ಮಲೆನಾಡ ಚಿರಾಪುಂಜಿ ಆಗುಂಬೆಯಲ್ಲೇ ನೀರಿನ ಸಮಸ್ಯೆ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚೆ
ನಿಮ್ಮನೆಲ್ಲಾ ಬದಲಾವಣೆ ಮಾಡಬೇಕು: ಅಧಿಕಾರಿಗಳ ವಿರುದ್ಧ ಆರಗ ಫುಲ್ ಗರಂ
Team Udayavani, Nov 28, 2023, 3:37 PM IST
ತೀರ್ಥಹಳ್ಳಿ: ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಎಂಬ ಹೆಗ್ಗಳಿಕೆಯೊಂದಿಗೆ ಮಲೆನಾಡ ಚಿರಾಪುಂಜಿ ಎಂದೇ ಖ್ಯಾತಿ ಪಡೆದಿರುವ ಆಗುಂಬೆಯಲ್ಲೇ ಈ ಬಾರಿ ಅತೀ ಹೆಚ್ಚು ನೀರಿನ ಸಮಸ್ಯೆ ಆಗಲಿದೆ. ಅದಕ್ಕಾಗಿ ಟ್ಯಾಂಕರ್ ವ್ಯವಸ್ಥೆ ಆಗಬೇಕಿದೆ ಎಂದು ಅಧಿಕಾರಿಗಳು ಶಾಸಕ ಆರಗ ಜ್ಞಾನೇಂದ್ರ ಅವರಿಗೆ ತಿಳಿಸಿದರು.
ನ.28ರ ಮಂಗಳವಾರ ತಾಲೂಕು ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರದಿಂದ ಒದಗುವ ಸಮಸ್ಯೆಗಳ ಕುರಿತು ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು, ಗ್ರಾಮಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಗಮನ ವಹಿಸಬೇಕು. ಎಲ್ಲಾ ಕೆಲಸ ಶಾಸಕನಾಗಿ ನಾನು ಮಾಡಲು ಆಗುವುದಿಲ್ಲ. ಕೆಲವು ಕಡೆ ನೀರಿಗಾಗಿ ತುರ್ತು ಕಾಮಗಾರಿ ನಡೆಸಿ ಇಲ್ಲದಿದ್ದರೆ ಟ್ಯಾಂಕರ್ ವ್ಯವಸ್ಥೆ ಮಾಡಿ ಎಂದು ಹೇಳಿದರು.
ಈ ಬಾರಿ ಆಗುಂಬೆ, ಮೇಗರವಳ್ಳಿ, ಕೋಣಂದೂರು, ಕುಡುಮಲ್ಲಿಗೆ, ಗುಡ್ಡೆಕೊಪ್ಪ, ಬಸವಾನಿ ಸೇರಿದಂತೆ ಹಲವಾರು ಗ್ರಾಮಪಂಚಾಯಿತಿಗಳಿಗೆ ನೀರಿನ ಸಮಸ್ಯೆ ಎದುರಾಗಿದ್ದು, ಇನ್ನೂ ಎರಡು ತಿಂಗಳುಗಳಲ್ಲಿ ನೀರಿನ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇದೆ. ಈಗಾಗಲೇ ಜಲಜೀವನ್ ಮಿಷನ್ ಅಡಿಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದ್ದು, ಅದರ ಬಗ್ಗೆ ಗ್ರಾಮಪಂಚಾಯತ್ ಅಧಿಕಾರಿಗಳು ಗಮನ ವಹಿಸಿ ಜನರಿಗೆ ತೊಂದರೆ ಆಗದಂತೆ ನೀರಿನ ವ್ಯವಸ್ಥೆ ಮಾಡಿಕೊಡಬೇಕೆಂದು ತಿಳಿಸಿದರು.
ಶಾಸಕರ ಎದುರು ಅಧಿಕಾರಿಗಳು ಸೈಲೆಂಟ್!
ಜನರ ಕಷ್ಟಕ್ಕೆ ಸ್ಪಂದನೆ ಮಾಡಬೇಕಾದ ಅಧಿಕಾರಿಗಳು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೆಲವೊಂದು ನಿರ್ಣಯಗಳನ್ನು ತೆಗೆದುಕೊಂಡು ಟಾಸ್ಕ್ ಫೋರ್ಸ್ ಸಭೆಯಲ್ಲಿ ಹೇಳಲಾಗದೆ ಸೈಲೆಂಟ್ ಆದ ಘಟನೆ ಕಂಡು ಬಂತು.
ಬಸವಾನಿ ಗ್ರಾಮಪಂಚಾಯಿತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಗ್ರಾಮಪಂಚಾಯಿತಿ ಸದಸ್ಯರು ಬೇಡ ಎಂದು ನಿರ್ಣಯ ಮಾಡಿದ್ದಾರೆ ಎಂಬ ವಿಷಯ ಅಲ್ಲಿನ ಪಿಡಿಓ ಹೇಳಿದಕ್ಕೆ ಶಾಸಕರು ಗರಂ ಆದರು.
ಈ ಬಗ್ಗೆ ಮಾತನಾಡಿದ ಅವರು, ಜನರಿಗೆ ಶುದ್ಧ ಕುಡಿಯುವ ನೀರು ಕೊಡಲು 360 ಕೋಟಿ ಯೋಜನೆಯಲ್ಲಿ ಬಹುಗ್ರಾಮ ಕುಡಿಯುವ ಯೋಜನೆ ತಂದರೆ ಬೇಡ ಎನ್ನುವುದಾದರೆ ಜನರಿಗೆ ಸದಸ್ಯರೇ ಕುಡಿಯುವ ನೀರನ್ನು ಕೊಡಲು ಹೇಳಿ ಎಂದ ಅವರು, ನಿಮ್ಮನ್ನು ಇಟ್ಟುಕೊಂಡು ಕೆಲಸ ಮಾಡಲು ಆಗುವುದಿಲ್ಲ. ನಿಮ್ಮನೆಲ್ಲಾ ಬದಲಾವಣೆ ಮಾಡಬೇಕು. ಇಲ್ಲದಿದ್ದರೆ ಜನರಿಗೆ ಈ ಬಾರಿ ಕುಡಿಯುವ ನೀರು ಕೊಡಲು ಅಸಾಧ್ಯ ಎಂದು ಗರಂ ಆದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜಕ್ಕಣ್ಣ ಗೌಡ ಸೇರಿದಂತೆ ಅನೇಕ ಅದಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
MUST WATCH
ಹೊಸ ಸೇರ್ಪಡೆ
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.