ಚುನಾವಣಾ ಪ್ರಚಾರ ಕಾವು ಜೋರು!

Team Udayavani, Apr 30, 2018, 12:30 PM IST

shiv.jpg

ತೀರ್ಥಹಳ್ಳಿ: ಮಲೆನಾಡಿನಾದ್ಯಂತ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಜೊತೆಗೆ ಚುನಾವಣೆಯ ಕಾವು ರಂಗೇರತೊಡಗಿದೆ. ಈ ಕ್ಷೇತ್ರದಲ್ಲಿ ಪ್ರಮುಖ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟಿ ನೀಡಿ ಓಟಿನ ಬೇಟೆ ನಡೆಸುತ್ತಿದ್ದಾರೆ.

ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಮನೆಮನೆಗಳಿಗೆ ದೌಡಾಯಿಸಿರುವ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಮನೆ ಅಂಗಳದ ಅಡಕೆ ಚಪ್ಪರದ ಕೆಳಗೆ ಅಕ್ಕಪಕ್ಕದ ಗ್ರಾಮಸ್ಥರನ್ನು ಸೇರಿಸಿಕೊಂಡು ತಮ್ಮ ಪಕ್ಷಗಳ ಸಾಧನೆ, ವಿರೋಧಿಗಳ ವೈಫಲ್ಯಗಳ ಬಗ್ಗೆ ಭರ್ಜರಿ ಭಾಷಣ ಮಾಡುತ್ತ ಓಟಿನ ಶಿಕಾರಿಯಲ್ಲಿ ತೊಡಗಿದ್ದಾರೆ.

ಕ್ಷೇತ್ರದ ಪ್ರಮುಖ ನಾಲ್ಕು ಹೋಬಳಿಗಳಲ್ಲೂ ಕಾಂಗ್ರೆಸ್‌, ಬಿಜೆಪಿ, ಮತ್ತು ಜೆಡಿಎಸ್‌ನ ಕಾರ್ಯಕರ್ತರು ಗ್ರಾಪಂ ವ್ಯಾಪ್ತಿಯ ಮನೆ ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ ತಮ್ಮ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಚುನಾವಣೆಗೆ 13 ದಿನ ಬಾಕಿ ಉಳಿದಿದ್ದು, ಮತದಾರರನ್ನು ಆಕರ್ಷಿಸುವ ಕೆಲಸವನ್ನು ತಂತ್ರಗಾರಿಕೆಯೊಂದಿಗೆ ಮುಂದುವರಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಮಾತ್ರ ಮನೆಗೆ ಬಂದು ಬಣ್ಣದ ಮಾತುಗಳನ್ನು ಆಡಿ ಓಟಿಗಾಗಿ ಕೈ ಮುಗಿಯುವ ಅಭ್ಯರ್ಥಿಗಳ ಬಗ್ಗೆಯೂ ಹಲವೆಡೆ ಮತದಾರರಲ್ಲಿ ಆಕ್ರೋಶ ಕಂಡು ಬಂದಿದೆ. ರಸ್ತೆ, ನೀರು, ವಿದ್ಯುತ್‌, ಆಶ್ರಯ ಮನೆ, ಸೇತುವೆ ಕಾಮಗಾರಿ, ಸಾಲಮನ್ನಾ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಮತದಾರರ ಮನವೊಲಿಸುವ ಕೆಲಸ ರಾಜಕೀಯ ಪಕ್ಷಗಳಲ್ಲಿ ಭರ್ಜರಿಯಾಗಿ ಮುಂದುವರಿದಿದೆ.

