![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 15, 2023, 1:10 PM IST
ತೀರ್ಥಹಳ್ಳಿ: ಮುಂಬರುವ ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಎಲ್ಲರೂ ಸಹಬಾಳ್ವೆಯಿಂದ ಮತ್ತು ವಿಜೃಂಭಣೆಯಿಂದ ಆಚರಿಸೋಣ ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಿ ಕೆಲಸ ಮಾಡೋಣ ಎಂದು ಡಿವೈಎಸ್ ಪಿ ಗಜಾನನ ವಾಮನ ಸುತಾರ ಹೇಳಿದರು.
ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಸೆ.14ರ ಗುರುವಾರ ನಡೆದ ವಿವಿಧ ಗಣಪತಿ ಸಂಘಟನಾ ಕಮಿಟಿಯವರು ಮತ್ತು ಮುಖಂಡರು ಸಾರ್ವಜನಿಕ ಸಭೆ ನಡೆಸಿ ಮಾತನಾಡಿ, ಹಬ್ಬಗಳು ವ್ಯವಸ್ಥಿತವಾಗಿ ನಡೆಯುವಲ್ಲಿ ಹಬ್ಬದ ಆಯೋಜಕರ, ಹಿರಿಯರ ಮತ್ತು ಮುಖಂಡರ ಜವಾಬ್ದಾರಿ ಪ್ರಮುಖವಾಗಿರುತ್ತದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಬ್ಬವನ್ನು ಆಚರಿಸುವಲ್ಲಿ ಆಯೋಜಕರು ಮತ್ತು ಮುಖಂಡರು ಮುಖ್ಯ ಜವಾಬ್ದಾರಿ ನಿಭಾಯಿಸಬೇಕಿರುತ್ತದೆ ಎಂದರು.
ಸಾರ್ವಜನಿಕರ ಹಿತಾಸಕ್ತಿಯಿಂದ ಹಬ್ಬದ ಆಚರಣೆ ಮತ್ತು ಮೆರವಣಿಗೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆಯುವ ಕಾರ್ಯವನ್ನು ಸುಲಭ ಮಾಡುವ ಹಿನ್ನೆಲೆ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತಂದಿದ್ದು, ತೀರ್ಥಹಳ್ಳಿಯ ತಾಲೂಕು ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆಯು ಕಾರ್ಯ ನಿರ್ವಹಿಸುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದರು.
ಈ ಸಂದರ್ಭದಲ್ಲ ತಹಶೀಲ್ದಾರ್ ಲಿಂಗರಾಜ್, ಅಶ್ವತ್ ಗೌಡ, ಪ.ಪಂ ಅಧ್ಯಕ್ಷ ರಹಮತುಲ್ಲ ಅಸಾದಿ ಸೇರಿ ಹಲವರು ಉಪಸ್ಥಿತರಿದ್ದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.