ತೀರ್ಥಹಳ್ಳಿಯಲ್ಲಿ ಕೋವಿಡ್ ಪತ್ತೆ: ಸ್ಥಳೀಯರ ಆತಂಕ
Team Udayavani, Jun 29, 2020, 1:05 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತೀರ್ಥಹಳ್ಳಿ: ಶಾಂತವಾಗಿದ್ದ ಪಟ್ಟಣದಲ್ಲಿ ಇದೀಗ ಮೊದಲ ಕೋವಿಡ್ ಪ್ರಕರಣ ದಾಖಲಾಗಿದೆ. ತಾಲೂಕಿನಲ್ಲಿ ಈ ವರೆಗೆ 8 ಪ್ರಕರಣ ದಾಖಲಾಗಿದ್ದು, ಇದೀಗ 9ನೇ ಪ್ರಕರಣ ಪತ್ತೆಯಾಗಿದೆ.
33 ವರ್ಷದ ನರ್ಸ್‌ಗೆ ಕೋವಿಡ್ ದೃಢಪಟ್ಟಿದ್ದು, ಪಟ್ಟಣದ ಬಾಳೆಬೈಲು ಸಮೀಪದ ಮನೆ, ಹೋಟೆಲ್ ಮತ್ತು ಸುತ್ತಮುತ್ತ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಮನೆಯವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಕೋವಿಡ್ ಪಾಸಿಟಿವ್ ಇರುವ ಮಹಿಳೆ ಹೆಬ್ರಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಅವರು ಕೋವಿಡ್ ವಾರಿಯರ್ಸ ಆಗಿ ಸೇವೆ ಸಲ್ಲಿಸುತ್ತಿದ್ದ ವೇಳೆ ರೋಗ ತಗುಲಿರುವ ಶಂಕೆ ವ್ಯಕ್ತವಾಗುತ್ತಿದೆ. ನರ್ಸ್ ಉಡುಪಿಯ ಅಜ್ಜರಕಾಡು, ಹೆಬ್ರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಸೋಂಕು ತಗುಲಿರಬಹುದು ಎಂಬ ಬಗ್ಗೆ ಪ್ರಾಥಮಿಕ ತನಿಖೆ ನಡೆಯುತ್ತಿದೆ.
ಮನೆ ಸುತ್ತಮುತ್ತ ಸೀಲ್‌ಡೌನ್: ತೀರ್ಥಹಳ್ಳಿಯ ಇಂದಿರಾ ನಗರ ರಸ್ತೆಯಿಂದ ಸುಮಾರು 300 ಮೀ. ಸೀಲ್‌ಡೌನ್ ಮಾಡಲಾಗಿದೆ. ಅಲ್ಲಿ 4 ಕುಟುಂಬಗಳಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಪತಿ ಆಟೋ ಚಾಲಕನಾಗಿದ್ದು, ಅನೇಕ ಕಡೆ ಓಡಾಡಿರುವ ಶಂಕೆ ಇದೆ. ಮನೆ ಪಕ್ಕದ ಸ್ಥಳೀಯ ಹೋಟೆಲ್ ಕೂಡ ಸೀಲ್‌ಡೌನ್ ಮಾಡಲಾಗಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ ಮೊದಲ ಪ್ರಕರಣ ದಾಖಲಾಗಿದ್ದು, ಜನತೆ ಆತಂಕಕ್ಕೆ ಒಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.