ಕೆಎಫ್‌ಡಿ ಉಲ್ಭಣಕ್ಕೆ ನಿರ್ಲಕ್ಷ್ಯವೇ ಕಾರಣ

Team Udayavani, Feb 8, 2019, 10:11 AM IST

shiv-3.jpg

ಸಾಗರ: ಕೆಎಫ್‌ಡಿ ಆರಂಭದ ಹಂತದಲ್ಲೇ ಅಧಿಕಾರಿಗಳು ಸೂಕ್ತ ನಿಗಾ ವಹಿಸದೆ ಇರುವುದೇ ಕಾಯಿಲೆ ಉಲ್ಬಣಗೊಳ್ಳಲು ಹಾಗೂ ಸಾವು- ನೋವು ಹೆಚ್ಚಾಗಲು ಕಾರಣವಾಗಿದೆ ಎಂದು ರಾಜ್ಯ ಸರ್ಕಾರ ನಿಯೋಜಿಸಿರುವ ಕೆಎಫ್‌ಡಿ ವಿಶೇಷ ತನಿಖಾ ಸಮಿತಿ ಅಧ್ಯಕ್ಷ ಮದನ್‌ ಗೋಪಾಲ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಗುರುವಾರ ಕೆಎಫ್‌ಡಿ ಮಂಗನ ಕಾಯಿಲೆ ನಿಯಂತ್ರಣ ಕುರಿತು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವೈದ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಳಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಮಂಗಗಳ ಸಾವು ಸಂಭವಿಸಿದ ಸಂದರ್ಭದಲ್ಲಿ ತಕ್ಷಣ ನಿಗಾ ವಹಿಸಿದ್ದರೆ ಇಷ್ಟು ದೊಡ್ಡ ಮಟ್ಟದ ಅನಾಹುತ ಆಗುತ್ತಿರಲಿಲ್ಲ. ಯಾಕೆ ಹೀಗೆ ಆಗಿದೆ ಎನ್ನುವುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಬುಧವಾರ ಅರಳಗೋಡು ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರ ಜೊತೆ ಚರ್ಚಿಸಿದ ಸಂದರ್ಭದಲ್ಲಿ ಮೆಗ್ಗಾನ್‌ ಆಸ್ಪತ್ರೆ ಬಗ್ಗೆ ಸಾಕಷ್ಟು ದೂರುಗಳನ್ನು ಹೇಳಿದ್ದಾರೆ. ಜೊತೆಗೆ ಶಂಕಿತ ಮಂಗನ ಕಾಯಿಲೆಯಿಂದ ಬಳುತ್ತಿರುವವರನ್ನು ಮೆಗ್ಗಾನ್‌ ಆಸ್ಪತ್ರೆಯಿಂದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆದೊಯ್ಯುವಂತೆ ಶಿಫಾರಸು ಮಾಡಿದ ವಿವರಗಳು ಸಹ ಲಭ್ಯವಾಗಿದೆ. ವ್ಯವಸ್ಥೆಯಲ್ಲಿ ಆಗಿರುವ ಲೋಪದೋಷವನ್ನು ಸರಿಪಡಿಸುವ ನಿಟ್ಟಿನಲ್ಲಿ ಸಹ ಸರ್ಕಾರಕ್ಕೆ ತಿಳಿಸಲಾಗುತ್ತದೆ ಎಂದು ಹೇಳಿದರು.

ಜನ ಸತ್ತ ನಂತರ ವ್ಯಾಕ್ಸಿನೇಷನ್‌ ನೀಡುವುದು, ಡಿಎಂಪಿ ಆಯಿಲ್‌ ವಿತರಣೆ ಕಾರ್ಯವನ್ನು ಚುರುಕು ಮಾಡಲಾಗಿದೆ. ಮೊದಲೇ ಏಕೆ ಈ ಕ್ರಮ ತೆಗೆದುಕೊಂಡಿಲ್ಲ ಎನ್ನುವುದರ ಬಗ್ಗೆ ಕಾರಣ ಕೇಳಲಾಗಿದೆ. 2018ರ ನ. 23ರಂದು ಮೊದಲ ಪ್ರಕರಣ ದಾಖಲಾಗಿದ್ದರೂ, ಐಡಿಎಸ್‌ಪಿ ಅಧಿಕಾರಿಗಳು ನಮಗೆ ಇದರ ಬಗ್ಗೆ ಮಾಹಿತಿಯೇ ಇಲ್ಲ ಎಂದು ಹೇಳುತ್ತಿದ್ದಾರೆ. ಆಗಲೇ ಸಂಬಂಧಪಟ್ಟ ಅಧಿಕಾರಿ ಅಗತ್ಯ ಕ್ರಮ ಕೈಗೊಂಡಿದ್ದರೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿ ಕಾಯಿಲೆ ನಿಯಂತ್ರಣ ಕಾರ್ಯ ಇನ್ನಷ್ಟು ಚುರುಕು ಆಗುತಿತ್ತು ಎಂದು ಹೇಳಿದರು.

