ಸೊರಬ: ಹೊಸ ಮುಖಗಳಿಗೆ ಮಣೆ
Team Udayavani, Dec 31, 2020, 4:33 PM IST
ಸೊರಬ: ತಾಲೂಕಿನ 27 ಗ್ರಾಮ ಪಂಚಾಯ್ತಿಗಳಿಗೆ ಎರಡನೇ ಹಂತದಲ್ಲಿ ಡಿ.27ರಂದು ನಡೆದ ಚುನಾವಣೆಯ ಮತ ಏಣಿಕೆ ಪ್ರಕ್ರಿಯೆ ಬುಧವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ನಡೆಯಿತು.
ಮತ ಏಣಿಕೆಗಾಗಿ 45 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ಟೇಬಲ್‌ಗೆ ಒಬ್ಬರು ಏಣಿಕೆ ಮೇಲ್ವಿಚಾರಕರು, ಇಬ್ಬರು ಏಣಿಕೆ ಸಹಾಯಕರು ಹಾಗೂ ಒಬ್ಬರು ಡಿ ಗ್ರೂಪ್ ನೌಕರರು ಕಾರ್ಯನಿರ್ವಹಿಸಿದರು. ಮೊದಲುಮ ಅಂಚೆ ಮತದ ಏಣಿಕೆ ನಂತರ ಬ್ಯಾಲೇಟ್ ಏಣಿಕೆ ನಡೆಯಿತು. ಮೊದಲ ಮತ್ತು ಎರಡನೇ ಹಂತದ ಮತ ಏಣಿಕೆ ಪೂರ್ಣಗೊಂಡು ಮಧ್ಯಾಹ್ನ 3ರ ಸುಮಾರಿಗೆ ಮೂರನೇ ಹಂತದ ಏಣಿಕೆ ಪ್ರಕ್ರಿಯೆ ಆರಂಭಗೊಂಡಿತು.
ಮತ ಏಣಿಕೆ ನಡೆದ ಕಾಲೇಜಿನ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು. ವಿವಿಧೆಡೆಗಳಿಂದ ಆಗಮಿಸುವ ವಾಹನಗಳ ನಿಲುಗಡೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅವಕಾಶ ಮಾಡಿದ್ದರಿಂದ ಸಂಚಾರ ದಟ್ಟಣೆ ಎದುರಾಗಲಿಲ್ಲ.
ಇದನ್ನೂ ಓದಿ:ಸಿಡ್ನಿ ಟೆಸ್ಟ್: ಉಮೇಶ್ ಬದಲಿಗೆ ಶಾರ್ದೂಲ್ ಠಾಕೂರ್‌ಗೆ ಹೆಚ್ಚಿನ ಅವಕಾಶ
ಕಾರ್ಯಕರ್ತರ ಸಂಭ್ರಮ: ಕಾಲೇಜು ಮುಂಭಾಗ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಕಾರ್ಯಕರ್ತರು ಚುನಾವಣಾ ಫಲಿತಾಂಶ ಬರುತ್ತಿದ್ದಂತೆ ವಿಜೇತ ಅಭ್ಯರ್ಥಿಗಳಿಗೆ ಹಾರ ಹಾಕುವ ಮೂಲಕ ಶುಭ ಕೋರಿ ಸಂಭ್ರಮಿಸಿದರು. ಒಗ್ಗಟ್ಟಾಗಿ ಚುನಾವಣೆ ಎದುರಿಸುವುದಾಗಿ ಹೇಳಿದ್ದ ಬಿಜೆಪಿ ಪಕ್ಷದಲ್ಲಿ ಫಲಿತಾಂಶ ಹೊರ ಬೀಳುತ್ತಿದ್ದಂತೆ ಎರಡು ಬಣಗಳಿರುವುದು ಸ್ಪಷ್ಟವಾಗಿ ಗೋಚರಿಸಿತು. ಸಂಸದ ಹಾಗೂ ಶಾಸಕ ಬಿಜೆಪಿಯವರೇ ಆಗಿರುವ ಕಾರಣ ಹೆಚ್ಚಿನ ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತರೇ ಆಯ್ಕೆಯಾಗುತ್ತಿದ್ದಾರೆ.
ಹೊಸಬರಿಗೆ ಮಣೆ ಹಾಕಿದ ಮತದಾರ: ಈ ಬಾರಿಯ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಮತದಾರರು ಹೊಸ ಮುಖಗಳು ಹಾಗೂ ವಿದ್ಯಾವಂತರಿಗೆ ಮಣೆ ಹಾಕುವ ಜೊತೆಗೆ ಹಳಬರನ್ನು ಮಣಿಸಿದ್ದಾರೆ. ತಾಲೂಕಿನ ತಲಗುಂದ ಗ್ರಾಪಂನ ಸೂರಣಗಿ ಮತಕ್ಷೇತ್ರದಲ್ಲಿ ಹೈಕೋರ್ಟ್‌ನ ಯುವ ವಕೀಲ ವಿ.ರವಿ ಗೆಲುವು ಸಾಧಿ ಸಿರುವುದು ವಿಶೇಷವಾಗಿದ್ದರೆ, ಬೆನ್ನೂರು ಗ್ರಾಪಂ ಮಾಜಿ ಅಧ್ಯಕ್ಷ ಮಾರ್ಯಪ್ಪ, ಹೆಗ್ಗೂಡು ಗ್ರಾಪಂ ಮಾಜಿ ಅಧ್ಯಕ್ಷ ಜಗದೀಶ್ ಕುಪ್ಪೆ, ಹರೀಶಿ ಗ್ರಾಪಂ ಮಾಜಿ ಅಧ್ಯಕ್ಷ ಉಮಾಪತಿ ಪತ್ನಿ ಗೌರಮ್ಮ ಪರಾಭವಗೊಂಡ ಹಿರಿಯರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
ಹಿಂದೂ ಅತ್ಯಂತ ಪುರಾತನವಾದ ಧರ್ಮ: ಡಾ.ನಿರ್ಮಲಾ ನಂದನಾಥ ಸ್ವಾಮೀಜಿ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.