ಪ್ರಭಾವಿಯಾಗುತ್ತಿರುವ ಕೋಮುವಾದ: ಅಮೀನ್‌ಮಟ್ಟು
Team Udayavani, Jun 18, 2018, 4:20 PM IST
ಶಿವಮೊಗ್ಗ: ಪ್ರಸ್ತುತ ದಿನಗಳಲ್ಲಿ ಕೋಮುವಾದ ಪ್ರಭಾವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅದಕ್ಕೆ ವಿರುದ್ಧವಾಗಿ ಜಾತ್ಯಾತೀತತೆಯ ಪ್ರಜ್ಞೆ ಬೆಳೆಸುವುದು ಸಾಕಷ್ಟು ಕಷ್ಟವಾಗಿದೆ ಎಂದು ಪ್ರಗತಿಪರ ಚಿಂತಕ ದಿನೇಶ್ ಅಮೀನ್‌ಮಟ್ಟು ಅಭಿಪ್ರಾಯಪಟ್ಟರು.
ನಗರದ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಭಾನುವಾರ ಸಂಜೆ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ವತಿಯಿಂದ ಏರ್ಪಡಿಸಿದ್ದ “ಚುನಾವಣೆ: ಒಳ, ಹೊರಗೆ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೋಮುವಾದ ಎನ್ನುವ ವೈರಸ್ ಒಮ್ಮೆ ಮನುಷ್ಯನ ಮೆದುಳಿಗೆ ಪ್ರವೇಶ ಪಡೆದರೆ ಅನ್ನ ಕೊಟ್ಟವರನ್ನು ಜನ ಮರೆತು ಬಿಡುತ್ತಾರೆ. ಕೋಮುವಾದ ಹರಡುವವರಿಗೆ ದೇಶದ ವೇದ, ಉಪನಿಷತ್ತು, ಸಂಸ್ಕತಿ, ಆಚಾರ, ವಿಚಾರದ
ಬಗ್ಗೆ ಕೇಳಿದರೇ ಗೊತ್ತಿರುವುದಿಲ್ಲ. ಇಂದಿನ ಕಾಲಘಟ್ಟದಲ್ಲಿ ಕೋಮುವಾದ ಹರಡುವುದು ಸಾಕಷ್ಟು ಸುಲಭ ಸಾಧ್ಯ ಎಂದು ಬೇಸರ ವ್ಯಕ್ತಪಡಿಸಿದರು.
ಧರ್ಮ, ಜಾತಿ ಹೆಸರಿನಲ್ಲಿ ಈ ಬಾರಿ ವಿಧಾನಸಭಾ ಚುನಾವಣೆ ನಡೆಯಿತು. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ
ಸಾರ್ವತ್ರಿಕ ಅಭಿಪ್ರಾಯ ಕೇಳಿಬಂದರೆ, ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿಯೇ ಇದ್ದವು. ಆದರೆ ಎಲ್ಲೆಡೆ ಹರಡಿದ್ದ ಕೋಮುವಾದ ಎಂಬ ವೈರಸ್‌ನ್ನು ತೊಳೆಯುವಲ್ಲಿ ಕಾಂಗ್ರೆಸ್ ನಾಯಕರು ವಿಫಲರಾದರು. ಪ್ರಚಾರದ ಕೊನೆಯ ದಿನಗಳಲ್ಲಿ ಕಾಂಗ್ರೆಸ್ ಹಿಂದೆ ಬಿತ್ತು. ಜತೆಗೆ ಕಾಂಗ್ರೆಸ್ ವಿರುದ್ಧ ಸಾಕಷ್ಟು ಅಪಪ್ರಚಾರ ನಡೆಸಲಾಯಿತು ಎಂದರು.
ಪ್ರಸ್ತುತ ಸನ್ನಿವೇಶವನ್ನು ಸೂಕ್ಷ್ಮವಾಗಿ ಗಮನಿಸಿದರೆ ಕೇವಲ ರಾಜಕೀಯದಲ್ಲಿ ಮಾತ್ರವಲ್ಲ, ಉದ್ಯೋಗ, ಶಿಕ್ಷಣ, ಉದ್ಯಮ, ಮಾಧ್ಯಮ ಹೀಗೆ ಎಲ್ಲಾ ಸಾಮಾಜಿಕ ಕ್ಷೇತ್ರಗಳಲ್ಲೂ ಅಹಿಂದ ವಿಸ್ತಾರವಾಗಬೇಕು. ಇಲ್ಲವಾದರೆ ಉಳಿದ ಅಹಿಂದಗಳು ಸೇರಿ ರಾಜಕೀಯ ಅಹಿಂದವನ್ನು ಮುಗಿಸುತ್ತವೆ ಎಂದು ಮಾರ್ಮಿಕವಾಗಿ ಹೇಳಿದರು.
ಮಹಿಳಾ ಹೋರಾಟಗಾರ್ತಿ ಯಮುನಾ ಗಾಂವ್ಕರ್ “ಚುನಾವಣೆಯಲ್ಲಿ ಮಹಿಳಾ ಅನುಭವ’ ಕುರಿತು ಮಾತನಾಡಿದರು. ಡಾ| ಎಚ್.ಎಸ್. ಅನುಪಮಾ, ಡಾ| ಸಬಿತಾ ಬನ್ನಾಡಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ
BBK11: ಸತ್ಯಕ್ಕೆ ಸೋಲಿಲ್ಲ.. ರಜತ್ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು
Kundapura: ಚೋರಾಡಿ; ಕರೆ ಬಂದರೆ ಬೆಟ್ಟ ಹತ್ತಬೇಕು!
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.