ಅಭಿವೃದ್ಧಿಗೆ ಪ್ರಯತ್ನಿಸಿದ ತೃಪ್ತಿ ಇದೆ
Team Udayavani, Jun 16, 2018, 12:08 PM IST
ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯರಾಗಿ ಕೈಗೊಂಡ ಕಾರ್ಯ ಸಂಪೂರ್ಣ ತೃಪ್ತಿ ತರದಿದ್ದರೂ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಪ್ರಯತ್ನ ನಡೆಸಿರುವ ಅಲ್ಪ ತೃಪ್ತಿ ಇದೆ ಎಂದು ವಿಧಾನಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿದ್ದ ತಮ್ಮನ್ನು ಗುರುತಿಸಿ ಪಕ್ಷ ಹಲವು ಜವಾಬ್ದಾರಿ ನೀಡಿದೆ. ಅದಕ್ಕೆ ಅಭಾರಿಯಾಗಿದ್ದೇನೆ. 2012ರಲ್ಲಿ ತಮ್ಮನ್ನು ವಿಧಾನ ಪರಿಷತ್‌ಗೆ ನೇಮಕ ಮಾಡಿತು. 6 ವರ್ಷದ ಅವಧಿಯಲ್ಲಿ ತಮ್ಮ ಅಧಿಕಾರದ ಇತಿಮಿತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದೇನೆ.
ಜನತೆಗೆ ಸೌಕರ್ಯ ದೊರಕಿಸಿಕೊಡುವಲ್ಲಿ ಪ್ರಯತ್ನಪಟ್ಟಿದ್ದೇನೆ. ಅದರಲ್ಲಿ ಸಾಕಷ್ಟು ಸಫಲನಾಗಿದ್ದೇನೆ ಎಂದರು. ಕಳೆದ 6 ವರ್ಷ ಅವಧಿಯಲ್ಲಿ ಸುಮಾರು 10.5 ಕೋಟಿ ರೂ. ಅನುದಾನ ಸರ್ಕಾರದಿಂದ ಬಂದಿದೆ. ಬಂದಂತಹ ಅನುದಾನವನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಿದ್ದೇನೆ. ಕೈಗೊಂಡ ಬಹುತೇಕ ಎಲ್ಲ ಕಾಮಗಾರಿಗಳು
ಪೂರ್ಣಗೊಂಡಿವೆ ಎಂದು ತಿಳಿಸಿದರು.
ಕುಡಿಯುವ ನೀರಿಗೆ 1 ಕೋಟಿ ರೂ., ಸಮುದಾಯ ಭವನಕ್ಕೆ 2.5 ಕೋಟಿ ರೂ., ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ 1 ಕೋಟಿ ರೂ., ಶಾಲಾ ಕೊಠಡಿಗೆ 2 ಕೋಟಿ ರೂ., ಶಾಸಕರ ಅನುದಾನದಲ್ಲಿ ನೀಡಲಾಗಿದೆ. ಸುಮಾರು 40 ಲಕ್ಷ
ರೂ. ವೆಚ್ಚದಲ್ಲಿ ಉಂಬ್ಲೆಬೈಲು ಗ್ರಾಮಕ್ಕೆ ಕುಡಿಯುವ ನೀರಿನ ಸೌಕರ್ಯ ದೊರಕಿಸಿಕೊಟ್ಟಿದ್ದು, ತಮಗೆ ಸಮಾಧಾನ ತಂದಂತಹ ಕಾಮಗಾರಿಗಳಲ್ಲೊಂದಾಗಿದೆ. ಜೊತೆಗೆ ಮಂಡೇನಕೊಪ್ಪ ಗ್ರಾಮಕ್ಕೂ ಕುಡಿಯುವ ನೀರಿನ ಸೌಕರ್ಯ
ದೊರಕಿಸಿಕೊಟ್ಟಿದ್ದೇನೆ ಎಂದರು.
