಲಿ ಅನೇಕ ರಾಜ್ಯಗಳು ಯಶಸ್ವಿಯಾಗಿವೆ ಎಂದರು.
ಆಯುಷ್ ವೈದ್ಯಾಧಿಕಾರಿ ಡಾ| ಎಸ್.ಟಿ. ಮುರುಳೀಧರ್ ಮಾತನಾಡಿ, ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ಮತ್ತು ರಾಜ್ಯ ಆಯುಷ್ ಇಲಾಖೆಯ ಕೊರೊನಾ ತಡೆ ಮಾರ್ಗಸೂಚಿಗಳ ಕುರಿತು ಮಾಹಿತಿ ನೀಡಿದರು. ಜಿಪಂ ಸದಸ್ಯ ಶಿವಲಿಂಗೇಗೌಡ, ತಹಶೀಲ್ದಾರ್ ನಫೀಸಾ ಬೇಗಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಜೇಶ್ ಸುರಗಿಹಳ್ಳಿ, ತಾಲೂಕು ಆರೋಗ್ಯಾಧಿಕಾರಿ ಡಾ| ಅಕ್ಷತಾ ವಿ. ಖಾನಾಪುರ, ತಾಪಂ ಇಒ ನಂದಿನಿ, ಆಯುಷ್ ವೈದ್ಯಾ ಧಿಕಾರಿಗಳಾದ ಡಾ|ಎಂ.ಕೆ. ಮಹೇಶ್, ಡಾ| ಮಹಾಲಿಂಗಪ್ಪ, ಡಾ| ನಧಾಫ್, ಡಾ| ರಮೀಜಾ ಬೇಗಂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.