ಶಿವರಾಜ್‌ಕುಮಾರ್ ದಂಪತಿ ನ್ಯಾಯಾಲಯಕ್ಕೆ ಹಾಜರು
Team Udayavani, Feb 26, 2017, 9:53 AM IST
ಶಿವಮೊಗ್ಗ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಹಾಗೂ ಶಾಸಕ ಮಧು ಬಂಗಾರಪ್ಪ ಶನಿವಾರ ಇಲ್ಲಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಇರುವ ವೇಳೆಯಲ್ಲಿ ಅವಧಿ ಮೀರಿ ಪ್ರಚಾರ ನಡೆಸಿದ್ದರು. ಇದರಿಂದಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ನಟ ಶಿವರಾಜ್ ಕುಮಾರ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು.
ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್ ನೀಡಿದ್ದರೂ ಶಿವರಾಜ್ ಕುಮಾರ್ ದಂಪತಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ವಾರೆಂಟ್ ಹೊರಡಿಸಲು ಕೋರ್ಟ್ ಸೂಚಿಸಿದ್ದರಿಂದ ಶನಿವಾರ ವಿಚಾರಣೆಗೆ ಹಾಜರಾದರು. ಮಾ. 1 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.
ಕೋರ್ಟ್ ಸೂಚನೆಯಂತೆ ಹಾಜರು: ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಕೋರ್ಟ್ ಸೂಚನೆಯಂತೆ ವಿಚಾರಣೆಗೆ ಹಾಜರಾಗಿದ್ದೇವೆ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.