ಮಂಗನ ಕಾಯಿಲೆ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಿ

Team Udayavani, Jan 19, 2019, 10:43 AM IST

shiv-1.jpg

ಸಾಗರ: ತಾಲೂಕಿನ ವಿವಿಧ ಭಾಗಗಳಲ್ಲಿ ಹರಡಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಶುಕ್ರವಾರ ದಲಿತ ಸಂಘರ್ಷ ಸಮಿತಿ ಮತ್ತು ಸಿರಿವಂತೆ ಚಿತ್ರಸಿರಿ ಸಂಸ್ಥೆ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಲೇಖಕ ವಿಲಿಯಂ, ತಾಲೂಕಿನ ಬೇರೆಬೇರೆ ಭಾಗದಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿ ಹಬ್ಬುತ್ತಿದೆ. ಆದರೆ ಕಾಯಿಲೆ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಗಂಭೀರ ಕ್ರಮಗಳು ನಡೆಯುತ್ತಿಲ್ಲ. ರಾಜ್ಯ ಸರ್ಕಾರ ನಿಷ್ಕ್ರಿಯವಾಗಿದ್ದು ಹಲವು ಜನರು ಮಂಗನ ಕಾಯಿಲೆಗೆ ತುತ್ತಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಕಾಯಿಲೆ ಭೀತಿಯಿಂದ ಜನರು ಮನೆಯಿಂದ ಹೊರಗೆ ಬರಲು ಹೆದರುವ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ತಕ್ಷಣ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಚಿಂತಕ ದೇವೇಂದ್ರ ಬೆಳೆಯೂರು ಮಾತನಾಡಿ, ಸರ್ಕಾರಕ್ಕೆ ನಾಚಿಕೆಯಾಗಬೇಕು. ಜನರು ದಿನೇದಿನೇ ಆಸ್ಪತ್ರೆ ಸೇರುತ್ತಿದ್ದಾರೆ. ಆದರೂ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಗಂಭೀರ ಕ್ರಮ ಕೈಗೊಂಡಿಲ್ಲ. ಕಾಯಿಲೆಯಿಂದ ಮೃತಪಟ್ಟ ಜನರಿಗೆ ಜೀವನ ಭದ್ರತೆ ಇಲ್ಲವಾಗಿದೆ. ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿರುವವರು ಮಣಿಪಾಲ ಆಸ್ಪತ್ರೆಯಲ್ಲಿದ್ದಾರೆ. ಅವರ ಕುಟುಂಬವು ಉಪವಾಸ ಬೀಳುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಇಂತಹ ಕುಟುಂಬಗಳಿಗೆ ಆರ್ಥಿಕ ನೆರವು ಕಲ್ಪಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ತಿಳಿಸಿದರು.

ಪತ್ರಕರ್ತ ಅ.ರಾ. ಶ್ರೀನಿವಾಸ್‌ ಮಾತನಾಡಿ, 1957ರಲ್ಲಿ ಕ್ಯಾಸನೂರು ಅರಣ್ಯದಲ್ಲಿ ಈ ಕಾಯಿಲೆ ಕಾಣಿಸಿಕೊಂಡಿದ್ದು, ಅಂದಿನಿಂದ ಇಂದಿನವರೆಗೂ ಅದಕ್ಕೆ ಔಷಧಿ ಕಂಡು ಹಿಡಿಯಲಿಲ್ಲ. ಇನ್ನಾದರೂ ಔಷಧ ಕಂಡು ಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶ್ವ ಆರೋಗ್ಯ ಸಂಸ್ಥೆ ಮೂಲಕ ಗಮನ ಹರಿಸಬೇಕು ಎಂದರು.

