ಮಳೆ ಹಾನಿ ಕಾಮಗಾರಿ ಶೀಘ್ರ ಆರಂಭಿಸಿ


Team Udayavani, Nov 6, 2022, 4:24 PM IST

ಮಳೆ ಹಾನಿ ಕಾಮಗಾರಿ ಶೀಘ್ರ ಆರಂಭಿಸಿ

ಮಂಡ್ಯ: ತೀವ್ರ ಮಳೆಯಿಂದ ಉಂಟಾಗಿರುವ ರಸ್ತೆ, ಸೇತುವೆ, ಶಾಲೆ, ಅಂಗನವಾಡಿ ಕಟ್ಟಡಗಳ ದುರಸ್ತಿ ಕಾಮಗಾರಿಗಳನ್ನು ಶೀಘ್ರವಾಗಿ ಪ್ರಾರಂಭಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಎಚ್‌.ಎನ್‌.ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶೀಘ್ರ ಪ್ರಾರಂಭಿಸಿ: ಮಳೆಯಿಂದ ಹಾನಿಯಾಗಿರುವ 260 ಶಾಲೆ ಪೈಕಿ 233 ಶಾಲೆ ದುರಸ್ತಿ ಕಾಮಗಾರಿಗೆ ಎಸ್‌ಡಿಆರ್‌ಎಫ್‌ ಮಾರ್ಗಸೂಚಿ ಅನ್ವಯ 466 ಲಕ್ಷ ರೂ., 36 ಆಸ್ಪತ್ರೆಗಳ ಪೈಕಿ 25 ಆಸ್ಪತ್ರೆ ದುರಸ್ತಿಗೆ 50 ಲಕ್ಷ ರೂ.ಗೆ ಅನುಮೋದನೆ ನೀಡಲಾಗಿದೆ. ಕಾಮಗಾರಿ ಅನುಷ್ಠಾನ ಮಾಡುವ ಇಲಾಖೆ, ಸಂಸ್ಥೆ ಕಾಮಗಾರಿಗಳನ್ನು ಶೀಘ್ರವಾಗಿ ಪ್ರಾರಂಭಿಸಬೇಕು ಎಂದರು.

ಸಚಿವರ ಗಮನಕ್ಕೆ ತನ್ನಿ: ಮಳೆ ಹಾನಿ ರಸ್ತೆ, ಸೇತು ವೆ, ಪೈಪ್‌ಲೈನ್‌, ಕೆರೆ ಮುಂತಾದ ಸ್ಥಳಗಳಲ್ಲಿ ತಾ ತ್ಕಾಲಿಕ ಕಾಮ ಗಾರಿ ಕೈಗೊಳ್ಳಲಾಗಿದೆ. ಶಾಶ್ವತ ಕಾಮ ಗಾರಿಗೆ ಸರ್ಕಾರ ಅಥವಾ ಕೇಂದ್ರ ಕಚೇರಿಗೆ ಬರೆದಿ ರುವ ಪತ್ರಗಳ ಬಗ್ಗೆ ಹಿರಿಯ ಅಧಿಕಾರಿಗಳು, ಸಚಿವರ ಗಮನಕ್ಕೆ ತರಲು ತಿಳಿಸಿದರು. ಪಾವತಿ: ಮನೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲೆ ಯಲ್ಲಿ 571 ಮನೆಗೆ ಹಾನಿಯಾಗಿದ್ದು, 361 ಮನೆ ಪರಿಹಾರ ಪಾವತಿ ಮಾಡಲಾಗಿದೆ. 210 ಮನೆಗಳ ಪರಿಹಾರ ಪಾವತಿ ಬಾಕಿ ಇದೆ. ಪರಿಹಾರ ಪಾವತಿ ಮಾಡಲು ತಾಲೂಕುಗಳಲ್ಲಿ ಬೇಕಿರುವ ಅನುದಾನದ ವರದಿ ಪಡೆದು ಬಿಡುಗಡೆ ಮಾಡಲಾಗುವುದು. ಪರಿಹಾರ ಹಣವನ್ನು ಶೀಘ್ರ ಪಾವತಿ ಮಾಡಬೇಕೆಂದರು. ಪಿಡಬ್ಲ್ಯುಡಿ ಇಲಾಖೆ ವತಿಯಿಂದ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಅಂದಾಜು 91.70 ಲಕ್ಷ ರೂ.ಗಳ ಕಾಮಗಾರಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು ಸಭೆಗೆ ಮಾಹಿತಿ ನೀಡಿದರು.

ಜಿಪಂ ಸಿಇಒ ಶಾಂತಾ ಎಲ್‌.ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜು, ಉಪ ವಿಭಾಗಾಧಿಕಾರಿಗಳಾದ ಎಚ್‌.ಎಸ್‌. ಕೀರ್ತನಾ, ಅಹಮದ್‌ ಅಕ್ರಮ್‌ ಷಾ, ಜಿಲ್ಲಾಧಿ ಕಾರಿಗಳ ಕಚೇರಿ ಸಹಾಯಕ ಸ್ವಾಮಿಗೌಡ, ಇತರೆ ಇಲಾಖೆಗಳ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

5

Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.