ರಿಯಾಲಿಟಿ ಶೋನಿಂದ ಮಕ್ಕಳಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಸ್ವಪ್ರಜ್ಞೆಯ ಅಪಾಯ: ಪಲ್ಲವಿ

Team Udayavani, Apr 1, 2022, 12:15 PM IST

10pallavi

ಸಾಗರ: ಸಾಮಾನ್ಯವಾಗಿ ಮಕ್ಕಳಲ್ಲಿ ನಾನು, ನನ್ನಿಂದ ಎಂಬ ಪ್ರಜ್ಞೆ ಇರುವುದಿಲ್ಲ. ಆದರೆ ರಿಯಾಲಿಟಿ ಶೋಗಳು ಅವರಲ್ಲಿ ಈ ಪ್ರಜ್ಞೆಯನ್ನು ಜಾಗೃತಗೊಳಿಸುತ್ತಿದೆ ಎಂದು ಗಾಯಕಿ, ರಂಗನಟಿ ಎಂ.ಡಿ. ಪಲ್ಲವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಎಸ್‌ಪಿಎಂ ರಸ್ತೆಯ ಬಾಪಟ್ ನಿವಾಸದಲ್ಲಿನ ಚರಕ ಅಂಗಡಿಯಲ್ಲಿ ಚರಕ ಹಾಗೂ ಕವಿಕಾವ್ಯ ಟ್ರಸ್ಟ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ‘ಕುಶಲೆ’ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ನಡೆದ ಹಾಡು ಹರಟೆ ಸಂವಾದದಲ್ಲಿ ಅವರು ಮಾತನಾಡಿದರು.

ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರು ಮಕ್ಕಳನ್ನು ಉದ್ದೇಶಿಸಿ ಪದೇ ಪದೇ ನೀನು ಹೀಗೆ ಮಾಡಿದೆ, ನೀನು ಈ ರೀತಿ ನಡೆದುಕೊಂಡೆ ಎಂದು ಹೇಳುವುದರಿಂದ ಮಕ್ಕಳಲ್ಲಿ ಸ್ವಪ್ರಜ್ಞೆ ಅಗತ್ಯಕ್ಕಿಂತ ಹೆಚ್ಚಾಗಿ ಬೆಳೆಯುತ್ತಿದೆ. ಇವುಗಳಲ್ಲಿ ಭಾಗವಹಿಸುವ ಮಕ್ಕಳು ಸ್ಪರ್ಧಾರ್ಥಿಗಳಾಗುತ್ತಿದ್ದಾರೆಯೇ ಹೊರತು ಕಲಾವಿದರಾಗುತ್ತಿಲ್ಲ ಎಂದರು.

ಗ್ರಾಮೀಣ ಕರಕುಶಲ ಕಲೆ, ನೇಕಾರಿಕೆ ಮುಂತಾದವುಗಳ ಸಮಸ್ಯೆಗಳ ಬಗ್ಗೆ ಪ್ರಸನ್ನ ಅವರಿಂದಾಗಿ ನನ್ನಂತವರ ಅರಿವಿಗೆ ಬಂದಿದೆ. ಜಿಎಸ್‌ಟಿ ಸಮಸ್ಯೆ ಸೇರಿದಂತೆ ಗ್ರಾಮೀಣ ಕರಕುಶಲ ಕಲೆಗಳ ಸಮಸ್ಯೆ ಮತ್ತು ಸವಾಲುಗಳ ಸಂದರ್ಭ ಪ್ರಸನ್ನ ಸರ್ಕಾರವನ್ನು ಎಚ್ಚರಿಸಿದ್ದಾರೆ. ಪ್ರಸನ್ನರ ಚಳುವಳಿಯ ಪ್ರಭಾವದಿಂದಾಗಿ ನಾನೂ ಸಹ ಕೈ ಜೋಡಿಸಲು ಸಾಧ್ಯವಾಗಿದೆ. ಈಗ ಇಂತಹ ಪ್ರಶಸ್ತಿ ಪ್ರಸನ್ನ ಮತ್ತು ಚರಕದ ಮೂಲಕ ನನಗೆ ದೊರಕುತ್ತಿರುವುದು ಸಂತೋಷದ ಸಂಗತಿ ಎಂದರು.

ಕವಿಕಾವ್ಯ ಟ್ರಸ್ಟ್‌ನ ಕಾರ‍್ಯದರ್ಶಿ ಜಿ.ಇಂದುಕುಮಾರ್ ಮಾತನಾಡಿ,  ಗ್ರಾಮಾಂತರದ ಹೆಣ್ಣುಮಕ್ಕಳ ಸಂಸ್ಥೆಯಾಗಿರುವ ಕವಿಕಾವ್ಯ ಟ್ರಸ್ಟ್‌ನ ವತಿಯಿಂದ ಕುಶಲೆ ಪ್ರಶಸ್ತಿ ನೀಡುವ ಕಾರ‍್ಯವನ್ನು 2021-22ನೇ ಸಾಲಿನಲ್ಲಿ ಆರಂಭಿಸಲಾಗಿದೆ.  25 ಸಾವಿರ ರೂಪಾಯಿ ನಗದು, ಫಲಕ ಒಳಗೊಂಡಿರುವ ಈ ಪ್ರಶಸ್ತಿಗೆ ಕುಶಲೆ ಎಂದು ಹೆಸರಿಡಲಾಗಿದೆ.  ಮೊದಲ ಪ್ರಶಸ್ತಿಯನ್ನು ಕನ್ನಡದ ಹೆಸರಾಂತ ನಟಿ ಹಾಗೂ ಗಾಯಕಿ ಎಂ.ಡಿ. ಪಲ್ಲವಿಯವರಿಗೆ ಸಂಸ್ಥೆ ನೀಡುತ್ತಿರುವುದು ಹೆಮ್ಮೆ ತಂದಿದೆ. ಸಂಗೀತ, ನಾಟಕ ಕ್ಷೇತ್ರಕ್ಕೆ ಪಲ್ಲವಿಯವರು ನೀಡಿದ ಕೊಡುಗೆ ಹಾಗೂ ಅವರ ಸಹಕಾರಿ ಮನೋಭಾವವನ್ನು ಪರಿಗಣಿಸಿ ಕುಶಲೆ ಪ್ರಶಸ್ತಿ ನೀಡಲಾಗಿದೆ ಎಂದರು.

ಹಾಡು ಹರಟೆ ಕಾರ‍್ಯಕ್ರಮವನ್ನು ಎಂ.ವಿ.ಪ್ರತಿಭಾ ನಿರ್ವಹಿಸಿದರು. ಚರಕ ಸಂಸ್ಥೆಯ ಮಹಾಲಕ್ಷ್ಮಿ, ರಮೇಶ್, ಪೀಟರ್, ಜೀವನ್ಮುಖಿ ಸಂಸ್ಥೆಯ ನಂದಾ ಗೊಜನೂರು, ಗೀತಾ ಶ್ರೀನಾಥ್, ರೋಹಿಣಿ ಶರ್ಮಾ, ಮಂಜುಳಾ, ಚೈತ್ರ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.