ಮುರುಘಾಮಠಕ್ಕೆ ಸಚಿವ ಬಿ.ಸಿ. ಪಾಟೀಲ್ ಭೇಟಿ
Team Udayavani, May 6, 2020, 6:15 PM IST
ಸೊರಬ: ಮುರುಘಾ ಮಠದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಜಡೆ ಸಂಸ್ಥಾನ ಮಠ ಹಾಗೂ ಸೊರಬ ಮುರುಘಾ ಮಠದ ಡಾ| ಮಹಾಂತ ಸ್ವಾಮೀಜಿ ಅವರನ್ನು ಸನ್ಮಾನಿಸಿದರು.
ಸೊರಬ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಡಾ| ಮಹಾಂತ ಸ್ವಾಮೀಜಿಯ ಆಹ್ವಾನದ ಮೇರೆಗೆ, ಕೃಷಿ ಖಾತೆಗೆ ಸಂಬಂಧಪಟ್ಟ ಕಾರವಾರ ಜಿಲ್ಲಾ ಪ್ರವಾಸದ ಮಾರ್ಗ ಮಧ್ಯೆ ಸೊರಬದ ಮುರುಘಾಮಠಕ್ಕೆ ಭೇಟಿ ನೀಡಿದರು.
ಡಾ| ಮಹಾಂತ ಸ್ವಾಮೀಜಿ ಅವರು ಮಠದ ವತಿಯಿಂದ ಸಚಿವರನ್ನು ಸನ್ಮಾನಿಸಿ ಮಾತ ನಾಡಿ, ಮೂಲತಃ ಸೊರಬ ತಾಲೂಕಿನವರೇ ಆದ ಬಿ.ಸಿ. ಪಾಟೀಲ್ ಅವರು ಕೃಷಿ ಸಚಿವರಾಗಿದ್ದು ಸಂತೋಷವಾಗಿದೆ. ಅವರು ಕೃಷಿ ಕ್ಷೇತ್ರಕ್ಕೆ ವಿಶೇಷ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ನೀಡಲಿ ಎಂದು ಹಾರೈಸಿದರು. ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಜಡೆ ಸಂಸ್ಥಾನ ಮಠ ಹಾಗೂ ಸೊರಬ ಮುರುಘಾ ಮಠದ ಡಾ| ಮಹಾಂತ ಸ್ವಾಮೀಜಿ ಅವರನ್ನು ಸನ್ಮಾನಿಸಿದರು.
ಅಖೀಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ವತಿಯಿಂದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ಸನ್ಮಾನಿಸಲಾಯಿತು. ಬಸವರಾಜ್ ಬಾರಂಗಿ, ಇಂದೂಧರ್ ಒಡೆಯರ್, ಎಂ. ನಾಗಪ್ಪ, ಚಂದ್ರಶೇಖರ್, ಲಿಂಗರಾಜು, ನಾಗರಾಜ್ ಗುತ್ತಿ, ನಟರಾಜ್, ಲಕ್ಷ್ಮೀಕಾಂತ್, ರೇಣುಕಮ್ಮ ಗೌಳಿ, ಸಂಧ್ಯಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.