ಮೂರು ಪಕ್ಷಗಳಲ್ಲೂ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರೇ ಆಯಾ ಪಕ್ಷಗಳ ಸ್ಟಾರ್‌ ಪ್ರಚಾರಕರಾಗಿ ಕಂಗೊಳಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿನ ಮನೆಗಳ ಪಕ್ಕದ ಖಾಲಿ ಜಾಗದಲ್ಲಿ ಕುರ್ಚಿಗಳನ್ನು ಹಾಕಿ ಪ್ರಚಾರ ಸಭೆಯನ್ನು ನಡೆಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿರುವ ದೇವಸ್ಥಾನಗಳಿಗೆ ಬೇಟಿ ನೀಡಿ ಮುಖಂಡರು, ಕಾರ್ಯಕರ್ತರು ಗೆಲುವಿಗಾಗಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳಿಗೆ ಮೊರೆ ಹೋಗಿದ್ದಾರೆ. ತೀರ್ಥಹಳ್ಳಿ ಕ್ಷೇತ್ರದ ಈ ಬಾರಿಯ ಚುನಾವಣಾ ಆಖಾಡ ಪಕ್ಷದ ಅಭಿವೃದ್ಧಿಯ ಬಗೆಗಿನ ಪ್ರಚಾರಕ್ಕಿಂತ ವೈಯಕ್ತಿಕ ಟೀಕೆ ಟಿಪ್ಪಣಿಗಳಿಗೆ ಮೂರು ಪಕ್ಷದ ಕಾರ್ಯಕರ್ತರು ಮುಖಂಡರು ಹೆಚ್ಚು ಒತ್ತು ನೀಡುತ್ತಿದ್ದಾರೆ.

ಒಟ್ಟಾರೆ ಈ ಬಾರಿಯ ವಿಧಾನಸಭಾ ಚುನಾವಣೆಯ ಪ್ರಚಾರದ ರಂಗಿನಾಟ ಮಲೆನಾಡಿನಾದ್ಯಂತ ಹೊಸ ರೂಪ ಪಡೆದುಕೊಳ್ಳುತ್ತಿದೆ. ಇನ್ನೊಂದೆಡೆ ಮೂರು ಪಕ್ಷಗಳ ಕಾರ್ಯಕರ್ತರು ಕೆಲವು ದಿನಗಳಿಂದ ವಲಸೆ ಹೋಗಿ ಮತ್ತೆ ಹಳೆ ಪಕ್ಷಕ್ಕೆ ವಾಪಸ್‌ ಆಗಿರುವುದು ಕಂಡು ಬಂದಿದೆ. ಕಾರ್ಯಕರ್ತರನ್ನೇ ಹೆಚ್ಚು ನಂಬಿರುವ ರಾಜಕೀಯ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಆಮಿಷ ನೀಡಿದಂತೆ ಕಾರ್ಯಕರ್ತರಿಗೂ ಆಕರ್ಷಕ ಆಮಿಷ ನೀಡಿದ ಹಲವು ಸಂದರ್ಭಗಳು ಕಂಡು ಬಂದಿದೆ. ಇನ್ನೊಂದೆಡೆ ಪ್ರಮುಖ ಸಮುದಾಯಗಳ ಮುಖಂಡರು ತಮ್ಮ ಮುಷ್ಠಿಯಲ್ಲಿ ಹಿಡಿದುಕೊಂಡು ಜಾತಿ ಸಂಘಟನೆಗಳ ಮೂಲಕ ಮತವನ್ನು ಸೆಳೆಯುವ ಪ್ರಯತ್ನ ಹಲವೆಡೆ ನಡೆಯುತ್ತಿದೆ.

ಮೂರು ಪಕ್ಷಗಳಲ್ಲಿಯೂ ಸಹ ಪಕ್ಷದ ಕಾರ್ಯಕರ್ತರು ಬೇರೆ ಪಕ್ಷಕ್ಕೆ ವಲಸೆ ಹೋಗದಂತೆ ತಡೆ ಹಿಡಿದುಕೊಳ್ಳುವುದು ಕಷ್ಟದ ಕೆಲಸವಾಗಿದೆ. ಆದರೆ ಕ್ಷೇತ್ರದ ಮತದಾರರು ಮಾತ್ರ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರುಗಳ ರಂಗಿನಾಟವನ್ನು ಗಮನಿಸುತ್ತಿದ್ದಾರೆ. 

„ರಾಂಚಂದ್ರ ಕೊಪ್ಪಲು

ಟಾಪ್ ನ್ಯೂಸ್

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.