ಸರ್ಕಾರ ಕೋಮು ವಿಚಾರಕ್ಕೆ ನೀಡಿದಷ್ಟು ಆಸಕ್ತಿ ಕೋವಿಡ್ ಪರಿಹಾರಕ್ಕೆ ನೀಡುತ್ತಿಲ್ಲ: ಕಾಂಗ್ರೆಸ್
Team Udayavani, Mar 25, 2022, 3:36 PM IST
ಸಾಗರ: ಕೋವಿಡ್-19ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ಕೋವಿಡ್ 1, 2 ಮತ್ತು ಮೂರನೇ ಅಲೆ ಸಂದರ್ಭದಲ್ಲಿ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ಕೇಂದ್ರ ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ 50 ಸಾವಿರ ರೂ. ರಾಜ್ಯ ಸರ್ಕಾರ 1 ಲಕ್ಷ ರೂ. ಪರಿಹಾರ ಕೊಡಲು ಸಮ್ಮತಿ ಸೂಚಿಸಿತ್ತು. ಆದರೆ ಈತನಕ ಬಹುತೇಕ ಕುಟುಂಬಗಳಿಗೆ ಪರಿಹಾರ ಧನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡಿಲ್ಲ. ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ. ಸರ್ಕಾರ ಘೋಷಣೆ ಮಾಡಿದ ಪರಿಹಾರಧನ ಪೂರ್ಣ ಪ್ರಮಾಣದಲ್ಲಿ ಪಾವತಿ ಮಾಡಿಲ್ಲ. ಸರ್ಕಾರ ಕೂಡಲೇ ಪರಿಹಾರ ಧನ ನೀಡಿ ಸಾಂತ್ವಾನ ಹೇಳಬೇಕು ಎಂದು ಒತ್ತಾಯಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶಬಾಬು ಮಾತನಾಡಿ, ತಾಲೂಕಿನಲ್ಲಿ ಕೋವಿಡ್‌ನಿಂದ 207 ಜನರು ಮೃತಪಟ್ಟಿದ್ದಾರೆ. ಇಲ್ಲಿವರೆಗೆ ಕೇವಲ 96 ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ. ಉಳಿದ ಕುಟುಂಬಗಳು ಪರಿಹಾರಕ್ಕಾಗಿ ಕಚೇರಿ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಕೋಮು ಭಾವನೆ ಕೆರಳಿಸುವ ವಿಚಾರಕ್ಕೆ ನೀಡಿದಷ್ಟು ಆಸಕ್ತಿಯನ್ನು ಇಂತಹ ವಿಷಯಗಳತ್ತ ತೋರಿಸುತ್ತಿಲ್ಲ. ಕೋವಿಡ್‌ನಿಂದ ಮರಣ ಹೊಂದಿರುವವರ ವಿವರ ಆಸ್ಪತ್ರೆ ಮೂಲಕ ಸರ್ಕಾರದ ಬಳಿ ಇರುತ್ತದೆ. ಆದರೂ ಸಾಕಷ್ಟು ಅರ್ಜಿಗಳನ್ನು ವಿಲೇ ಮಾಡಿಲ್ಲ. ದಾಖಲೆಗಾಗಿ ಮೃತಪಟ್ಟ ವ್ಯಕ್ತಿಯ ಕುಟುಂಬವನ್ನು ಅಲೆದಾಡಿಸುತ್ತಿರುವುದು ಖಂಡನೀಯ ಎಂದರು.
ಇದನ್ನೂ ಓದಿ:ನಾವು ಕುಂಕುಮ ವ್ಯಾಪಾರ ಮಾಡಿ ನೀಡುವ ಹಣದಿಂದ ಅವರು ಹಜ್ ಯಾತ್ರೆಗೆ ಹೋಗುವುದು ಬೇಡ
ಈಗಾಗಲೇ ಕೋವಿಡ್ ನಾಲ್ಕನೇ ಅಲೆ ವಿದೇಶಗಳಲ್ಲಿ ಪ್ರಾರಂಭವಾಗಿ, ಅನೇಕ ದೇಶಗಳಲ್ಲಿ ಲಾಕ್‌ಡೌನ್ ಹೇರಲಾಗಿದೆ. ಆದರೆ ಕರ್ನಾಟಕದಲ್ಲಿ ಕೋವಿಡ್ ನಾಲ್ಕನೇ ಅಲೆ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಬಗ್ಗೆ ಗಮನ ಹರಿಸಿಲ್ಲ. ತಕ್ಷಣ ಎಸಿಯವರು ಕೋವಿಡ್ ಮುಂಜಾಗೃತಾ ಕ್ರಮ ತೆಗೆದುಕೊಳ್ಳಬೇಕು. ಮುಂದಿನ 15 ದಿನಗಳಲ್ಲಿ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಎಲ್ಲ ಕುಟುಂಬಗಳಿಗೆ ಪರಿಹಾರ ನೀಡದೆ ಹೋದಲ್ಲಿ ಕಾಂಗ್ರೇಸ್ ಪಕ್ಷದಿಂದ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಹಾಬಲ ಕೌತಿ, ತಾರಾಮೂರ್ತಿ, ಕೆ.ಸಿದ್ದಪ್ಪ, ಗಣಪತಿ ಮಂಡಗಳಲೆ, ಕಬೀರ್ ಚಿಪ್ಳಿ, ಪಾರ್ವತಿ ಬೇಸೂರು, ವೆಂಕಟೇಶ್, ಗಣಾಧೀಶ್, ಜಯರಾಮ್, ಶ್ರೀನಾಥ್, ರಮೇಶ್ ಚಂದ್ರಗುತ್ತಿ, ಅನ್ವರ್ ಭಾಷಾ, ನಾರಾಯಣ ಅರಮನೆಕೇರಿ, ಕೃಷ್ಣಮೂರ್ತಿ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
ತೀರ್ಥಹಳ್ಳಿಯಲ್ಲಿ ವೈಭವದ ಜಾತ್ರೆ; ಬುರ್ಖಾ ಧರಿಸಿದ್ದ ಅನಾಮಧೇಯ ವ್ಯಕ್ತಿ ಪತ್ತೆ !
Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.