ಶಿಕ್ಷಕಿ ಜಯಂತಿಗೆ ರಾಜ್ಯಮಟ್ಟದ ಪ್ರಶಸ್ತಿ
Team Udayavani, Sep 11, 2020, 7:58 PM IST
ತೀರ್ಥಹಳ್ಳಿ: ತಾಲೂಕಿನ ನಾಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೆ.ಎನ್. ಜಯಂತಿ ಅವರು2020 ರ ಸಾಲಿನ ರಾಜ್ಯ ಸರ್ಕಾರ ನೀಡುವ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಜಯಂತಿ ಅವರು ಅತ್ಯಂತ ಕ್ರಿಯಾಶೀಲ ಶಿಕ್ಷಕಿಯಾಗಿದ್ದು ನಾಲೂರು ಶಾಲೆಯ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಕರ್ತವ್ಯ ನಿರ್ವಹಿಸುತ್ತ ಶಾಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದಾರೆ. ಅವರು ಶಾಲೆಗೆ ಶಾಲಾ ಕಾಂಪೌಂಡ್ ನಿರ್ಮಿಸುವಲ್ಲಿ, ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ, ಕ್ರೀಡಾಂಗಣ ವ್ಯವಸ್ಥೆ, ಸುಸಜ್ಜಿತವಾದ ರಂಗಮಂದಿರ ನಿರ್ಮಾಣ, ಅಚ್ಚುಕಟ್ಟಾದ ಕೊಠಡಿ ನಿರ್ಮಾಣ, ಸುಸಜ್ಜಿತವಾದ ಧ್ವಜ ಸ್ತಂಭ, ಕಾಂಪೌಂಡ್ ಹಾಗೂ ಶಾಲೆಯ ಗೋಡೆಗಳ ಮೇಲೆ ಅಚ್ಚುಕಟ್ಟಾಗಿ ಗೋಡೆಬರಹ, ಅಚ್ಚುಕಟ್ಟಾದ ಮುಖ್ಯ ಶಿಕ್ಷಕರ ಕೊಠಡಿ, ವ್ಯವಸ್ಥಿತವಾದ ನಲಿ-ಕಲಿ ಕೊಠಡಿ, ತಮ್ಮ ಶಾಲಾ ಮಕ್ಕಳನ್ನು ಸರಿಗಮಪ ಜೀ ಟಿವಿ ಕಾರ್ಯಕ್ರಮಕ್ಕೆ ಕೊಂಡೊಯ್ದಿರುವುದು,ಶಿಕ್ಷಣ ಇಲಾಖೆಯ ಅನೇಕ ಕಾರ್ಯಕ್ರಮಗಳನ್ನು ತಮ್ಮ ಶಾಲೆಯಲ್ಲಿ ಹಮ್ಮಿಕೊಂಡಿರುವುದು ಮತ್ತು ಯಶಸ್ವಿಯಾಗಿ ನಿರ್ವಹಣೆ ಮಾಡಿರುವುದು, ಅನೇಕ ದಾನಿಗಳಿಂದ ಸುಮಾರು ಇಪ್ಪತ್ತು ಲಕ್ಷದಷ್ಟು ಹೆಚ್ಚು ಮೊತ್ತದ ಹಣವನ್ನು ದಾನವಾಗಿ ಪಡೆದು ಶಾಲೆಗೆ ಬೇಕಾದಂತಹ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ವಿನಿಯೋಗಿಸಿ ಅಭಿವೃದ್ಧಿ ಪಡಿಸಿ ಅನೇಕ ಸಾಧನೆಯನ್ನು ಮಾಡುತ್ತಾ ಶಾಲೆಯ ಕ್ರಿಯಾಶೀಲ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿರುವುದರಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಾಜ್ಯ ಮಟ್ಟದ ಪ್ರಶಸ್ತಿ ಬರಲು ಸಂಪೂರ್ಣ ಕಾರಣೀಕರ್ತರಾದ ಸಹೋದ್ಯೋಗಿಗಳು ಮತ್ತು ಶಾಲಾ ಅಭಿವೃದ್ಧಿ ಸಮಿತಿಯವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಹಾಗೆಯೇ ನಮ್ಮಂತೆ ಸಾಕಷ್ಟು ಶಿಕ್ಷಕರುತಮ್ಮ-ತಮ್ಮ ಶಾಲೆಯ ಅಭಿವೃದ್ಧಿನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ.ಶಾಲೆ ಮತ್ತು ಊರಿಗೂ ಕೀರ್ತಿ ತಂದಿದ್ದಾರೆ. ಶಿಕ್ಷಕರ ಪ್ರತಿಭೆಯನ್ನುಗುರುತಿಸಿ ಆ ಶಿಕ್ಷಕರನ್ನು ನನ್ನಂತೆಯೇ ಸರ್ಕಾರ ಗೌರವಿಸಬೇಕು ಎಂದು ಶಿಕ್ಷಕಿ ಜಯಂತಿ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್ ಆಚರಣೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.