Thirthahalli; ತನ್ನ ಉತ್ತಮ ಸಂಸ್ಕಾರಯುತ ನಡತೆಯಿಂದ ಮೆಚ್ಚುಗೆಗೆ ಪಾತ್ರಳಾದ ಬಾಲಕಿ
Team Udayavani, Jan 12, 2024, 4:47 PM IST
ತೀರ್ಥಹಳ್ಳಿ: ಪುರಾಣ ಪ್ರಸಿದ್ಧ ಐತಿಹಾಸಿಕ ಹಿನ್ನಲೆಯಿರುವ ಶ್ರೀ ರಾಮೇಶ್ವರ ದೇವಸ್ಥಾನದ ಎಳ್ಳಮಾವಾಸ್ಯೆ ಜಾತ್ರೆಯ ಎರಡನೇ ದಿನವಾದ ಶುಕ್ರವಾರ ಶ್ರೀ ರಾಮೇಶ್ವರ ದೇವರ ರಥೋತ್ಸವ ನಡೆಯಿತು.
ಈ ರಥೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ರಥಕ್ಕೆ ಹಣ್ಣುಕಾಯಿ ಮಾಡಿಸುವುದರ ಮುಖಾಂತರ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡಿದ್ದರು. ಮಧ್ಯಾಹ್ನ ಅನ್ನ ದಾಸೋಹ ಮಿತ್ರವೃಂದದಿಂದ ಪಾಲ್ಗೊಂಡ ಎಲ್ಲಾ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಿಸಲಾಯಿತು. ಈ ಅನ್ನ ಪ್ರಸಾದವನ್ನು ಭಕ್ತರು ಸರದಿ ಸಾಲಿನಲ್ಲಿ ನಿಂತು ಶಿಸ್ತು ಬದ್ಧವಾಗಿ ಸ್ವೀಕರಿಸಿದರು. ಈ ಭೋಜನ ಪ್ರಸಾದ ಸ್ವೀಕರಿಸುವ ಸಂದರ್ಭದಲ್ಲಿ ಇಂದಿರಾನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಂಹಿತಾ ಎಂಬ ಪುಟ್ಟ ವಿದ್ಯಾರ್ಥಿನಿಯೋರ್ವಳು ಜನಸಂದಣಿಯಲ್ಲಿ ಕೈತಪ್ಪಿ ಬಿದ್ದ ಅನ್ನ ಪ್ರಸಾದವನ್ನು ಅಲ್ಲೇ ಬಿಡದೆ ಅಷ್ಟೊಂದು ಜನರ ನಡುವೆಯೂ ಸ್ವಚ್ಛತೆಯೆಡೆಗೆ ವಿಶೇಷ ಗಮನಹರಿಸಿ ಸಂಪೂರ್ಣವಾಗಿ ತೆಗೆದು ಸ್ವಚ್ಛ ಮಾಡಿದಳು.
ಈ ದೃಶ್ಯವನ್ನು ನೋಡಿದಂತಹ ಅಲ್ಲಿ ನೆರೆದಂತ ಅನೇಕ ಭಕ್ತಾದಿಗಳು ಆಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ ಆಕೆಯ ಉತ್ತಮ ಸಂಸ್ಕಾರಯುತ ನಡತೆಯನ್ನು ನೋಡಿ ಸಂತಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.