ಸಿರಿವಂತೆ ಚಿತ್ರಸಿರಿ ಸಂಸ್ಥೆ ಚಂದ್ರಶೇಖರ್‌ ಮಾತನಾಡಿ, ಈಗಾಗಲೇ ಕಾಯಿಲೆ ಉಲ್ಬಣಗೊಂಡಿದ್ದು ಮಂಗ ಸಾಯುತ್ತಿರುವ ಕಾಡಿನ ಭಾಗಗಳಲ್ಲಿ ಕೂಂಬಿಂಗ್‌ ಪ್ರಕ್ರಿಯೆ ಶೀಘ್ರಗೊಳಿಸಬೇಕು ಎಂದು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕರಾದ ಪರಮೇಶ್ವರ ದೂಗೂರು, ಮಂಜುನಾಥ ಚಿಪ್ಪಳಿ, ಪ್ರಮುಖರಾದ ರಾಮಣ್ಣ ಹಸಲರು, ಯೇಸುಪ್ರಕಾಶ್‌, ನಾಗೇಂದ್ರ ಸಾಗರ, ಶಿವಾನಂದ ಕುಗ್ವೆ, ನಾಗಪ್ಪ ಬೇಳೂರು, ಪುಟ್ಟಪ್ಪ, ಅಣ್ಣಪ್ಪ ಬಾಳೆಗುಂಡಿ, ಬಂಗಾರಪ್ಪ ಶುಂಠಿಕೊಪ್ಪ, ಸುಭಾಷ್‌, ಕೃಷ್ಣ ಗಾಡಿಗ ಇನ್ನಿತರರು ಇದ್ದರು.

ಆಗುಂಬೆ ಭಾಗದಲ್ಲಿ 4 ಮಂಗಗಳ ಶವ ಪತ್ತೆ

ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಭಾಗದ ಕಾಡಿನಲ್ಲಿ ನಾಲ್ಕು ಮಂಗಗಳ ಶವ ಪತ್ತೆಯಾಗಿದೆ. ಈ ಭಾಗದ ಗ್ರಾಮಸ್ಥರು ಮಂಗನ ಕಾಯಿಲೆ ಆತಂಕಕ್ಕೆ ಒಳಗಾಗಿದ್ದಾರೆ. ಆಗುಂಬೆ ಭಾಗದ ಬಿಳಚಿಕಟ್ಟೆ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಶವವನ್ನು ಸುಟ್ಟು ಹಾಕಿದ್ದಾರೆ. ಆಗುಂಬೆ ಭಾಗದಲ್ಲಿ ಮಂಗನ ಕಾಯಿಲೆ ಹರಡದಂತೆ ಗ್ರಾಪಂ ವತಿಯಿಂದ ಜಾಗೃತಿ ಹಮ್ಮಿಕೊಳ್ಳಲಾಗಿದೆ ಎಂದು ಆಗುಂಬೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ| ಅನಿಕೇತ್‌ ತಿಳಿಸಿದ್ದಾರೆ. ಹೊಸನಗರದಲ್ಲಿ ಮಂಗನ ಶವ ಪತ್ತೆ: ಪಟ್ಟಣದ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಬಳಿ ಹಾಗೂ ಹುಲಿಕಲ್‌ ಸಮೀಪದ ಖೈರುಗುಂದಾ ಗ್ರಾಮದಲ್ಲಿ ಬಳಿ ಮಂಗನ ಶವ ಶುಕ್ರವಾರ ಪತ್ತೆಯಾಗಿದೆ. ಸ್ಥಳಕ್ಕೆ ಪಶುವೈದ್ಯರು, ಅರಣ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ತೆರಳಿ, ಪರಿಶೀಲನೆ ನಡೆಸಿ ಮಂಗನ ಶವ ದಹನ ಮಾಡಲಾಗಿದೆ. ಸಂಪೆಕಟ್ಟೆ ಹಾಗೂ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ದೊಡ್ಡಬೆಳಗೋಡು ಗ್ರಾಮದಲ್ಲಿ ಕೆಎಫ್‌ಡಿ ಲಸಿಕಾ ಶಿಬಿರ ಶೀಘ್ರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆಯ ರಮೇಶ ಆಚಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.