ಅನಗತ್ಯವಾಗಿ ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸುವುದನ್ನು ನಿಲ್ಲಿಸಲಿ : ಕೆ.ಎಸ್. ಈಶ್ವರಪ್ಪ
Team Udayavani, Jan 24, 2020, 3:00 PM IST
ಶಿವಮೊಗ್ಗ : ಮಂಗಳೂರು ಬಾಂಬ್ ಪ್ರಕರಣದಲ್ಲಿ ಆರೋಪಿ ಆದಿತ್ಯ ರಾವ್ ನನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಅನಗತ್ಯವಾಗಿ ಪೊಲೀಸರ ಮೇಲೆ ಅನುಮಾನ ವ್ಯಕ್ತ ಪಡಿಸುತ್ತಿದ್ದಾರೆ. ಈ ಮೂಲಕ ಪೊಲೀಸರ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದಲ್ಲಿ ಮಾತಾನಾಡಿದ ಅವರು ಘಟನೆ ಬಗ್ಗೆ ಮಾಹಿತಿ ತನಿಖೆ ಪ್ರಗತಿಯಲ್ಲಿದ್ದು ವರದಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಸಚಿವ ಸಂಪುಟ ರಚನೆ ಕೆಲ ರಾಜ್ಯದಲ್ಲಿನ ಚುನಾವಣೆ, ಪೌರತ್ವ ಮಸೂದೆ ಜಾರಿ ಮತ್ತಿತರ ಕಾರಣಗಳಿಂದ ವಿಳಂಬವಾಗಿದೆ. ಪಕ್ಷೇತರ ಶಾಸಕ ಶಂಕರ್, ಮಸ್ಕಿ ಶಾಸಕ ಪಾಟೀಲ್ ಹಾಗೂ ಆರ್.ಆರ್.ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡಲೇಬೇಕಿದೆ. ಇನ್ನುಳಿದವರ ಕುರಿತು ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.
ಹೈ ಕಮಾಂಡ್ ಹೇಳಿದರೆ ಹಾಲಿ ಸಚಿವರು ತಮ್ಮ ಸ್ಥಾನವನ್ನು ತ್ಯಾಗ ಮಾಡಬೇಕಾಗುತ್ತದೆ. ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗರು ಎಂಬ ವ್ಯತ್ಯಾಸವಿಲ್ಲ. ನಾವು ಹಾಲು ಸಕ್ಕರೆಯಂತೆ ಬೆರೆತುಹೋಗಿದ್ದೇವೆ. ಆದರೆ ಕಾಂಗ್ರೆಸ್ ನಲ್ಲಿ ಮೂಲ ಹಾಗೂ ವಲಸಿಗ ಎಂಬ ವ್ಯತ್ಯಾಸವಿದೆ.ಕಾಂಗ್ರೆಸ್ ನವರು ಹಾಲು ಸಕ್ಕರೆಯಂತೆ ಬೆರೆಯದೆ ಹಾಲು ವಿಷದಂತಾಗಿದ್ದಾರೆ. ಸಿದ್ದರಾಮಯ್ಯ ಅವರನ್ನು ಹೊರಹಾಕಲು ಡಿಕೆಶಿ ಸೇರಿದಂತೆ ಮೂಲ ಕಾಂಗ್ರೆಸಿಗರು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.