ರಾಜ್ಯ ಸರಕಾರದಿಂದ ಜನತೆಗೆ ಮೋಸ: ಈಶ್ವರಪ್ಪ
Team Udayavani, Jul 15, 2018, 6:40 AM IST
ಶಿವಮೊಗ್ಗ: ರಾಜ್ಯ ಸರಕಾರ ಎರಡು ಅಂಶಗಳಲ್ಲಿ ಜನರಿಗೆ ಮೋಸ ಮಾಡಿದೆ. ಅಕ್ಕಿ ಕಡಿತಗೊಳಿಸಿದ್ದು ಹಾಗೂ ವಿದ್ಯಾರ್ಥಿಗಳ ಬಸ್‌ಪಾಸ್ ಸೌಲಭ್ಯ ಕಿತ್ತುಕೊಂಡಿದ್ದು ಸರಿಯಲ್ಲ ಈ ಬಗ್ಗೆ ರಾಜ್ಯ ಸರಕಾರ ಕ್ರಮಕೈಗೊಳ್ಳಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.
ರಾಜ್ಯ ಸರಕಾರ ಜನರಿಗೆ ಮೋಸ ಮಾಡೋದರಲ್ಲೇ ನಿರತವಾಗಿದೆ. ಬಜೆಟ್ ಸಮಯದಲ್ಲಿ ಬಡವರಿಗೆ 7 ಕೆಜಿ ಅಕ್ಕಿ ಕೊಡಲಾಗುವುದು ಎಂದು ಘೋಷಿಸಿದರು. ಆದರೆ ಕೊನೆಗೆ ಉಲ್ಟಾ ಹೊಡೆದು 5 ಕೆಜಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಇದು ರಾಜ್ಯದ ಬಡವರಿಗೆ ಹಾಕಿರುವ ದೊಡ್ಡ ಬರೆ ಎಂದರು.
ಕೇಂದ್ರ ಸರಕಾರ ಕೊಟ್ಟಿರುವ ಅಕ್ಕಿ ಜತೆ ರಾಜ್ಯ ಸರಕಾರದ್ದೂ ಸೇರಿಸಿ 7 ಕೆಜಿಗಿಂತ ಹೆಚ್ಚಿಗೆ ಅಕ್ಕಿ ಕೊಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದರು.
ರೈತರಿಗೆ ಅನ್ಯಾಯ: ಇತ್ತ ಚಿಕ್ಕಮಗಳೂರಿನಲ್ಲಿ ಮಾತನಾಡಿದ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಾಲಮನ್ನಾ ವಿಚಾರದಲ್ಲಿ ರಾಜ್ಯ ಸರಕಾರ ರೈತರಿಗೆ ಅನ್ಯಾಯ ಮಾಡಿರುವುದಲ್ಲದೆ, ಸಾಲಮನ್ನಾ ಹೆಸರಿನಲ್ಲಿ ರಾಜ್ಯದ 6.50ಕೋಟಿ ಜನರ ಮೇಲೆ ಹೆಚ್ಚಿನ ಹೊರೆ ಹೊರಿಸಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.