ಗೂಂಡಾಗಿರಿ ಮಾಡುವವರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ
Team Udayavani, Oct 25, 2022, 9:57 PM IST
ಶಿವಮೊಗ್ಗ: ಮುಸ್ಲಿಂ ಸಮುದಾಯದ ಕೆಲ ಗೂಂಡಾಗಳಿಗೆ ಸರಕಾರ ಮತ್ತು ಪೊಲೀಸರ ಬಗ್ಗೆ ಭಯವೇ ಇಲ್ಲದಂತಾಗಿದೆ. ಪೊಲೀಸರು ಕೂಡಲೇ ಹರ್ಷನ ಮನೆ ಮುಂದೆ ಬೆದರಿಕೆಯೊಡ್ಡಿದ ಮತ್ತು ಪ್ರಕಾಶ್ ಮೇಲೆ ಹಲ್ಲೆ ನಡೆಸಿದ ಪ್ರಕರಣ ಬೇ ಧಿಸಬೇಕಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಲಾಗಿದೆ. ಆದರೆ ಆ ಸಂಘಟನೆ ಇನ್ನೂ ಜೀವಂತವಾಗಿದೆಯೇ ಎನ್ನುವುದನ್ನು ಪೊಲೀಸರು ಪತ್ತೆ ಮಾಡಬೇಕಿದೆ. ಸಮಾಜದಲ್ಲಿ ಅಶಾಂತಿ ವಾತಾವರಣ ಹುಟ್ಟು ಹಾಕುವವರ ವಿರುದ್ಧ ರಾಜ್ಯ ಸರಕಾರ ಕಠಿನ ಕ್ರಮ ತೆಗೆದುಕೊಳ್ಳಬೇಕು. ನಾವು ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಬೇಕಿದೆ. ಅವರ ರೀತಿ ಮಚ್ಚು, ಲಾಂಗ್ ಹಿಡಿದುಕೊಂಡು ಹೋಗಲು ಸಾಧ್ಯವಿಲ್ಲ. ಈ ರೀತಿ ಗೂಂಡಾಗಿರಿ ನಡೆಸುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ : ಶಿವಮೊಗ್ಗ: ಲಾಂಗ್ ಹಿಡಿದು ಪುಂಡಾಟ ಮಾಡಿದ್ದ ಮೂವರ ಬಂಧನ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.