Shimoga; ಹೇಳಿದ ಮಾತಿಗೆ ಈಗಲೂ ಬದ್ಧ, ತಾಕತ್ತಿದ್ದರೆ ಕೇಸ್ ಮಾಡಲಿ: ಈಶ್ವರಪ್ಪ ಗುಡುಗು
Team Udayavani, Feb 9, 2024, 11:49 AM IST
ಶಿವಮೊಗ್ಗ: ದೇಶ ವಿಭಜನೆಯ ಮಾತನಾಡುವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ನಾನು ದಾವಣಗೆರೆಯಲ್ಲಿ ಹೇಳಿದ ಮಾತಿಗೆ ಈಗಲೂ ಬದ್ಧ. ಅವರಿಗೆ ತಾಕತ್ತಿದ್ದರೆ ಕೇಸ್ ಹಾಕಲಿ. ಸಂಸದ ಡಿ.ಕೆ.ಶಿವಕುಮಾರ್ ದಕ್ಷಿಣ ಭಾರತವನ್ನು ವಿಭಜಿಸುವ ಹೇಳಿಕೆ ನೀಡಿದ್ದಾರೆ. ವಿನಯ್ ಕುಲಕರ್ಣಿ ಹಾಗೂ ಡಿ.ಕೆ.ಶಿವಕುಮಾರ್ ಬೆಂಬಲ ನೀಡಿದ್ದಾರೆ. ಆದರೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಇದನ್ನು ಖಂಡಿಸಿದ್ದಾರೆ. ಹೀಗಿರುವಾಗ ಎಚ್.ಕೆ.ಪಾಟೀಲ್ ಈ ರೀತಿ ಮಾತನಾಡಿರುವುದು ಅಚ್ಚರಿ ತಂದಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, 24 ಗಂಟೆಯೊಳಗೆ ಮಾತನ್ನು ವಾಪಸ್ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕೇಸ್ ದಾಖಲಿಸಲಾಗುವುದು ಎಂಬ ಕಾನೂನು ಸಚಿವ ಎಚ್.ಕೆ.ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪಾಟೀಲ್ ತಂದೆ ರಾಷ್ಟ್ರ ಭಕ್ತರಾಗಿದ್ದವರು. ಅವರ ಬಗ್ಗೆ ಗೌರವ ಇದೆ. ಅವರು ಕೇಸ್ ಹಾಕಲಿ ಎಂದು ಆಗ್ರಹಿಸುತ್ತೇನೆ. ಆಗ ಕೋರ್ಟ್ ಗೆ ಮಲ್ಲಿಕಾರ್ಜುನ ಖರ್ಗೆ ಸಹ ಬರಬೇಕಾಗುತ್ತದೆ. ನ್ಯಾಯಾಲಯವು ದೇಶ ದ್ರೋಹಿಗಳಿಗೆ ಮನ್ನಣೆ ನೀಡುತ್ತದೆಯೋ, ರಾಷ್ಟ್ರ ಭಕ್ತರಿಗೆ ಮನ್ನಣೆ ನೀಡುತ್ತದೆ ಎಂಬುದು ಗೊತ್ತಾಗುತ್ತದೆ ಎಂದರು.
ಮಂಡ್ಯ ಬಗ್ಗೆ ಮಾತನಾಡಿ, ಇದಕ್ಕೆ ರಾಜ್ಯ ಸರ್ಕಾರದ ಧೋರಣೆಯೇ ಕಾರಣ. ಬಂದ್ ಯಶಸ್ವಿ ಬಗ್ಗೆ ಸಂತೋಷವಾಗಿಲ್ಲ. ಬದಲಿಗೆ ಈ ದೇಶದಲ್ಲಿ ಹನುಮ ಧ್ವಜ ಹಾರಿಸಲು ಅವಕಾಶ ಇಲ್ಲವಲ್ಲ ಎಂದು ಬೇಸರವಾಗುತ್ತಿದೆ. ಮುಂದೆ ಇದಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದರು.
ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಬಗ್ಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ತುಷ್ಟಿಕರಣ ಮಾಡುತ್ತಿದೆ. ಇದರ ಭಾಗವಾಗಿಯೇ ಪರೀಕ್ಷೆ ಸೇರಿದಂತೆ ಎಲ್ಲ ರೀತಿಯಲ್ಲೂ ಅವರಿಗೆ ಅನುಕೂಲ ಮಾಡಿಕೊಡುತ್ತಿದೆ. ಇದು ಸಹ ಅದರ ಒಂದು ಭಾಗವೇ ಆಗಿದೆ. ಅವರು ಎಷ್ಟೇ ಎಫ್ಐಆರ್ ದಾಖಲಿಸಲಿ ನಾವು ಹೆದರುವುದಿಲ್ಲ. ರಾಷ್ಟ್ರಭಕ್ತರಾದ ನಾವು ಇದನ್ನು ಎದುರಿಸುತ್ತೇವೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಹಾವಳಿ ಮುಂದುವರೆದಿದೆ ಎಂಬ ಕೆಂಪಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಕೆಂಪಣ್ಣ ಅವರು ಕಾಂಗ್ರೆಸ್ ಏಜೆಂಟ್ ಎಂದು ಈ ಮೊದಲೇ ನಾನು ಹೇಳಿದ್ದೆ. ಅವರು ಈಗ ಮತ್ತೊಮ್ಮೆ ಕಮಿಷನ್ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಆದರೆ ಯಾವ ಇಲಾಖೆಯಲ್ಲಿ ಯಾವ ಅಧಿಕಾರಿಗಳು ಸಚಿವರು ಕಮಿಷನ್ ಕೇಳಿದ್ದಾರೆ ಎಂದು ಬಹಿರಂಗಪಡಿಸಲಿ. ತಾವು ಕಾಂಗ್ರೆಸ್ ಏಜೆಂಟ್ ಎಂಬ ಆರೋಪದಿಂದ ತಪ್ಪಿಸಿಕೊಳ್ಳಲು ಅವರು ಈಗ ನಾಟಕ ಮಾಡುತ್ತಿದ್ದಾರೆ. ಅವರ ಬಳಿ ದಾಖಲೆ ಇದ್ದರೆ ಸರಕಾರಕ್ಕೆ, ಆಯೋಗಕ್ಕೆ ನೀಡಲಿ. ಹೀಗೆ ಆದರೆ ಅದು ಹತ್ತು ವರ್ಷವಾದರೂ ತನಿಖೆ ಆಗುವುದಿಲ್ಲ ಎಂದರು.
ಕಾಂಗ್ರೆಸ್ ನಿಂದ ಬ್ಲಾಕ್ ಪೇಪರ್ ಬಿಡುಗಡೆ ಬಗ್ಗೆ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಈ ವಿಷಯದಲ್ಲಿ ನಾಟಕ ಆಡುತ್ತಿದೆ. ಕೇಂದ್ರದ ಅನುದಾನ ಬಿಡುಗಡೆ ಕುರಿತು ಶ್ವೇತಪತ್ರ ಹೊರಡಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಆದರೆ ಈ ತನಕ ಅದನ್ನು ಅವರು ಹೊರಡಿಸಿಲ್ಲ. ಹೊರಡಿಸುವುದು ಇಲ್ಲ. ಶ್ವೇತ ಪತ್ರ ಬಿಡುಗಡೆ ಮಾಡಿದರೆ ವಾಸ್ತವಿಕ ಅಂಶ ತಿಳಿಯುತ್ತದೆ. ತಾವು ಸುಳ್ಳು ಹೇಳುತ್ತೇವೆ ಎಂದು ಜನರಿಗೆ ಗೊತ್ತಾಗುತ್ತದೆ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಶ್ವೇತಪತ್ರ ಹೊರಡಿಸುವುದಿಲ್ಲ ಎಂದು ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.