ಭೌತಿಕ ಸಂಪತ್ತಿನೊಂದಿಗೆ ಆಧ್ಯಾತ್ಮ ಅರಿವು ಅಗತ್ಯ: ರಂಭಾಪುರಿ ಶ್ರೀ
Team Udayavani, Dec 14, 2018, 5:09 PM IST
ಶಿವಮೊಗ್ಗ: ಮನುಷ್ಯ ಯಾವಾಗಲೂ ಸುಖಾಪೇಕ್ಷಿ. ನೆಮ್ಮದಿ ಮತ್ತು ಸುಖದ ಮೂಲ ಧರ್ಮಾಚರಣೆಯಲ್ಲಿದೆ. ಭೌತಿಕ ಸಿರಿ ಸಂಪದ ಜೊತೆ ಒಂದಿಷ್ಟು ಅಧ್ಯಾತ್ಮ ಅರಿವು ಬೇಕೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಗಾಡಿಕೊಪ್ಪದಲ್ಲಿ ಗುರುವಾರ ನಡೆದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಮನುಷ್ಯ ಜೀವನದಲ್ಲಿ ಧರ್ಮ, ಅರ್ಥ, ಕಾಮ ಮತ್ತು ಮೋಕ್ಷ ಎಂಬ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಗಳಿಸದಿದ್ದರೆ ಜೀವನ ವ್ಯರ್ಥ. ಅರಿವುಳ್ಳ ಮಾನವ ಜೀವನದಲ್ಲಿ ಹಣ ಸಂಪಾದಿಸದಿದ್ದರೂ ಪರವಾ ಇಲ್ಲ. ಗುಣ ಸಂಪನ್ನರಾಗಿ ಬಾಳುವುದು ಆದರ್ಶ ಜೀವನದ ಗುರಿ. ವೀರಶೈವ ಧರ್ಮ ಸಿದ್ಧಾಂತದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಜೀವಾತ್ಮ ಪರಮಾತ್ಮನಾಗುವ ಜೀವನ ಸಿದ್ಧಾಂತವನ್ನು ಬೋಧಿಸಿರುವರು. ಕಾಯಕ ಮತ್ತು ದಾಸೋಹದ ಮೂಲಕ ಬದುಕಿನಲ್ಲಿ ಶ್ರೇಯಸ್ಸನ್ನು ಕಾಣಬೇಕೆಂದರು.
ತರೀಕೆರೆ ಹಿರೇಮಠದ ಜಗದೀಶ್ವರ ಶಿವಾಚಾರ್ಯ ಸ್ವಾಮೀಜಿ ಧರ್ಮ ಸಮಾರಂಭ ಉದ್ಘಾಟಿಸಿದರು. ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಪ್ರಾಸ್ತಾವಿಕ ನುಡಿ ಸಲ್ಲಿಸಿದರು. ಮಳಲಿ ಸಂಸ್ಥಾನ ಮಠದ ಡಾ| ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಮತ್ತು ಅಕ್ಕಿಆಲೂರಿನ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಉಪದೇಶವನ್ನಿತ್ತರು. ತಾವರೆಕೆರೆ ಶಿಲಾಮಠ, ಹಾರನಹಳ್ಳಿ ರಾಮಲಿಂಗೇಶ್ವರಮಠ, ಚನ್ನಗಿರಿ ಹಿರೇಮಠ, ಶಿರಸಿ ರುದ್ರದೇವರಮಠ ಮತ್ತು ಯಡ್ರಾಮಿ ಶ್ರೀಗಳು ಇದ್ದರು. ನೇತೃತ್ವವನ್ನು ಗಾಡಿಕೊಪ್ಪದ ಸದ್ಗುರು ಶಿವಯೋಗಿ ಹಾಲಸ್ವಾಮಿಗಳು ವಹಿಸಿ ಮಾತನಾಡಿದರು.
ಶಿವಮೊಗ್ಗ ಮಹಾಪೌರರಾದ ಲತಾ ಗಣೇಶ, ಶ್ರೀ ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎನ್.ಜೆ. ರಾಜಶೇಖರ (ಸುಭಾಷ್) ಹಾಗೂ ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಚನ್ನಬಸಪ್ಪ (ಚೆನ್ನಿ) ಇವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಉಸ್ತಾದ್ ಹುಮಾಯೂನ ಹರ್ಲಾಪುರ ಮತ್ತು ಸಂಗಡಿಗರು ಸಂಗೀತ ಸೇವೆ ಸಲ್ಲಿಸಿದರು. ವಿದ್ವಾನ್ ರೇಣುಕಾರಾಧ್ಯರು ಸ್ವಾಗತಿಸಿದರು. ಶಾಂತಾ ಆನಂದ ನಿರೂಪಿಸಿದರು.
ಮಹಾಪೂಜಾ: ಗಾಡಿಕೊಪ್ಪದ ಸಭಾ ಭವನದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ ಸಂಭ್ರಮದಿಂದ ಜರುಗಿತು. ಸಾವಿರಾರು ಜನರು ಪಾಲ್ಗೊಂಡು ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.