ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ
Team Udayavani, May 25, 2018, 5:13 PM IST
ಶಿವಮೊಗ್ಗ: ನಮ್ಮಲ್ಲಿನ ನ್ಯೂನತೆ ಸರಿಪಡಿಸಿಕೊಂಡು ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಗೆಲುವ ಸಾಧಿಸಬೇಕಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀ.ನ. ಶ್ರೀನಿವಾಸ್ ಹೇಳಿದರು.
ಕಾಂಗ್ರೆಸ್ ಭವನದಲ್ಲಿ ಗುರುವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಸೋಲಿಗೆ
ಕಾರಣ ಏನೆಂಬುದನ್ನು ತಿಳಿದುಕೊಂಡು ಬರಲಿರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮ ವಹಿಸಬೇಕಿದೆ. ಪಕ್ಷದ ಅಭ್ಯರ್ಥಿಗೆ ಬೆಂಬಲಿಸುವಂತೆ ಮತದಾರರ ಮನವೊಲಿಸಬೇಕು ಎಂದರು.
ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಸ್.ಪಿ. ದಿನೇಶ್ ಕಳೆದ ಒಂದೂವರೆ ವರ್ಷದಿಂದ ಹೋರಾಟ ನಡೆಸುತ್ತಾ ಬಂದಿದ್ದಾರೆ. ಅಷ್ಟೆ ಅಲ್ಲದೇ ಮತದಾರರನ್ನು ನಿರಂತರವಾಗಿ ಸಂಪರ್ಕಿಸುತ್ತಿದ್ಧಾರೆ. ಎಸ್.ಪಿ.
ದಿನೇಶ್ ಪರವಾಗಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಪಕ್ಷದ ಅಭ್ಯರ್ಥಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಮಾತನಾಡಿ, ಕಳೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದ ಎಸ್.ಪಿ. ದಿನೇಶ್, ತಮ್ಮ ಪ್ರತಿಸ್ಪರ್ಧಿ ವಿರುದ್ಧ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಆದರೆ ಈ
ಬಾರಿ ಅದಕ್ಕೆ ಅವಕಾಶ ಕೊಡಬಾರದು. ಕಾಂಗ್ರೆಸ್‌ಗೆ ಮತ ಹಾಕುವಂತೆ ಪಕ್ಷದ ಕಾರ್ಯಕರ್ತರು ಮತದಾರರನ್ನು
ಪ್ರೇರೇಪಿಸಬೇಕು. ಕೋಮುವಾದಿ ಪಕ್ಷವನ್ನು ದೂರವಿಡಲು ಕಾರ್ಯಪ್ರವೃತ್ತರಾಗಬೇಕೆಂದು ಕರೆ ನೀಡಿದರು.
ಲೋಕಸಭಾ ಚುನಾವಣೆ ಹತ್ತಿರದಲ್ಲಿದೆ. ಚುನಾವಣೆಗೆ ಸಜ್ಜಾಗಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ
ಸೋನಿಯಾ ಗಾಂಧಿ ಈಗಾಗಲೇ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಎಲ್ಲೆಡೆ ಕಾಂಗ್ರೆಸ್ ಪರವಾದ ವಾತಾವರಣ
ಇದೆ. ಎಲ್ಲರೂ ಸಂಘಟಿತರಾಗಿ ಪ್ರಯತ್ನ ಪಟ್ಟಲ್ಲಿ ಫಲಿತಾಂಶ ನಮ್ಮ ಪರವಾಗಿರುತ್ತದೆ ಎಂದರು.
ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ದಿನೇಶ್ ಮಾತನಾಡಿ, ಕಳೆದ ಚುನಾವಣೆ ಸಂದರ್ಭದಲ್ಲಿ ಸರ್ಕಾರಿ ಯಂತ್ರವನ್ನು ಕೆಲವರು ದುರುಪಯೋಗಪಡಿಸಿಕೊಂಡಿದ್ದರು. ಇದರಿಂದಾಗಿ ತಾವು ಅನುಭವಿಸುವಂತಾಯಿತು. ಇದರ ಜೊತೆಗೆ ಕುಲಗೆಟ್ಟ ಮತಗಳ ಸಂಖ್ಯೆ ಜಾಸ್ತಿಯಾಗಿತ್ತು. ಜೆಡಿಎಸ್ ಅಭ್ಯರ್ಥಿ
6,875 ಮತ ಪಡೆದಿದ್ದು ಕೂಡ ಕಾಂಗ್ರೆಸ್ ಮತ ವಿಭಜನೆಗೆ ಕಾರಣವಾಗಿತ್ತು. ಈ ಬಾರಿ ಸಂಘಟಿತ ಪ್ರಯತ್ನ ನಡೆಸಬೇಕು. ಆಗ ಗೆಲವು ನಮ್ಮದಾಗುತ್ತದೆ ಎಂದರು.
ಸಭೆಯಲ್ಲಿ ಪಕ್ಷದ ಪ್ರಮುಖರಾದ ಇಸ್ಮಾಯಿಲ್ ಖಾನ್, ಪಿ.ವಿ. ವಿಶ್ವನಾಥ್ ಕಾಶಿ, ವಿಜಯಲಕ್ಷ್ಮೀ ಪಾಟೀಲ್, ಎಸ್.ಪಿ.
ಶೇಷಾದ್ರಿ, ಎಚ್.ಸಿ. ಯೋಗೀಶ್, ನಾಗರಾಜ್, ಮಮತಾ ಸಿಂಗ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.