ಸುದೀಪ್ ಕುಟುಂಬದಿಂದ ರೈತರ ಮೇಲೆ ದೌರ್ಜನ್ಯ: ದೂರು
Team Udayavani, Jan 2, 2017, 3:45 AM IST
ಶಿವಮೊಗ್ಗ: “ನಟ ಸುದೀಪ್ ಕುಟುಂಬ ಇಲ್ಲಿನ ತ್ಯಾವರೆಕೊಪ್ಪದಲ್ಲಿ ನಿರ್ವಹಣೆಗೆಂದು ಕೆರೆ ಪಡೆದಿದ್ದು, ಇದರ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿದ್ದ ಬಡವರನ್ನು ಬಲವಂತವಾಗಿ ಒಕ್ಕಲೆಬ್ಬಿಸಿದೆ’ ಎಂದು ಕೆಲ ದಿನಗಳ ಹಿಂದೆ ಗ್ರಾಮಾಂತರ ಠಾಣೆಯಲ್ಲಿ ದೌರ್ಜನ್ಯ ಪ್ರಕರಣ ಸಲ್ಲಿಕೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಶಿವಮೊಗ್ಗ-ಸಾಗರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ತ್ಯಾವರೆಕೊಪ್ಪ ಹುಲಿ ಸಿಂಹಧಾಮದ ಎದುರು ಸುದೀಪ್ ಅವರ ತಂದೆ ಸರೋವರ ಸಂಜೀವ್ ಸುಮಾರು 18 ಎಕರೆ ಜಮೀನು ಹೊಂದಿದ್ದು, ಇದರ ಪಕ್ಕದಲ್ಲಿರುವ ಕೆರೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಪೂರಕ ಎಂಬಂತೆ ಸ.ನಂ. 50 ರಲ್ಲಿ ಸಾಗುವಳಿ ಮಾಡಿರುವ ಕಣ್ಣಪ್ಪ ಕುಟುಂಬ ಸರೋವರ ಸಂಜೀವ್ ಅವರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ದೌರ್ಜನ್ಯ ದೂರು ನೀಡಿದೆ.
ದಾಖಲೆ ತಿದ್ದಿದ ಆರೋಪ:
ನಟ ಸುದೀಪ ಅವರ ತಂದೆ ಸಂಜೀವ ಅವರು, ತಮ್ಮ ಕೃಷಿ ಭೂಮಿಯ ಪಕ್ಕದ ಸಾರ್ವಜನಿಕ ಕೆರೆಯನ್ನು ಅಭಿವೃದ್ಧಿಪಡಿಸಲು ಜಿಪಂನೊಂದಿಗೆ ಒಪ್ಪಂದ ಮಾಡಿಕೊಂಡು ಬಳಿಕ, ಎಲ್ಲ ನಿಯಮಗಳನ್ನು ಉಲ್ಲಂಘಿಸಿ, ಕೆರೆ ನೀರನ್ನು ಸ್ವಂತ ಕೃಷಿ ಭೂಮಿಗೆ ಬಳಸುತ್ತಿದ್ದಾರೆ. ಪುಟ್ಟ ಕೆರೆಯನ್ನು ಅನಧಿಕೃತವಾಗಿ ಇನ್ನಷ್ಟು ವಿಸ್ತಾರಗೊಳಿಸಿದ್ದು, ಅಧಿಕಾರಿಗಳನ್ನು ಬಳಸಿಕೊಂಡು ದಾಖಲೆಗಳನ್ನು ತಿದ್ದಲಾಗಿದೆ ಎಂದು ಸ್ಥಳೀಯ ಸಂಘಟನೆಗಳು ಆರೋಪಿಸಿವೆ.
ಕೆರೆ ಒಪ್ಪಂದ ಉಲ್ಲಂಘಿಸಿ ತಮ್ಮ 18 ಎಕರೆ ಅಡಿಕೆ, ತೆಂಗಿನ ತೋಟಕ್ಕೆ ಸಂಜೀವ್ ಅವರು ನೀರು ಹರಿಸುತ್ತಿದ್ದಾರೆ. ಇದಕ್ಕಾಗಿ ಕೆರೆಗೆ ಪ್ರತ್ಯೇಕ ತೂಬು, ಕಾಲುವೆ ನಿರ್ಮಿಸಿದ್ದಾರೆ. ಆದರೆ ಕೆರೆ ಅಭಿವೃದ್ಧಿಗೆ ಯಾವ ಕ್ರಮವನ್ನೂ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.
ದಾಖಲೆಗಳನ್ನು ತಿದ್ದಿ ಕೆರೆಯು ಮೂಲದಲ್ಲಿ ಇರುವುದಕ್ಕಿಂತ ಹೆಚ್ಚು ವಿಸ್ತಾರಗೊಳಿಸಲಾಗಿದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುವುದು. ತಹಶೀಲ್ದಾರ್ ಅವರಿಂದ ಮಾಹಿತಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
-ಡಾ| ಎಂ.ಲೋಕೇಶ್, ಜಿಲ್ಲಾಧಿಕಾರಿ, ಶಿವಮೊಗ್ಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.