ಮೋದಿ ಆಡಳಿತದಲ್ಲಿ ದೇಶ ಶ್ರೀಮಂತ


Team Udayavani, Mar 9, 2019, 10:49 AM IST

shiv-2.jpg

ಶಿವಮೊಗ್ಗ: ಮೋದಿ ಮತ್ತೆ ಪ್ರಧಾನಿಯಾಗುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ನಗರದ ರಾಯಲ್‌ ಆರಿಡ್‌ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಬುದ್ದರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮೋದಿ ಜಗತ್ತಿನ ಪುಣ್ಯಾತ್ಮ. ಆತನ ದೇಶಭಕ್ತಿಗೆ ಎಲ್ಲರೂ ಬೆರಗಾಗಿದ್ದಾರೆ. ಭಾರತದ ಹೆಸರನ್ನು ವಿಶ್ವದಲ್ಲಿಯೇ ಪಸರಿಸಬೇಕು ಎಂಬ ಮಹತ್ವಾಕಾಂಕ್ಷಿ ಮೋದಿ ಅವರದು. ಅವರ 5 ವರ್ಷದ ಆಡಳಿತದಲ್ಲಿ ಭಾರತ ಶ್ರೀಮಂತ ರಾಷ್ಟ್ರವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಈ ಮೊದಲು ಭಾರತ ಭ್ರಷ್ಟಾಚಾರದಲ್ಲಿ 110ನೇ ಸ್ಥಾನದಲ್ಲಿತ್ತು. ಈಗ ಅದು 20ನೇ ಸ್ಥಾನಕ್ಕೆ ಬಂದಿದೆ ಎಂದರು.

ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸುವ ದೃಷ್ಟಿಯಿಂದಲೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕಾಗಿದೆ. ಉಪ ಚುನಾವಣೆಯಲ್ಲಿ ಗೆದ್ದ ನಾನು ಮತ್ತೆ ಈ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ. ನನ್ನನ್ನು ಆಯ್ಕೆ ಮಾಡುವ ಮೂಲಕ ಮೋದಿಯವರನ್ನು ಗೆಲ್ಲಿಸಬೇಕಾಗಿದೆ ಎಂದರು.
 
ನಾನು ಸಂಸದನಾದ ಮೇಲೆ ಕಡಿಮೆ ಅವಧಿಯಲ್ಲಿಯೇ ಅನೇಕ ಕೆಲಸಗಳನ್ನು ಮಾಡಿದ್ದೇನೆ. ಈಗಾಗಲೇ ತುಮರಿ ಸೇತುವೆಗೆ ಟೆಂಡರ್‌ ಕರೆಯಲಾಗಿದೆ. ಶಿವಮೊಗ್ಗ ಜಿಲ್ಲೆಯನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಲು ಎಲ್ಲ ರೀತಿಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

ಸಿಂಹಧಾಮ ಮೇಲ್ದರ್ಜೆಗೆ ಏರಿದೆ. ತುಮಕೂರಿನಿಂದ ಹೊನ್ನಾವರದವರೆಗೆ ಸುಮಾರು 4800 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಲಿದೆ ಎಂದರು. ಕೇಂದ್ರ ಸರ್ಕಾರದ ಅನೇಕ ಯೋಜನೆಗಳು ರಾಜ್ಯದಲ್ಲೂ ವಿಸ್ತಾರಗೊಂಡಿವೆ. ಸುಮಾರು 8 ಕೋಟಿ ಕುಟುಂಬಗಳಿಗೆ ಉಜ್ವಲ್‌ ಯೋಜನೆ ಉಪಯೋಗವಾಗಿದೆ. ರಾಷ್ಟ್ರದಲ್ಲಿ ಸುಮಾರು 12 ಕೋಟಿ ಜನರಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಹೀಗೆ ಕೇಂದ್ರದ ಸಾಧನೆಗಳು ಸಾಕಷ್ಟು ಇವೆ. ಇವೆಲ್ಲವನ್ನು ಗಮನಿಸಿ ರಾಜ್ಯದಲ್ಲೂ ಕೂಡ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಗಣೇಶ್‌ ಕಾರ್ಣಿಕ್‌ ಮಾತನಾಡಿ, ಭಾರತದ ಪ್ರಧಾನಿ ಮೋದಿಯವರು ಪ್ರಜಾಪ್ರಭುತ್ವಕ್ಕೆ ಒಂದುಅರ್ಥ ಕೊಟ್ಟವರು. ಭಾರತದ ಸೇನೆಯನ್ನು ಬಲಿಷ್ಟವಾಗಿ ಕಟ್ಟಿದವರು. ನೆರೆಯ ಪಾಕ್‌ಗೆ ತಕ್ಕ ಉತ್ತರ ಕೊಟ್ಟವರು. ಇವರ ಕಾಲದಲ್ಲಿ ಸೈನಿಕರಿಗೆ ಸಾಕಷ್ಟು ಒಳ್ಳೆಯದಾಗಿದೆ ಎಂದರು. 

ಕಳೆದ 5 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ದಿದ್ದಿದ್ದಾರೆ. ಭಾರತದ ಕೀರ್ತಿ ಹಬ್ಬಿದೆ. ಭ್ರಷ್ಟಾಚಾರ ಮುಕ್ತ ಆಡಳಿತವಿದೆ. ಅವರ ಕೈ ಜೋಡಿಸಬೇಕಾಗಿದೆ. ಹಾಗಾಗಿಯೇ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರವೂ ಸೇರಿದಂತೆ ಇಡೀ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಪ್ರಮುಖರಾದ ಡಿ.ಎಸ್‌. ಅರುಣ್‌, ಎಸ್‌.ಎನ್‌. ಚನ್ನಬಸಪ್ಪ, ಎನ್‌.ಜೆ. ಸುಭಾಶ್‌, ಜ್ಞಾನೇಶ್ವರ್‌, ಎನ್‌.ಜಿ. ನಾಗರಾಜ್‌, ಮೇಯರ್‌ ಲತಾ ಗಣೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.