6 ವರ್ಷದ ಮಗುವಿಗೆ ಸೋಂಕು
Team Udayavani, Jun 18, 2020, 10:46 AM IST
ತೀರ್ಥಹಳ್ಳಿ: ವಿಠ್ಠಲ ನಗರದ ಕೋವಿಡ್ ಪ್ರಕರಣ ಕಂಡು ಬಂದ ಪ್ರದೇಶವನ್ನು ತಹಶೀಲ್ದಾರ್ ಮತ್ತು ಆರೋಗ್ಯ ಅಧಿಕಾರಿಗಳು ವೀಕ್ಷಿಸಿದರು.
ತೀರ್ಥಹಳ್ಳಿ: ಪಟ್ಟಣಕ್ಕೆ ಹೊಂದಿ ಕೊಂಡಿರುವ ಮೇಲಿನ ಕುರುವಳ್ಳಿ ಗ್ರಾಪಂ ವ್ಯಾಪ್ತಿಯ ವಿಠಲ ನಗರದಲ್ಲಿ 6 ವರ್ಷದ ಗಂಡು ಮಗುವೊಂದಕ್ಕೆ ಕೋವಿಡ್ ಸೋಂಕು ದೃಢಪಟ್ಟಿದೆ.
ಕುರುವಳ್ಳಿ ಪುತ್ತಿಗೆ ಮಠದ ಹಿಂಭಾಗವಿರುವ ವಿಠಲ ನಗರಕ್ಕೆ ಮುಂಬೈನಲ್ಲಿದ್ದ ವ್ಯಕ್ತಿಯೊಬ್ಬರು ಇತ್ತೀಚೆಗೆ ಬಂದಿದ್ದರು. ವಿಷಯ ತಿಳಿಯುತ್ತಿದ್ದಂತೆ ತಾಲೂಕು ಆಡಳಿತ ತಕ್ಷಣ ಆ ವ್ಯಕ್ತಿಯನ್ನು ಕ್ವಾರಂಟೈನ್‌ಗೆ ಒಳಪಡಿಸಿತ್ತು. ಕ್ವಾರಂಟೈನ್‌ನಲ್ಲಿ ಆ ವ್ಯಕ್ತಿಗೆ ಕೋವಿಡ್ ಇರುವುದು ದೃಢಪಟ್ಟಿತ್ತು. ಕೂಡಲೇ ಅವರನ್ನು ಶಿವಮೊಗ್ಗದ ಕೋವಿಡ್ ಆಸ್ಪತ್ರೆಯಾದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಮೂರು ದಿನಗಳ ಹಿಂದೆ ಭಾನುವಾರ ವಿಠಲ ನಗರಕ್ಕೆ ಬಂದಿದ್ದರು. ಅವರಲ್ಲಿ 6 ವರ್ಷದ ಗಂಡು ಮಗುವಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾಯಿ ಹಾಗೂ ಎಂಟು ವರ್ಷದ ಮಗುವಿಗೆ ಕೋವಿಡ್ ನೆಗೆಟಿವ್ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ವಿಠಲನಗರದ ಸೋಂಕು ದೃಢಪಟ್ಟ ಅಕ್ಕಪಕ್ಕದ 5 ಮನೆ ವ್ಯಾಪ್ತಿಯನ್ನು ಸೀಲ್‌ಡೌನ್ ಮಾಡಲಾಗಿದೆ.
ಇನ್ನುಳಿದ ಇನ್ನೂರು ಮೀಟರ್ ದೂರದವರೆಗಿನ ಮನೆಗಳನ್ನು ಬಫರ್ ಜೋನ್ ಮಾಡಲಾಗಿದೆ. ಗ್ರಾಪಂನಿಂದ ಮನೆಗಳ ಸುತ್ತ ಮುತ್ತ ಔಷಧ ಸಿಂಪಡಣೆ ಮಾಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಬೆಳಗ್ಗೆ ತಹಶೀಲ್ದಾರ್ ಡಾ| ಶ್ರೀಪಾದ್ ಸೇರಿದಂತೆ ಕಂದಾಯ ಅಧಿಕಾರಿ ಕಟ್ಟೆ ಮಂಜುನಾಥ್, ತಾಲೂಕು ಆರೋಗ್ಯಾಧಿಕಾರಿ, ಸ್ಥಳೀಯ ಗ್ರಾಪಂ ಪಿಡಿಒ, ಗ್ರಾಪಂ ಸದಸ್ಯರು, ಪೊಲೀಸರು ಸೇರಿ ಗ್ರಾಮಕ್ಕೆ ತೆರಳಿ ಸೀಲ್‌ಡೌನ್ ಮಾಡಿದ್ದಾರೆ. ತೀರ್ಥ ಹಳ್ಳಿಯಲ್ಲಿ ಇದು ನಾಲ್ಕನೇ ಕೇಸಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.