ಶಿವಮೊಗ್ಗ: ಸಿನಿಮೀಯ ಶೈಲಿಯಲ್ಲಿ ದರೋಡೆಕೋರರನ್ನು ಬೆನ್ನಟ್ಟಿ ಹಿಡಿದ ಯುವಕರು
Team Udayavani, Jul 3, 2021, 12:34 PM IST
ಶಿವಮೊಗ್ಗ: ದರೋಡೆ ಮಾಡಿ ಓಡಿ ಹೋಗುತ್ತಿದ್ದವರನ್ನು ಬೆನ್ನಟ್ಟಿದ ಯುವಕರನ್ನು ಅವರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಿನಿಮೀಯ ಶೈಲಿಯ ಘಟನೆ ನಗರದ ಕುವೆಂಪು ನಗರದಲ್ಲಿ ನಡೆದಿದೆ.
ಶಿವಮೊಗ್ಗದ ಕುವೆಂಪು ರಸ್ತೆಯ ನಂದಿ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಚೇಸ್ ಮಾಡಿದ ಯುವಕರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಹಾಡಹಗಲೇ ದರೋಡೆಗೆ ಇಳಿದ ಇಬ್ಬರು ಖದೀಮರು ಸ್ಮಾರ್ಟ್ ಸಿಟಿ ಕಾಮಗಾರಿ ಮಾಡುತ್ತಿದ್ದವರಿಂದ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದರು. ಅಷ್ಟೇ ಅಲ್ಲದೆ ಮೊಪೈಡ್ ಬೈಕ್ನಲ್ಲಿ ಹೋಗುತ್ತಿದ್ದ ಅಪ್ಪ-ಮಗನಿಗೆ ಚಾಕು ತೋರಿಸಿ ಅವರಿಂದಲೂ ಹಣ ಕಸಿದು ಬೈಕ್ ನಲ್ಲಿ ಪರಾರಿಯಾಗಲು ಯತ್ನಿಸಿದರು.
ಇದನ್ನೂ ಓದಿ:ಹೆಣ್ಣು ಮಗುವೆಂಬ ಕಾರಣಕ್ಕೆ ನವಜಾತ ಶಿಶುವಿಗೆ ನೇಣುಬಿಗಿದು ಶೌಚಾಲಯದ ಕಿಟಕಿಗೆ ಕಟ್ಟಿದ ಪಾಪಿ!
ಇದನ್ನು ಗಮನಿಸಿದ ಮನೋಜ್ ಹಾಗೂ ರಾಜೇಶ್ ಎಂಬಿಬ್ಬರು ಯುವಕರು ದರೋಡೆ ಮಾಡಿ ಓಡುತ್ತಿದ್ದವರನ್ನು ಬೈಕ್ ನಲ್ಲೇ ಬೆನ್ನತ್ತಿದ್ದರು. ಈ ವೇಳೆ ಕಳ್ಳರು ಶರಾವತಿ ನಗರದಲ್ಲಿ ಬೈಕ್ ಬಿಟ್ಟು ಮನೆಯೊಂದಕ್ಕೆ ನುಗ್ಗಿದ್ದರು. ಮನೆ ಒಳಗೆ ಹೋದ ಮನೋಜ್ ಹಾಗೂ ರಾಜೇಶ್ ಕಳ್ಳರಿಬ್ಬರುನ್ನು ಹಿಡಿಯಲು ಯತ್ನಿಸಿದಾಗ ಓರ್ವ ಯುವಕ ಪರಾರಿಯಾಗಿದ್ದು, ಓರ್ವನನ್ನು ಸೆರೆ ಹಿಡಿದಿದ್ದಾರೆ.
ಈ ಇಬ್ಬರು ಆರೋಪಿಗಳು ಗಾಂಜಾ ಮತ್ತಿನಲ್ಲಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಓರ್ವನನ್ನು ಯುವಕರು ದೊಡ್ಡಪೇಟೆ ಪೊಲೀಸರ ಸುಪರ್ದಿಗೆ ನೀಡಲಾಗಿದೆ. ಪೊಲೀಸರು ಮತ್ತೋರ್ವನ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಯುವಕರ ಧೈರ್ಯ ಮತ್ತು ಸಮಯೋಚಿತ ಕೆಲಸಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.