ತಮ್ಮ ಅವಧಿಯಲ್ಲಿ ಶ್ರೀರಾಮನಗರದಲ್ಲಿ ಮಾದರಿ ಅಂಗನವಾಡಿ ನಿರ್ಮಿಸಿಕೊಡಲು ಸಾಧ್ಯವಾಗಿದೆ. ಬೈಪಾಸ್ ಸಮೀಪದ ಹಕ್ಕಿಪಿಕ್ಕಿ ಜನಾಂಗ ವಾಸಿಸುತ್ತಿರುವ ಸ್ಥಳಕ್ಕೆ ಹೈಮಾಸ್ಕ್ ದೀಪ, ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿಕೊಡಲಾಗಿದೆ.
ಹೊಸಹಳ್ಳಿಯಲ್ಲಿ ಸುಮಾರು 30 ಲಕ್ಷ ರೂ.ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣಗೊಂಡಿದೆ. ಇನ್ನು 15 ದಿನದಲ್ಲಿ ಅದರ ಉದ್ಘಾಟನೆ ನೆರವೇರಲಿದೆ. ವಿಕಲಚೇತನರಿಗೆ ಸೌಕರ್ಯ ದೊರಕಿಸಿಕೊಟ್ಟಿದ್ದೇನೆ. ಅಗಸವಳ್ಳಿ ಗ್ರಾಪಂ ವ್ಯಾಪ್ತಿಯ ರಾಮೇನಕೊಪ್ಪ ಅತ್ಯಂತ ಹಿಂದುಳಿದ ಗ್ರಾಮವಾಗಿತ್ತು. ಅಲ್ಲಿ ಮೂಲಸೌಕರ್ಯ ಕಲ್ಪಿಸಲು 1 ಕೋಟಿ ರೂ. ಅನುದಾನದಲ್ಲಿ ವಿವಿಧ ಕಾಮಗಾರಿ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಪ್ರಮುಖರಾದ ಗಿರೀಶ್ ಪಟೇಲ್, ಎಸ್. ದತ್ತಾತ್ರಿ, ಬಿಳಕಿ ಕೃಷ್ಣಮೂರ್ತಿ, ಡಿ.ಎಸ್. ಅರುಣ್, ಎಸ್.ಎನ್. ಚನ್ನಬಸಪ್ಪ, ಎನ್.ಜೆ. ರಾಜಶೇಖರ್, ಎಸ್. ಜ್ಞಾನೇಶ್ವರ್ ಹಿರಣ್ಣಯ್ಯ ಮತ್ತಿತರರು ಇದ್ದರು.
ಕಳೆದ ಹಲವು ವರ್ಷಗಳಿಂದ ಸಂಘಟನೆಯಲ್ಲಿ ತೊಡಗಿಕೊಂಡಿದ್ದೇನೆ. ತಮ್ಮ ಜೀವನದಲ್ಲಿ ಯಾವುದೇ ಸ್ಥಾನಮಾನಕ್ಕೆ ಅರ್ಜಿ ಸಲ್ಲಿಸಿಲ್ಲ. ಪಕ್ಷ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಆದರೆ ಕಳೆದ ಒಂದೂವರೆ ವರ್ಷದಿಂದ ಈಚೆಗೆ ಪಕ್ಷದಲ್ಲಿ ಯಾವುದೇ ಜವಾಬ್ದಾರಿ ನೀಡದಿರುವುದು ತಮ್ಮ ಮನಸ್ಸಿಗೆ ನೋವುಂಟು ಮಾಡಿದೆ. ತಮಗೆ ಸೂಕ್ತ ಜವಾಬ್ದಾರಿ ನೀಡಿದರೆ ನಿಭಾಯಿಸುತ್ತೇನೆ. ಇಲ್ಲವಾದಲ್ಲಿ ಹಿಂದಿನಂತೆ ಸಂಘದ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತೇನೆ.
ಎಂ.ಬಿ. ಭಾನುಪ್ರಕಾಶ್, ವಿಧಾನಸಭಾ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.