Theerthahalli: ಯುವಕನಿಗೆ ಹಲ್ಲೆ ;ತೀವ್ರ ಗಾಯ
Team Udayavani, Aug 28, 2023, 11:38 AM IST
ತೀರ್ಥಹಳ್ಳಿ: ತಾಲೂಕು ಕೈಮರ ಸಮೀಪ ನಿನ್ನೆ ಮುಸ್ಸಂಜೆ ಹೊತ್ತಿನಲ್ಲಿ ರಸ್ತೆ ದಾಟುತ್ತಿದ್ದ ಯುವಕನೊಬ್ಬನ ಮೇಲೆ ಎರಡು ವಾಹನದಲ್ಲಿದ್ದವರು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಘಟನೆಯಲ್ಲಿ ಸಚಿನ್ ಎಂಬವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಪಟ್ಟಣದ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲ್ಮನೆ ಸಮೀಪದಲ್ಲಿ ಕೋಳಿ ಫಾರಂಗೆ ಹೋಗಲು ಸಚಿನ್ ರಸ್ತೆ ದಾಟುತ್ತಿದ್ದರು. ಈ ವೇಳೆ ಅದೇ ಮಾರ್ಗವಾಗಿ ಜೀಪೊಂದು ಅಲ್ಲಿಗೆ ಬಂದಿದ್ದು, ಅವರಿಗೆ ತಾನು ರಸ್ತೆ ದಾಟುತ್ತಿರುವುದು ಗೊತ್ತಾಗಲಿ ಎಂದು ಸಚಿನ್ ಕೈ ಅಡ್ಡ ತೋರಿಸಿದ್ಧಾರೆ. ಸ್ಥಳೀಯರು ಹೇಳುವಂತೆ ನಡೆದಿದ್ದುಇಷ್ಟು.
ಇದೇ ವಿಚಾರಕ್ಕೆ ಜೀಪ್ ನಿಲ್ಲಿಸಿ, ಅದರಲ್ಲಿದ್ದ ಯುವಕರು, ಸಚಿನ್ನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ನೆಕ್ಸಾ ಕಾರಿನಲ್ಲಿದ್ದವರು ಕೂಡ ಸಚಿನ್ಗೆ ಹಲ್ಲೆ ಮಾಡಿದ್ದಾರೆ. ಎರಡು ವಾಹನಗಳಲ್ಲಿದ್ದವರು ಒಂದೇ ಕಡೆಯವರು ಎನ್ನಲಾಗಿದ್ದು, ಇವರು ಕುಡಿದ ಮತ್ತಿನಲ್ಲಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹಲ್ಲೆ ಮಾಡಿದವರು ನೆರೆಯ ಜಿಲ್ಲೆಯವರು ಎಂದು ಹೇಳಲಾಗುತ್ತಿದ್ದು, ಹಲ್ಲೆ ಮಾಡಿದವರ ಪೈಕಿ ಹೆಣ್ಣುಮಕ್ಕಳು ಸಹ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆ ಬೆನ್ನಲ್ಲೆ ಆಕ್ರೋಶಗೊಂಡ ಸ್ಥಳೀಯರು ತೀರ್ಥಹಳ್ಳಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣವೇ ಅಲರ್ಟ್ ಆದ ಪೊಲೀಸರು ಹಲ್ಲೆ ಮಾಡಿದವರಿದ್ದ ವಾಹನಗಳನ್ನು ಟ್ರೇಸ್ ಮಾಡಿ ಅಡ್ಡಗಟ್ಟಿ ಸ್ಟೇಷನ್ಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.