ವೇಗವಾಗಿ ಬಂದ ಲಾರಿ ಬ್ಯಾರಿಕೇಡ್ ಗೆ ಢಿಕ್ಕಿ; ಕರ್ತವ್ಯ ನಿರತ ಪೊಲೀಸರು ಪವಾಡಸದೃಶವಾಗಿ ಪಾರು
Team Udayavani, Apr 16, 2020, 11:03 PM IST
ಶಿವಮೊಗ್ಗ: ಖಾಲಿ ರಸ್ತೆಯಲ್ಲಿ ವೇಗವಾಗಿ ಬಂದ ಲಾರಿಯೊಂದು ಬಳಿಕ ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಬ್ಯಾರಿಕೇಡ್ ಗೆ ಢಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಬ್ಬರು ಸಬ್ ಇನ್ ಸ್ಪೆಕ್ಟರ್ ಹಾಗೂ ಮೂವರು ಪೊಲೀಸ್ ಪೇದೆಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ನಗರದ ವಿದ್ಯಾನಗರ ಪೊಲೀಸ್ ಠಾಣೆಯ ಬಳಿ ಈ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಲಾಕ್ ಡೌನ್ ಕಾರಣದಿಂದ ರಸ್ತೆ ಖಾಲಿ ಇದ್ದುದರಿಂದ ಲಾರಿ ಚಾಲಕ ವೇಗವಾಗಿ ಚಾಲನೆ ಮಾಡಿಕೊಂಡು ಬಂದಿದ್ದಾನೆ. ಬಳಿಕ ಪೊಲೀಸ್ ಬ್ಯಾರಿಕೇಡ್ ಕಂಡು ತಬ್ಬಿಬ್ಬುಗೊಂಡ ಚಾಲಕ ಲಾರಿಯನ್ನು ನಿಂಯಂತ್ರಿಸಲು ವಿಫಲನಾಗಿ ನೇರವಾಗಿ ಬ್ಯಾರಿಕೇಡ್ ಗೆ ಢಿಕ್ಕಿ ಹೊಡೆದಿದ್ದಾನೆ.
ಈ ಸಂದರ್ಭದಲ್ಲಿ ಗಾಬರಿಗೊಂಡ ಲಾರಿ ಚಾಲಕ ಲಾರಿಯನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಹೋಗುವ ಯತ್ನದಲ್ಲಿದ್ದಾಗ ಸಕಾಲದಲ್ಲಿ ಕರ್ತವ್ಯ ಪ್ರಜ್ಞೆಯನ್ನು ಮೆರೆದ ಪೊಲೀಸರು ಲಾರಿಯನ್ನು ಬೆನ್ನಟ್ಟಿಕೊಂಡು ಹೋಗಿ ತುಂಗಾ ಸೇತುವೆಯಲ್ಲಿ ಲಾರಿ ಸಹಿತ ಚಾಲಕನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.