ಮಂಗಗಳು ಸಾಯುತ್ತಿರುವ ಎಲ್ಲ ಭಾಗಗಳಿಗೆ ಭೇಟಿ ನೀಡಲಾಗುತ್ತಿದೆ. ಅಲ್ಲಿನ ಪರಿಸರ, ಸ್ಥಳೀಯರ ಅಭಿಪ್ರಾಯ ಎಲ್ಲವನ್ನೂ ಸಂಗ್ರಹಿಸಿ ಮುಂದೆ ಕಾಯಿಲೆ ಹರಡದಂತೆ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಮತ್ತು ಶಾಶ್ವತವಾಗಿ ಮಂಗನ ಕಾಯಿಲೆಯನ್ನು ನಿಯಂತ್ರಿಸುವ ಕುರಿತು ಯೋಜನೆಯೊಂದನ್ನು ತಯಾರಿಸಿ ಸರ್ಕಾರಕ್ಕೆ ನೀಡಲಾಗುತ್ತದೆ ಎಂದರು.

ಮಂಗಗಳು ವ್ಯಾಪಕವಾಗಿ ಸಾಯುತ್ತಿವೆ. ಮನುಷ್ಯರಿಗಿಂತ ಮಂಗಗಳು ಜಾಸ್ತಿ ಸಾಯುತ್ತಿರುವುದರಿಂದ ಕಾಯಿಲೆ ಪ್ರಮಾಣ ಜಾಸ್ತಿಯಾಗುತ್ತಿದೆ ಎನ್ನುವುದು ನಮ್ಮ ಕಲ್ಪನೆಯಾಗಿದೆ. ಜನರು ಆತಂಕಗೊಳ್ಳುವ ಅಗತ್ಯವಿಲ್ಲ. ಈಗಾಗಲೇ ಸರ್ಕಾರ ಕಾಯಿಲೆ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಎಲ್ಲ ಹಂತದಲ್ಲೂ ಅಗತ್ಯ ಕ್ರಮ ಕೈಗೊಂಡಿದೆ. ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಾಗಿರುವ ವ್ಯಾಕ್ಸಿನೇಷನ್‌ ಹಾಗೂ ಮುಂಜಾಗ್ರತೆಗಾಗಿ ಲೇಪಿಸಿಕೊಳ್ಳುವ ಡಿಎಂಪಿ ಆಯಿಲ್‌ ಸರಬರಾಜು ಬಗ್ಗೆ ಸಹ ಗಮನ ಹರಿಸಲಾಗುತ್ತದೆ ಎಂದು ಹೇಳಿದರು.

ಸಮಿತಿಯ ಡಾ| ಶಿವಕುಮಾರ್‌ ವೀರಯ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಜೇಶ್‌ ಸುರಗಿಹಳ್ಳಿ, ಸಹಾಯಕ ಆಯುಕ್ತ ದರ್ಶನ್‌ ಎಚ್.ವಿ., ಸಿವಿಲ್‌ ಸರ್ಜನ್‌ ಡಾ| ಪ್ರಕಾಶ್‌ ಬೋಸ್ಲೆ, ಡಾ| ಕೆ.ಪಿ.ಅಚ್ಚುತ್‌, ಡಾ| ಮುನಿವೆಂಕಟರಾಜು, ಡಾ| ಸಜ್ಜನ್‌ ಶೆಟ್ಟಿ, ಡಾ| ಜಗದೀಶ್‌, ಡಾ| ಕಿರಣ್‌, ಡಾ| ಕಾವ್ಯ, ಡಾ| ಹರೀಶ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

6-hosanagar

Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.